147 ವರ್ಷಗಳಲ್ಲೇ ಅತೀ ವೇಗ… ವಿಶ್ವ ದಾಖಲೆ ನಿರ್ಮಿಸಿದ ಬೆನ್ ಡಕೆಟ್
Pakistan vs England, 2nd Test: ಮುಲ್ತಾನ್ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಇಂಗ್ಲೆಂಡ್ ದಾಂಡಿಗ ಬೆನ್ ಡಕೆಟ್ ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಸಹ ನ್ಯೂಝಿಲೆಂಡ್ ಆಟಗಾರನ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ.
1 / 6
147 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಅತೀ ವೇಗವಾಗಿ 2000 ರನ್ ಕಲೆಹಾಕಿದ ವಿಶ್ವ ದಾಖಲೆ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಬೆನ್ ಡಕೆಟ್ (Ben Duckett) ಪಾಲಾಗಿದೆ. ಡಕೆಟ್ ಈ ದಾಖಲೆ ಬರೆದಿರುವುದು ಅತೀ ಕಡಿಮೆ ಎಸೆತಗಳನ್ನು ಎದುರಿಸುವ ಮೂಲಕ ಎಂಬುದೇ ವಿಶೇಷ.
2 / 6
ಮುಲ್ತಾನ್ ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಬೆನ್ ಡಕೆಟ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ 129 ಎಸೆತಗಳನ್ನು ಎದುರಿಸಿದ ಡಕೆಟ್ 16 ಫೋರ್ಗಳೊಂದಿಗೆ 114 ರನ್ ಬಾರಿಸಿದರು. ಈ ಸೆಂಚುರಿಯೊಂದಿಗೆ ಇಂಗ್ಲೆಂಡ್ ದಾಂಡಿಗ ಟೆಸ್ಟ್‌ನಲ್ಲಿ 2000 ರನ್ ಪೂರೈಸಿದ್ದಾರೆ.
3 / 6
ಟೆಸ್ಟ್ ಕ್ರಿಕೆಟ್‌ನಲ್ಲಿ ಈವರೆಗೆ 2293 ಎಸೆತಗಳನ್ನು ಎದುರಿಸಿರುವ ಬೆನ್ ಡಕೆಟ್ 4 ಶತಕ ಹಾಗೂ 11 ಅರ್ಧಶತಕಗಳೊಂದಿಗೆ 2026 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ 2 ಸಾವಿರ ರನ್ ಪೂರೈಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
4 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ನ್ಯೂಝಿಲೆಂಡ್ನ ಟಿಮ್ ಸೌಥಿ ಹೆಸರಿನಲ್ಲಿತ್ತು. ಟಿಮ್ ಸೌಥಿ ಕೇವಲ 2418 ಎಸೆತಗಳಲ್ಲಿ 2 ಸಾವಿರ ರನ್ ಪೂರೈಸಿ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆ ಇಂಗ್ಲೆಂಡ್ನ ಎಡಗೈ ದಾಂಡಿಗನ ಪಾಲಾಗಿದೆ.
5 / 6
ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಪೋಟಕ ಬ್ಯಾಟಿಂಗ್ನೊಂದಿಗೆ ಅಬ್ಬರಿಸುತ್ತಿರುವ ಬೆನ್ ಡಕೆಟ್ ಆಕ್ರಮಣಕಾರಿ ಆಟದೊಂದಿಗೆ ಹೊಸ ವಿಶ್ವ ದಾಖಲೆ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 2000 ರನ್ ಕಲೆಹಾಕಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
6 / 6
ಇನ್ನು ಮುಲ್ತಾನ್ ಟೆಸ್ಟ್‌ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 366 ರನ್ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿರುವ ಇಂಗ್ಲೆಂಡ್ ತಂಡವು ಬೆನ್ ಡಕೆಟ್ ಅವರ ಶತಕದ ನೆರವಿನಿಂದ 2ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 239 ರನ್ ಕಲೆಹಾಕಿದೆ.