
ಟೆಸ್ಟ್ ಕ್ರಿಕೆಟ್‌ನಲ್ಲಿ ಆಸಕ್ತಿ ಹೆಚ್ಚಿಸಲು ಭಾರತೀಯ ಆಟಗಾರರಿಗೆ ಬಂಪರ್ ಆಫರ್ ಅನ್ನು ಘೋಷಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಿದ್ಧವಾಗಿದೆ. ಆಟಗಾರರನ್ನು ಆಕರ್ಷಿಸಲು ಮಂಡಳಿಯು ಆರ್ಥಿಕ ಪ್ರೋತ್ಸಾಹವನ್ನು ನೀಡಲು ಮುಂದಾಗಿದೆ. ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಈಗಾಗಲೇ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರೊಂದಿಗೆ ಈ ವಿಷಯವನ್ನು ಚರ್ಚಿಸುತ್ತಿದ್ದಾರೆ.

ಬಿಸಿಸಿಐ ತರಲಿರುವ ಹೊಸ ನಿಯಮದ ಪ್ರಕಾರ, ಆಟಗಾರ ವರ್ಷವಿಡೀ ಎಲ್ಲಾ ರಣಜಿ ಪಂದ್ಯಗಳನ್ನು ಆಡಿದರೆ ಅವರಿಗೆ ರೂ. 75 ಲಕ್ಷ, ಅದೇ ಆಟಗಾರ ಒಂದು ವರ್ಷದಲ್ಲಿ ಎಲ್ಲಾ ಅಂತರಾಷ್ಟ್ರೀಯ ಟೆಸ್ಟ್ ಪಂದ್ಯಗಳನ್ನು ಆಡಿದರೆ ಬರೋಬ್ಬರಿ 15 ಕೋಟಿ ರೂಪಾಯಿ ನೀಡಲು ಮುಂದಾಗಿದೆಯಂತೆ. ಈ ಮೂಲಕ ಟೆಸ್ಟ್ ಕ್ರಿಕೆಟ್ನ ಜನಪ್ರಿಯತೆಯನ್ನು ಹೆಚ್ಚಿಸುವುದು ಬಿಸಿಸಿಐ ಗುರಿಯಾಗಿದೆ.

ಅಲ್ಲದೆ, ಆಟಗಾರರ ಇಂಡಿಯನ್ ಪ್ರೀಮಿಯರ್ ಲೀಗ್ ಒಪ್ಪಂದಗಳಿಗೆ ಹೋಲಿಸಿದರೆ ಈ ಹಣವನ್ನು ಕಡಿತಗೊಳಿಸಲಾಗುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಗಳು ಭಾವಿಸುತ್ತಾರೆ. ಮತ್ತೊಂದೆಡೆ ಬಿಸಿಸಿಐ 2024-25ರ ಒಪ್ಪಂದದಲ್ಲಿ 30 ಆಟಗಾರರು ಸ್ಥಾನ ಪಡೆದಿದ್ದಾರೆ. ಇದರಿಂದ ಬಿಸಿಸಿಐ ನಿಯಮ ಉಲ್ಲಂಘಿಸಿರುವ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಹೊರಗಿಡಲಾಗಿದೆ.

ಎ+ ಗ್ರೇಡ್ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಇದ್ದಾರೆ. ಅಂತೆಯೆ ಎ ಗ್ರೇಡ್ನಲ್ಲಿ ಆರ್. ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಶುಭ್ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ಸ್ಥಾನ ಪಡೆದುಕೊಂಡಿದ್ದಾರೆ. ಬಿ ಗ್ರೇಡ್ - ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಯಶಸ್ವಿ ಜೈಸ್ವಾಲ್.

ಸಿ ಗ್ರೇಡ್ನಲ್ಲಿ ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್, ಪ್ರಸೀದ್ ಕೃಷ್ಣ, ಅವೇಶ್ ಖಾನ್, ರಜತ್ ಪಾಟಿದಾರ್ ಇದ್ದಾರೆ.