Ben Duckett: ಸ್ಪೋಟಕ ಸೆಂಚುರಿ: ಭಾರತೀಯ ಬೌಲರ್​ಗಳ ಬೆಂಡೆತ್ತಿ ದಾಖಲೆ ಬರೆದ ಬೆನ್ ಡಕೆಟ್

Edited By:

Updated on: Feb 17, 2024 | 7:53 AM

India vs England 3rd Test: ರಾಜ್​ಕೋಟ್​​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ರೋಹಿತ್ ಶರ್ಮಾ (131) ಹಾಗೂ ರವೀಂದ್ರ ಜಡೇಜಾ (112) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ 445 ರನ್​ ಕಲೆಹಾಕಿರುವ ಭಾರತ ತಂಡಕ್ಕೆ ಇದೀಗ ಇಂಗ್ಲೆಂಡ್ ಬ್ಯಾಟರ್ ಬೆನ್ ಡಕೆಟ್ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಪ್ರತ್ಯುತ್ತರ ನೀಡಿದ್ದಾರೆ.

1 / 6
ರಾಜ್​ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆರಂಭಿಕ ಬೆನ್ ಡಕೆಟ್ (Ben Duckett) ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ರೋಹಿತ್ ಶರ್ಮಾ (131) ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 445 ರನ್ ಕಲೆಹಾಕಿತು.

ರಾಜ್​ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆರಂಭಿಕ ಬೆನ್ ಡಕೆಟ್ (Ben Duckett) ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ರೋಹಿತ್ ಶರ್ಮಾ (131) ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 445 ರನ್ ಕಲೆಹಾಕಿತು.

2 / 6

ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಬೆನ್ ಡಕೆಟ್ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಾಝ್​ಬಾಲ್ ಝಲಕ್ ತೋರಿಸಿದ್ದ ಡಕೆಟ್ ಟೀಮ್ ಇಂಡಿಯಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 39 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು.

3 / 6

ಹಾಫ್ ಸೆಂಚುರಿ ಬಳಿಕ ಕೂಡ ಸಿಡಿಲಬ್ಬರದ ಮುಂದುವರೆಸಿದ ಬೆನ್ ಡಕೆಟ್ ಮೈದಾನದ ಮೂಲೆ ಮೂಲೆಗೂ ಫೋರ್​ಗಳ ಸುರಿಮಳೆಗೈದರು. ಈ ಮೂಲಕ ಕೇವಲ 88 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದರು. ಇದರೊಂದಿಗೆ ಭಾರತದ ವಿರುದ್ಧ ಅತೀ ವೇಗದ ಶತಕ ಸಿಡಿಸಿದ ಇಂಗ್ಲೆಂಡ್ ಬ್ಯಾಟರ್ ಎಂಬ ದಾಖಲೆ ಬೆನ್ ಡಕೆಟ್ ಪಾಲಾಗಿದೆ.

4 / 6

ಇದಕ್ಕೂ ಮುನ್ನ ಈ ದಾಖಲೆ ಗ್ರಹಾಂ ಗೂಚ್ ಹೆಸರಿನಲ್ಲಿತ್ತು. 1990 ರಲ್ಲಿ ಭಾರತದ ವಿರುದ್ಧ ಗ್ರೂಚ್ ಕೇವಲ 95 ಎಸೆತಗಳಲ್ಲಿ ಶತಕ ಬಾರಿಸಿ ದಾಖಲೆ ಬರೆದಿದ್ದರು. ಇದೀಗ ಇಂಗ್ಲೆಂಡ್ ತಂಡದ ಮಾಜಿ ನಾಯಕನ ದಾಖಲೆಯನ್ನು ಡಕೆಟ್ ಅಳಿಸಿ ಹಾಕಿದ್ದಾರೆ.

5 / 6

ರಾಜ್​ಕೋಟ್​ನಲ್ಲಿ ಮೈದಾನದಲ್ಲಿ ಕೇವಲ 88 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಬೆನ್ ಡಕೆಟ್ ಟೀಮ್ ಇಂಡಿಯಾ ವಿರುದ್ಧ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ಇಂಗ್ಲೆಂಡ್ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಭಾರತದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಸೆಷನ್​ವೊಂದರಲ್ಲಿ ಅತ್ಯಧಿಕ ರನ್ ಬಾರಿಸಿದ ವಿದೇಶಿ ಬ್ಯಾಟರ್​ ಎಂಬ ದಾಖಲೆಯನ್ನೂ ಕೂಡ ಡಕೆಟ್ (114 ರನ್​ಗಳು) ತಮ್ಮದಾಗಿಸಿಕೊಂಡಿದ್ದಾರೆ.

6 / 6

ಇನ್ನು ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಬೆನ್ ಡಕೆಟ್ 118 ಎಸೆತಗಳಲ್ಲಿ 21 ಫೋರ್ ಹಾಗೂ 2 ಸಿಕ್ಸ್​ನೊಂದಿಗೆ ಅಜೇಯ 133 ರನ್​ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ಈ ಶತಕದ ನೆರವಿನಿಂದ ಇಂಗ್ಲೆಂಡ್ ತಂಡವು 2ನೇ ದಿನದಾಟದ ಮುಕ್ತಾಯದ ವೇಳೆ 2 ವಿಕೆಟ್ ಕಳೆದುಕೊಂಡು 207 ರನ್​ ಕಲೆಹಾಕಿದೆ.

Loading...
Unable to load recommendations.
Follow Us