Virat Kohli: ವಿರಾಟ್ ಕೊಹ್ಲಿಯ ದಾಖಲೆ ಮುರಿದ ಬೆನ್ ಸ್ಟೋಕ್ಸ್​

WTC Records: ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಯಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ನಾಯಕರುಗಳ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡದ ಕ್ಯಾಪ್ಟನ್ ಬೆನ್ ಸ್ಟೋಕ್ಸ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಪ್ಯಾಟ್ ಕಮಿನ್ಸ್.

|

Updated on: Jul 30, 2024 | 10:13 AM

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಇನಿಂಗ್ಸ್ ಮತ್ತು 114 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 241 ರನ್​ಗಳ ಗೆಲುವು ದಾಖಲಿಸಿತ್ತು. ಹಾಗೆಯೇ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್​ 10 ವಿಕೆಟ್​ಗಳ ಅಮೋಘ ಜಯ ಸಾಧಿಸಿದೆ.

1 / 5
ಈ ಗೆಲುವುಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ 2ನೇ ನಾಯಕ ಎಂಬ ಹೆಗ್ಗಳಿಕೆಗೆ ಬೆನ್ ಸ್ಟೋಕ್ಸ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು ಎಂಬುದು ವಿಶೇಷ.

2 / 5
ಭಾರತ ತಂಡವು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಒಟ್ಟು 22 ಪಂದ್ಯಗಳನ್ನಾಡಿದೆ. ಈ ವೇಳೆ ಟೀಮ್ ಇಂಡಿಯಾ 14 ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಹಾಗೆಯೇ 1 ಮ್ಯಾಚ್​ ಅನ್ನು ಡ್ರಾ ಮಾಡಿಕೊಂಡರೆ, 7 ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಈ ಹದಿನಾಲ್ಕು ಗೆಲುವುಗಳೊಂದಿಗೆ ಕೊಹ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ 2ನೇ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದರು.

3 / 5
ಆದರೀಗ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಮೂಲಕ ಬೆನ್ ಸ್ಟೋಕ್ಸ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಬೆನ್ ಸ್ಟೋಕ್ಸ್ ನಾಯಕತ್ವದಲ್ಲಿ ಇಂಗ್ಲೆಂಡ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಈವರೆಗೆ 24 ಪಂದ್ಯಗಳನ್ನಾಡಿದೆ. ಈ ವೇಳೆ ಇಂಗ್ಲೆಂಡ್ ತಂಡವು 15 ಗೆಲುವು ಸಾಧಿಸಿದೆ. ಹಾಗೆಯೇ 8 ಪಂದ್ಯಗಳಲ್ಲಿ ಸೋತರೆ, 1 ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಈ 15 ಗೆಲುವುಗಳೊಂದಿಗೆ ಬೆನ್ ಸ್ಟೋಕ್ಸ್ ಇದೀಗ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.

4 / 5
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ನಾಯಕನೆಂಬ ವಿಶ್ವ ದಾಖಲೆ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಹೆಸರಿನಲ್ಲಿದೆ. ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ 28 WTC ಪಂದ್ಯಗಳನ್ನಾಡಿದ್ದು, ಈ ವೇಳೆ ಆಸೀಸ್ ಪಡೆ 17 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು 6 ಪಂದ್ಯಗಳಲ್ಲಿ ಸೋತರೆ, 5 ಮ್ಯಾಚ್​ಗಳಲ್ಲಿ ಆಸ್ಟ್ರೇಲಿಯಾ ತಂಡ ಡ್ರಾ ಸಾಧಿಸಿದೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!

ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ