ಇತ್ತೀಚಿಗಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್ಗೆ ಕಾಲಿಟ್ಟಿರುವ ನಿತೀಶ್ ಕುಮಾರ್ ರೆಡ್ಡಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ನಿತೀಶ್ ಇದುವರೆಗೆ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಿರುವುದರಿಂದ ಅವರನ್ನು ಬಿಸಿಸಿಐನ ಕೇಂದ್ರ ಒಪ್ಪಂದದಲ್ಲಿ ಸಿ-ಗ್ರೇಡ್‌ಗೆ ಸೇರಿಸಲಾಗಿದೆ. ಈ ವಿಭಾಗದ ಆಟಗಾರರು ವಾರ್ಷಿಕ 1 ಕೋಟಿ ರೂ. ವೇತನ ಪಡೆಯಲಿದ್ದಾರೆ ಆದಾಗ್ಯೂ, ರೆಡ್ಡಿ ಅವರ ಅತ್ಯುತ್ತಮ ಪ್ರದರ್ಶನವನ್ನು ಪರಿಗಣಿಸಿ, ಬಿಸಿಸಿಐ ಅವರ ಗ್ರೇಡ್ ಅನ್ನು ಹೆಚ್ಚಿಸಬಹುದು.