- Kannada News Photo gallery Cricket photos BCCI has set a January 27 deadline for RCB to finalize home venues
RCB ಫ್ರಾಂಚೈಸಿಗೆ ಗಡುವು ನೀಡಿದ BCCI
IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿ ಬಿ) ತಂಡವು ಮುಂದಿನ ಸೀಸನ್ನಲ್ಲಿ ಯಾವ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದೆ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿಯೇ ಇದೀಗ ಬಿಸಿಸಿಐ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಆರ್ಸಿಬಿ ಫ್ರಾಂಚೈಸಿಗೆ ತಿಳಿಸಿದೆ.
Updated on: Jan 21, 2026 | 10:53 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ದೊರೆತಿಲ್ಲ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿರ್ಬಂಧ.

ಐಪಿಎಲ್ 2025ರ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರ್ಘಟನೆಯ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ನಿಷೇಧಕ್ಕೊಳಪಡಿಸಲಾಗಿದೆ. ಇದೀಗ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯವಾಡಲು ಕರ್ನಾಟಕ ಸರ್ಕಾರ ಕೆಲ ಷರತ್ತುಗಳೊಂದಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಇದಾಗ್ಯೂ ಆರ್ಸಿಬಿ ಫ್ರಾಂಚೈಸಿ ಬೆಂಗಳೂರಿನಲ್ಲಿ ಕಣಕ್ಕಿಳಿಯುವುದನ್ನು ಇನ್ನೂ ಸಹ ಖಚಿತಪಡಿಸಿಲ್ಲ. ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರ ಫ್ರಾಂಚೈಸಿಗೆ ಬಿಸಿಸಿಐ ತಿಳಿಸಿದೆ. ಐಪಿಎಲ್ ವೇಳಾಪಟ್ಟಿ ಸಿದ್ಧಪಡಿಸುವುದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ಹೋಮ್ ಗ್ರೌಂಡ್ ಕ್ರಿಕೆಟ್ ಮಂಡಳಿಗಳ ಎನ್ಒಸಿ ಪಡೆಯಬೇಕು.

ಆದರೆ ಆರ್ಸಿಬಿ ಫ್ರಾಂಚೈಸಿಯು ಇನ್ನೂ ಸಹ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದನ್ನು ದೃಢಪಡಿಸಿಲ್ಲ. ಹೀಗಾಗಿ ಜನವರಿ 27 ರೊಳಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತಮ್ಮ ಹೋಮ್ ಗ್ರೌಂಡ್ ಯಾವುದೆಂದು ತಿಳಿಸಬೇಕೆಂದು ಬಿಸಿಸಿಐ ಗಡುವು ವಿಧಿಸಿದೆ. ಅಂದರೆ ಮುಂದಿನ ಮಂಗಳವಾರದೊಳಗೆ ಆರ್ಸಿಬಿ ತನ್ನ ಹೋಮ್ ಗ್ರೌಂಡ್ ಅನ್ನು ಖಚಿತಪಡಿಸಲೇಬೇಕು.

ಈ ಹಿಂದೆ ಆರ್ಸಿಬಿ ಫ್ರಾಂಚೈಸಿಯು ಚಿನ್ನಸ್ವಾಮಿ ಸ್ಟೇಡಿಯಂಗೆ ಪರ್ಯಾಯವಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಹಾಗೂ ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ತನ್ನ ತವರು ಪಂದ್ಯಗಳನ್ನು ಆಡಲು ಚಿಂತಿಸಿದೆ ಎಂದು ವರದಿಯಾಗಿತ್ತು.

ಈ ಹಿಂದೆ ಆರ್ಸಿಬಿ ಫ್ರಾಂಚೈಸಿಯು ಚಿನ್ನಸ್ವಾಮಿ ಸ್ಟೇಡಿಯಂಗೆ ಪರ್ಯಾಯವಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಹಾಗೂ ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ತನ್ನ ತವರು ಪಂದ್ಯಗಳನ್ನು ಆಡಲು ಚಿಂತಿಸಿದೆ ಎಂದು ವರದಿಯಾಗಿತ್ತು.
