Hardik Pandya: ಟೆಸ್ಟ್ ಕ್ರಿಕೆಟ್​ಗೆ ಹಾರ್ದಿಕ್ ಪಾಂಡ್ಯ ಕಂಬ್ಯಾಕ್..?

| Updated By: ಝಾಹಿರ್ ಯೂಸುಫ್

Updated on: Jun 14, 2023 | 11:09 PM

Team India: ಪ್ರಸ್ತುತ ಟಿ20 ತಂಡದ ನಾಯಕರಾಗಿರುವ ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಕಾರಣಗಳಿಂದಾಗಿ ಕಳೆದ 5 ವರ್ಷಗಳಿಂದ ಟೆಸ್ಟ್ ಕ್ರಿಕೆಟ್ ಆಡಿಲ್ಲ.

1 / 6
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅದರಲ್ಲೂ ಜುಲೈನಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಏಕದಿನ ಮತ್ತು ಟಿ20 ಸರಣಿಯ ಹೊರತಾಗಿ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನೂ ಆಡಬೇಕಿದೆ.

2 / 6
ಈ ಸರಣಿಗೆ ಹಿರಿಯ ಆಟಗಾರರ ಜಾಗದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅನ್ನು ಗಮನದಲ್ಲಿರಿಸಿ ಹಾರ್ದಿಕ್ ಪಾಂಡ್ಯ ಅವರನ್ನು ಟೆಸ್ಟ್ ತಂಡಕ್ಕೂ ಪರಿಗಣಿಸಬೇಕೆಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

3 / 6
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತೆ ಟೆಸ್ಟ್ ತಂಡಕ್ಕೆ ಮರಳಬೇಕೆಂದು ಬಯಸಿದ್ದು, ಇದಕ್ಕಾಗಿ ಅವರೊಂದಿಗೆ ಚರ್ಚಿಸಲಿದೆ ವರದಿಯಾಗಿದೆ. ಪ್ರಸ್ತುತ ಟಿ20 ತಂಡದ ನಾಯಕರಾಗಿರುವ ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಕಾರಣಗಳಿಂದಾಗಿ ಕಳೆದ 5 ವರ್ಷಗಳಿಂದ ಟೆಸ್ಟ್ ಕ್ರಿಕೆಟ್ ಆಡಿಲ್ಲ.

4 / 6
ಇದೀಗ ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿರುವ ಪಾಂಡ್ಯರನ್ನು ಟೆಸ್ಟ್ ಕ್ರಿಕೆಟ್​ಗೂ ಪರಿಗಣಿಸಲು ಬಿಸಿಸಿಐ ಆಸಕ್ತಿ ಹೊಂದಿದೆ. ಈ ಮೂಲಕ ಬಲಿಷ್ಠ ಆಲ್​ರೌಂಡರ್​ನನ್ನು ತಂಡದಲ್ಲಿರಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸುತ್ತಿದೆ.

5 / 6
ಆದರೆ ಮತ್ತೆ ಟೆಸ್ಟ್ ಕ್ರಿಕೆಟ್ ಆಡಲು ಹಾರ್ದಿಕ್ ಪಾಂಡ್ಯ ಸಿದ್ಧರಾಗಿದ್ದಾರೆಯೇ ಎಂಬುದು ಪ್ರಶ್ನೆ. ಏಕೆಂದರೆ ಪಾಂಡ್ಯ ಕಳೆದ ಕೆಲ ವರ್ಷಗಳಿಂದ ಸಂಪೂರ್ಣ ಫಿಟ್​ನೆಸ್ ಹೊಂದಿದ್ದರೂ ಟೆಸ್ಟ್ ಕ್ರಿಕೆಟ್​ನತ್ತ ಆಸಕ್ತಿ ತೋರಿಸಿಲ್ಲ. ಹೀಗಾಗಿ ಅವರು ದೀರ್ಘಾವಧಿಯ ಕ್ರಿಕೆಟ್​ಗೆ ಮರಳುತ್ತಾರಾ ಎಂಬುದೇ ದೊಡ್ಡ ಪ್ರಶ್ನೆ.

6 / 6
ಒಟ್ಟಿನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಸೋಲಿನ ಬಳಿಕ ಬಿಸಿಸಿಐ ಟೆಸ್ಟ್ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲು ನಿರ್ಧರಿಸಿದ್ದು, ಅದರ ಮೊದಲ ಹೆಜ್ಜೆಯಾಗಿ ಇದೀಗ ಹಾರ್ದಿಕ್ ಪಾಂಡ್ಯರನ್ನು ಮನವೊಲಿಸಲು ಮುಂದಾಗುತ್ತಿದೆ. ಒಂದು ವೇಳೆ ಪಾಂಡ್ಯ ಟೆಸ್ಟ್ ಕ್ರಿಕೆಟ್​ಗೆ ಮರಳಿ ಯಶಸ್ವಿಯಾದರೆ ನಾಯಕತ್ವ ಕೂಡ ಅವರ ಪಾಲಾಗುವ ಸಾಧ್ಯತೆ ಹೆಚ್ಚಿದೆ.