AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 47 ವರ್ಷಗಳ ಹಳೆಯ ದಾಖಲೆ ಮುರಿದ ಬೆನ್ ಡಕೆಟ್

Ben Duckett Lord's century: ಇಂಗ್ಲೆಂಡ್‌ನ ಬೆನ್ ಡಕೆಟ್ ಲಾರ್ಡ್ಸ್‌ನಲ್ಲಿ ಭಾರತದ ವಿರುದ್ಧ 141 ರನ್ ಗಳಿಸಿ ಇತಿಹಾಸ ನಿರ್ಮಿಸಿದ್ದಾರೆ. 47 ವರ್ಷಗಳ ಹಳೆಯ ದಾಖಲೆಯನ್ನು ಮುರಿದು, ಲಾರ್ಡ್ಸ್‌ನಲ್ಲಿ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿದ್ದಾರೆ. ಸರ್ ವಿವ್ ರಿಚರ್ಡ್ಸ್ ಅವರ ದಾಖಲೆಯನ್ನು ಹಿಂದಿಕ್ಕಿ, ಟೆಸ್ಟ್ ಮತ್ತು ಏಕದಿನ ಎರಡರಲ್ಲೂ ಶತಕ ಬಾರಿಸಿದ ಕೆಲವೇ ಆಟಗಾರರ ಪಟ್ಟಿಗೆ ಸೇರಿದ್ದಾರೆ. ಈ ಸ್ಮರಣೀಯ ಇನ್ನಿಂಗ್ಸ್ ಕ್ರಿಕೆಟ್ ಲೋಕದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ.

ಪೃಥ್ವಿಶಂಕರ
|

Updated on: Jul 19, 2026 | 8:50 PM

Share
ಇಂಗ್ಲೆಂಡ್‌ನ ಆರಂಭಿಕ ಆಟಗಾರ ಬೆನ್ ಡಕೆಟ್ ಕ್ರಿಕೆಟ್‌ನ ಐತಿಹಾಸಿಕ ಮೆಕ್ಕಾದ ಲಾರ್ಡ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಭಾರತದ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ, ಡಕೆಟ್ ಬರೋಬ್ಬರಿ 141 ರನ್​ಗಳ ಐತಿಹಾಸಿಕ ಇನ್ನಿಂಗ್ಸ್ ಆಡುವ ಮೂಲಕ 47 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು. ಹಾಗೆಯೇ ಆರಂಭಿಕ ಜೊತೆಯಾಟದ ಮೂಲಕ 36 ವರ್ಷಗಳ ಹಳೆಯ ದಾಖಲೆಯನ್ನು ಧ್ವಂಸಗೊಳಿಸಿದರು(PC-PTI).

1 / 5
ಬೆನ್ ಡಕೆಟ್ ಆರಂಭದಿಂದಲೂ ಉತ್ತಮ ಲಯದಲ್ಲಿ ಕಾಣಿಸಿಕೊಂಡರು. ಹೀಗಾಗಿ ಡಕೆಟ್ ಲಾರ್ಡ್ಸ್‌ನಲ್ಲಿ ಸ್ಮರಣೀಯ ಶತಕ ಸಿಡಿಸಿದಲ್ಲೆ 135 ಎಸೆತಗಳಲ್ಲಿ 141 ರನ್ ಬಾರಿಸುವ ಮೂಲಕ ಭಾರತೀಯ ಬೌಲರ್‌ಗಳ ಬೆವರಿಳಿಸಿದರು. ಈ ಐತಿಹಾಸಿಕ ಇನ್ನಿಂಗ್ಸ್‌ನಲ್ಲಿ, ಡಕೆಟ್ 18 ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದರು(PC-PTI).

2 / 5
ಇದು ಬೆನ್ ಡಕೆಟ್ ಅವರ ನಾಲ್ಕನೇ ಏಕದಿನ ಶತಕವಾಗಿದ್ದು, ಲಾರ್ಡ್ಸ್‌ನಲ್ಲಿ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ 1979 ರ ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಅಜೇಯ 138 ರನ್ ಗಳಿಸಿದ್ದ ವೆಸ್ಟ್ ಇಂಡೀಸ್ ದಿಗ್ಗಜ ಸರ್ ವಿವ್ ರಿಚರ್ಡ್ಸ್ ಅವರ 47 ವರ್ಷಗಳ ಹಳೆಯ ದಾಖಲೆಯನ್ನು ಅವರು ಮುರಿದರು(PC-PTI).

3 / 5
ಈ ಶತಕದೊಂದಿಗೆ, ಬೆನ್ ಡಕೆಟ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದರು. ಲಾರ್ಡ್ಸ್‌ನಲ್ಲಿ ಟೆಸ್ಟ್ ಮತ್ತು ಏಕದಿನ ಎರಡೂ ಸ್ವರೂಪಗಳಲ್ಲಿ ಶತಕಗಳನ್ನು ಬಾರಿಸಿದ ವಿಶ್ವದಾದ್ಯಂತದ ಆಯ್ದ ಆರಂಭಿಕ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಡಕೆಟ್‌ಗಿಂತ ಮೊದಲು, ಕೇವಲ ಐವರು ಇಂಗ್ಲೆಂಡ್ ಆರಂಭಿಕರು ಮಾತ್ರ ಈ ಸಾಧನೆ ಮಾಡಿದ್ದರು(PC-PTI).

4 / 5
ಲಾರ್ಡ್ಸ್‌ನಲ್ಲಿ ಇತಿಹಾಸ ನಿರ್ಮಿಸುವುದರ ಜೊತೆಗೆ, ಬೆನ್ ಡಕೆಟ್ ಭಾರತದ ವಿರುದ್ಧ ಏಕದಿನ ಪಂದ್ಯಗಳಲ್ಲಿ ಇಂಗ್ಲೆಂಡ್ ಪರ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 1975 ರಲ್ಲಿ ಡೆನ್ನಿಸ್ ಅಮಿಸ್ ಅವರ 137 ರನ್‌ಗಳ ದಾಖಲೆಯನ್ನು ಅವರು ಹಿಂದಿಕ್ಕಿದ್ದಾರೆ. ಮಾಜಿ ನಾಯಕ ಆಂಡ್ರ್ಯೂ ಸ್ಟ್ರಾಸ್ (158 ರನ್) ಇನ್ನೂ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ(PC-PTI).

5 / 5
Follow Us
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ

ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು

ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು

ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ

ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು

ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!

ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು

ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ

ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!

ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ