IND Squad WI Tour: ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡ ಯಾವಾಗ ಪ್ರಕಟ?: ಇಲ್ಲಿದೆ ನೋಡಿ ಮಾಹಿತಿ

|

Updated on: Jun 17, 2023 | 8:09 AM

India vs West Indies: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡವನ್ನು ಇದೇ ಜೂನ್ 27 ರಂದು ಪ್ರಕಟ ಮಾಡಲಿದೆ. ಪ್ರಮುಖ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್​ಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

1 / 8
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಸೋಲುಂಡ ಬಳಿಕ ಭಾರತ ಕ್ರಿಕೆಟ್ ತಂಡದ ಆಟಗಾರರು ತವರಿಗೆ ಮರಳಿ ವಿಶ್ರಾಂತಿಯಲ್ಲಿದ್ದು ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ.

2 / 8
ಭಾರತ ತಂಡ ತನ್ನ ಮುಂದಿನ ಸರಣಿಯನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಕೆರಿಬಿಯನ್ನರ ನಾಡಿಗೆ ಟೀಮ್ ಇಂಡಿಯಾ ಪ್ರವಾಸ ಬೆಳೆಸಲಿದ್ದು, ಜುಲೈ 12 ರಿಂದ ಎರಡು ಟೆಸ್ಟ್, ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ.

3 / 8
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡವನ್ನು ಇದೇ ಜೂನ್ 27 ರಂದು ಪ್ರಕಟ ಮಾಡಲಿದೆ. ಪ್ರಮುಖ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್​ಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

4 / 8
ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಡಿದ ಬಳಿಕ ವಿಶ್ರಾಂತಿಯ ಮೊರೆ ಹೋಗಲಿದ್ದಾರೆ. ಇವರು ಏಕದಿನ ಮತ್ತು ಟಿ20 ಸರಣಿಗೆ ಇರುವುದಿಲ್ಲ. ಸಿರಾಜ್ ಹಾಗೂ ಶಮಿ ಅವರಿಗೆ ಸಂಪೂರ್ಣ ಪ್ರವಾಸದಿಂದ ವಿಶ್ರಾಂತಿ ನೀಡಲಾಗಿದೆ ಎಂದು ವರದಿ ಆಗಿದೆ.

5 / 8
ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್, ಉಮ್ರಾನ್ ಮಲಿಕ್, ಅರ್ಶ್​ದೀಪ್ ಸಿಂಗ್ ಸೇರಿದಂತೆ ಕೆಲ ಆಟಗಾರರು ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಆಯ್ಕೆ ಆಗಲಿದ್ದಾರಂತೆ. ಇದರಲ್ಲಿ ಜೈಸ್ವಾಲ್ ಹಾಗೂ ಅರ್ಶ್​ದೀಪ್ ಟೆಸ್ಟ್ ತಂಡಕ್ಕೆ ಸೇರ್ಪಡೆ ಆಗಲಿದ್ದಾರೆ ಎಂಬ ಮಾತಿದೆ.

6 / 8
ಟೀಮ್​ ಇಂಡಿಯಾದ ವೆಸ್ಟ್ ಇಂಡೀಸ್‌ ಪ್ರವಾಸವು ಎರಡು ಟೆಸ್ಟ್‌ಗಳೊಂದಿಗೆ ಪ್ರಾರಂಭವಾಗಲಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ಜುಲೈ 12ರಿಂದ 16 ರವರೆಗೆ ಮೊದಲ ಟೆಸ್ಟ್ ಆಯೋಜಿಸಲಾಗಿದೆ. ಅಂತೆಯೆ ಜುಲೈ 20 ರಿಂದ 24 ರವರೆಗೆ ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಎರಡನೇ ಟೆಸ್ಟ್ ನಡೆಯಲಿದೆ.

7 / 8
ನಂತರ ಮೂರು ಏಕದಿನ ಪಂದ್ಯಗಳ ಸರಣಿಯು ನಡೆಯಲಿದೆ. ಜುಲೈ 27 ಮತ್ತು 29 ರಂದು ಮೊದಲ ಮತ್ತು ಎರಡು ಏಕದಿನ ಪಂದ್ಯಗಳು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಹಾಗೂ ಮೂರನೇ ಏಕದಿನ ಪಂದ್ಯ ಆಗಸ್ಟ್ 1 ರಂದು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ಆಯೋಜಿಸಲಾಗಿದೆ.

8 / 8
ಕೊನೆಯದಾಗಿ ಟಿ20 ಸರಣಿಯು ಆರಂಭಗೊಳ್ಳಲಿದ್ದು, ಆಗಸ್ಟ್ 3 ರಂದು ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಮೊದಲ ಪಂದ್ಯವಿದೆ. ನಂತರ ಆಗಸ್ಟ್ 6 ಮತ್ತು 8 ರಂದು ಎರಡು ಮತ್ತು ಮೂರನೇ ಟಿ20, ಆಗಸ್ಟ್ 12 ರಂದು 4ನೇ ಪಂದ್ಯ, 5 ನೇ ಹಾಗೂ ಅಂತಿಮ ಪಂದ್ಯದ ಆ. 13 ರಂದು ಆಡಲಿದೆ.