ಟೆಸ್ಟ್ ಕ್ರಿಕೆಟ್​ಗೆ ಕೊಹ್ಲಿ ಪುನರಾಗಮನ? ಬಿಸಿಸಿಐ ನೀಡಿದ ಸ್ಪಷ್ಟನೆ ಏನು?

Updated on: Nov 30, 2025 | 9:24 PM

Virat Kohli Test Comeback Rumors: ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಶತಕ ಬಾರಿಸಿ ದಾಖಲೆ ನಿರ್ಮಿಸಿದರು. ಇದರ ಬೆನ್ನಲ್ಲೇ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ಮರಳುವ ಬಗ್ಗೆ ವ್ಯಾಪಕ ವದಂತಿಗಳು ಹಬ್ಬಿದ್ದವು. ಕಳಪೆ ಟೆಸ್ಟ್ ಪ್ರದರ್ಶನದ ಹಿನ್ನೆಲೆಯಲ್ಲಿ ಬಿಸಿಸಿಐ ಅವರನ್ನು ಮನವೊಲಿಸಿದೆ ಎಂಬ ಸುದ್ದಿ ವೈರಲ್ ಆಗಿತ್ತು. ಆದರೆ, ಬಿಸಿಸಿಐ ಈ ಎಲ್ಲಾ ವದಂತಿಗಳನ್ನು ಸ್ಪಷ್ಟವಾಗಿ ನಿರಾಕರಿಸಿದೆ. ಕೊಹ್ಲಿ ನಿವೃತ್ತಿ ಹಿಂದೆಗೆದುಕೊಳ್ಳುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದೆ.

1 / 5
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಬಾರಿಸಿದ್ದಾರೆ. 135 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ ಕೊಹ್ಲಿ ತಂಡವನ್ನು 300 ರನ್​ಗಳ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಭರ್ಜರಿ ಶತಕದ ನಡುವೆ ವಿರಾಟ್ ಕೊಹ್ಲಿಯ ಬಗ್ಗೆ ಮತ್ತೊಂದು ವದಂತಿ ವೇಗವಾಗಿ ಎಲ್ಲೆಡೆ ಹಬ್ಬುತ್ತಿದೆ. ಇದೀಗ ಆ ವದಂತಿಯ ಬಗ್ಗೆ ಇದೇ ಮೊದಲ ಬಾರಿಗೆ ಬಿಸಿಸಿಐ ಮೌನ ಮುರಿದಿದೆ.

2 / 5
ವಾಸ್ತವವಾಗಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಭಾರತ ಟೆಸ್ಟ್ ತಂಡದ ಪ್ರದರ್ಶನ ತೀರ ಕಳಪೆಯಾಗಿದೆ. ಟೀಂ ಇಂಡಿಯಾವನ್ನು ಅವರ ತವರು ನೆಲದಲ್ಲಿ ಮಣಿಸುವುದು ಅಸಾಧ್ಯವೆಂದು ಹೇಳುತ್ತಿದ್ದ ಸಮಯದಲ್ಲೇ ಎರಡು ತಂಡಗಳು ಭಾರತವನ್ನು ವೈಟ್ ವಾಶ್ ಮಾಡಿವೆ. ಹೀಗಾಗಿ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ನಿರ್ಧಾರವನ್ನು ಹಿಂಪಡೆಯಬೇಕು ಎಂಬ ಕೂಗು ಜೋರಾಗಿದೆ.

3 / 5
ದಕ್ಷಿಣ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಸೋತ ಬಳಿಕವಂತೂ ಕೊಹ್ಲಿ ಭಾರತ ಟೆಸ್ಟ್ ತಂಡದಲ್ಲಿ ಮತ್ತೊಮ್ಮೆ ಕಾಣಿಸಿಕೊಳ್ಳಲಿದ್ದಾರೆ. ಕೊಹ್ಲಿಯ ಮನವೊಲಿಸುವುಲ್ಲಿ ಬಿಸಿಸಿಐ ಯಶಸ್ವಿಯಾಗಿದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಆದರೆ ಇದೀಗ ಆ ವದಂತಿಗಳಿಗೆ ತೆರೆ ಎಳೆದಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ವಿರಾಟ್ ಕೊಹ್ಲಿ ಅವರನ್ನು ನಿವೃತ್ತಿಯನ್ನು ಹಿಂತೆಗೆದುಕೊಳ್ಳುವಂತೆ ಕೇಳಿಲ್ಲ ಅಥವಾ ಅದು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

4 / 5
ವಿರಾಟ್ ಕೊಹ್ಲಿ ಬಗ್ಗೆ ಏನೇ ಹೇಳಲಾಗುತ್ತದೋ ಅದು ಕೇವಲ ವದಂತಿ. ಈ ಬಗ್ಗೆ ವಿರಾಟ್ ಕೊಹ್ಲಿ ಜೊತೆ ಯಾವುದೇ ಚರ್ಚೆ ನಡೆದಿಲ್ಲ. ಈ ವದಂತಿಗಳಿಗೆ ಯಾವುದೇ ನಂಬಿಕೆ ಇಡಬೇಡಿ. ಈ ರೀತಿಯ ಏನೂ ನಡೆದಿಲ್ಲ ಎಂದು ಆಜ್ ತಕ್ ಜೊತೆ ಮಾತನಾಡಿದ ಸೈಕಿಯಾ ಹೇಳಿದ್ದಾರೆ.

5 / 5
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ಮರಳಲಿ ಅಥವಾ ಬಿಡಲಿ, ಅವರು ಆಡುವ ಪ್ರತಿಯೊಂದು ಸ್ವರೂಪದಲ್ಲೂ ಈಗಾಗಲೇ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ವಿರಾಟ್ ಕೊಹ್ಲಿ ರಾಂಚಿಯಲ್ಲಿ ತಮ್ಮ 52 ನೇ ಏಕದಿನ ಶತಕವನ್ನು ಬಾರಿಸಿದರು. ಈ ಶತಕದೊಂದಿಗೆ, ಅವರು ಸಚಿನ್ ತೆಂಡೂಲ್ಕರ್ ಅವರ ಒಂದೇ ಸ್ವರೂಪದಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ದಾಖಲೆಯನ್ನು ಮುರಿದರು.