IND vs WI 2nd Test: ಇಂಡೋ-ವಿಂಡೀಸ್ ಪಂದ್ಯದ ಮಧ್ಯೆ ಡ್ರೆಸ್ಸಿಂಗ್ ರೂಮ್​ನಲ್ಲಿ ಕಾಣಿಸಿಕೊಂಡ ಆಯ್ಕೆ ಸಮಿತಿ ಅಧ್ಯಕ್ಷ

Ajit Agarkar: ಕೆಲ ದಿನಗಳ ಕಾಲ ಅಜಿತ್ ಅಗರ್ಕರ್ ವೆಸ್ಟ್ ಇಂಡೀಸ್​ನಲ್ಲೇ ಇರಲಿದ್ದು, ಅವರು ಭಾರತ ತಂಡದೊಂದಿಗೆ ಅನೇಕ ಚರ್ಚೆಗಳನ್ನು ನಡೆಸಲಿದ್ದಾರೆ ಎನ್ನಲಾಗಿದೆ. ವೆಸ್ಟ್ ಇಂಡೀಸ್ ಪ್ರವಾಸದ ಬಳಿಕ ಭಾರತದ ವೈಟ್-ಬಾಲ್ ಸರಣಿಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

Vinay Bhat
|

Updated on: Jul 23, 2023 | 10:20 AM

ಇತ್ತೀಚೆಗಷ್ಟೆ ಪುರುಷರ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಅಜಿತ್ ಅಗರ್ಕರ್ ಅವರು ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯುತ್ತಿರುವ ಭಾರತ- ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ ಡ್ರೆಸ್ಸಿಗ್ ರೂಮ್​ನಲ್ಲಿ ಕಾಣಿಸಿಕೊಂಡಿದ್ದಾರೆ.

1 / 7
ಅಗರ್ಕರ್ ಅವರು ಭಾರತದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅವರೊಂದಿಗೆ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾದ ಬಳಿಕ ಅಗರ್ಕರ್ ಅವರ ಮೊದಲ ಸಭೆ ಇದಾಗಿದೆ.

2 / 7
ಕೆಲ ದಿನಗಳ ಕಾಲ ಅಜಿತ್ ಅಗರ್ಕರ್ ವೆಸ್ಟ್ ಇಂಡೀಸ್​ನಲ್ಲೇ ಇರಲಿದ್ದು, ಅವರು ಭಾರತ ತಂಡದೊಂದಿಗೆ ಅನೇಕ ಚರ್ಚೆಗಳನ್ನು ನಡೆಸಲಿದ್ದಾರೆ ಎನ್ನಲಾಗಿದೆ. ವೆಸ್ಟ್ ಇಂಡೀಸ್ ಪ್ರವಾಸದ ಬಳಿಕ ಭಾರತದ ವೈಟ್-ಬಾಲ್ ಸರಣಿಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

3 / 7
ಇದರ ಜೊತೆಗೆ ಇದೇ ವರ್ಷ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ 2023 ಮತ್ತು ಮುಂದಿನ ವರ್ಷ ನಡೆಯಲಿರುವ T20 ವಿಶ್ವಕಪ್‌ಗಾಗಿ ಕಾರ್ಯತಂತ್ರವನ್ನು ರೂಪಿಸುವ ಬಗ್ಗೆ ಮಾತುಕತೆ ನಡೆಯಲಿದೆ.

4 / 7
ಜಸ್ಪ್ರೀತ್ ಬುಮ್ರಾ ಅವರ ಫಿಟ್ನೆಸ್, ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರು ಪೂರ್ಣ ಚೇತರಿಕೆಯ ಹಂತದಲ್ಲಿರುವುದರಿಂದ ಭಾರತೀಯ ತಂಡವನ್ನು ಹೇಗೆ ಕಟ್ಟಬೇಕು ಎಂಬ ಬಗ್ಗೆ ಚರ್ಚಿಸಲಿದ್ದಾರೆ.

5 / 7
ಮುಂದಿನ ವರ್ಷ T20 ವಿಶ್ವಕಪ್‌ನಲ್ಲಿ ಪಾಲ್ಗೊಳ್ಳುವ ಕುರಿತು ಟೀಮ್ ಇಂಡಿಯಾದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರೊಂದಿಗೆ ಅಜಿತ್ ಅಗರ್ಕರ್ ಹೆಚ್ಚುವರಿ ಸಂಭಾಷಣೆಗಳನ್ನು ನಡೆಸಲಿದ್ದಾರೆ. ಮೂಲಗಳ ಪ್ರಕಾರ ಕೊಹ್ಲಿ-ರೋಹಿತ್​ರನ್ನು ಇನ್ಮುಂದೆ ಟಿ20 ಗೆ ಪರಿಗಣಿಸುವುದಿಲ್ಲವಂತೆ.

6 / 7
ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ನಡೆದ ವಿಶ್ವಕಪ್ ಬಳಿಕ ಕೊಹ್ಲಿ-ರೋಹಿತ್ ಭಾರತದ T20I ತಂಡದ ಭಾಗವಾಗಿಲ್ಲ. ಸದ್ಯದಲ್ಲಿ ಟೀಮ್ ಇಂಡಿಯಾದ ಟಿ20 ಗೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರಾಗಿ ಆಯ್ಕೆ ಮಾಡುವ ಬಗ್ಗೆಯೂ ಚರ್ಚೆಯಾಗಲಿದೆ.

7 / 7
Follow us
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು

ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ