Ben Stokes: ಧೋನಿ ದಾಖಲೆ ಮುರಿದ ಬೆನ್ ಸ್ಟೋಕ್ಸ್

| Updated By: ಝಾಹಿರ್ ಯೂಸುಫ್

Updated on: Jul 09, 2023 | 10:57 PM

Ben Stokes Record: ಆ್ಯಶಸ್ ಸರಣಿಯ ಮೂರನೇ ಟೆಸ್ಟ್ ಪಂದ್ಯದ ಗೆಲುವಿನೊಂದಿಗೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದು ಬೆನ್ ಸ್ಟೋಕ್ಸ್ ಪಾಲಾಗಿದೆ.

1 / 5
Ashes 2023: ಹೆಡಿಂಗ್ಲಿ ಮೈದಾನದಲ್ಲಿ ನಡೆದ ಆ್ಯಶಸ್ ಸರಣಿ 3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡವು 223 ರನ್​ಗಳಿಸಿ ಆಲೌಟ್ ಆಗಿತ್ತು.

2 / 5
ಅತ್ತ ಮೊದಲ ಇನಿಂಗ್ಸ್​ನ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್​ ಗೆಲ್ಲಲು 251 ರನ್​ಗಳಿಸಬೇಕಿತ್ತು. ಈ ಗುರಿಯನ್ನು  ಬೆನ್ನತ್ತಿರುವ ಬೆನ್ ಸ್ಟೋಕ್ಸ್ ಪಡೆಯು 7 ವಿಕೆಟ್ ನಷ್ಟಕ್ಕೆ 254 ರನ್​ಗಳಿಸಿ 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

3 / 5
ಈ ಗೆಲುವಿನೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 250+ ಚೇಸಿಂಗ್ ಅನ್ನು ಮುನ್ನಡೆಸಿದ ನಾಯಕ ಎಂಬ ವಿಶೇಷ ದಾಖಲೆಯೊಂದು ಬೆನ್​ ಸ್ಟೋಕ್ಸ್ ಪಾಲಾಗಿದೆ.

4 / 5
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಧೋನಿ ನಾಯಕತ್ವದಲ್ಲಿ ಭಾರತ ತಂಡವು ಟೆಸ್ಟ್ ಕ್ರಿಕೆಟ್​ನಲ್ಲಿ 4 ಬಾರಿ 250+ ಸ್ಕೋರ್ ಚೇಸ್ ಮಾಡಿ ಗೆಲುವು ದಾಖಲಿಸಿತ್ತು.

5 / 5
ಇದೀಗ ಬೆನ್ ಸ್ಟೋಕ್ಸ್ ನೇತೃತ್ವದ ಪಡೆಯುವ 5 ಬಾರಿ 250+ ಸ್ಕೋರ್​ಗಳನ್ನು ಚೇಸ್ ಮಾಡಿ ಜಯ ಸಾಧಿಸಿದೆ. ಇದರೊಂದಿಗೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದು ಬೆನ್ ಸ್ಟೋಕ್ಸ್ ಪಾಲಾಗಿದೆ.