- Kannada News Photo gallery Cricket photos Ben Stokes Blasts Century, 5 Wickets in Manchester Test: England Triumph
IND vs ENG: ಬೆನ್ ಸ್ಟೋಕ್ಸ್ ಐತಿಹಾಸಿಕ ಶತಕ; 42 ವರ್ಷಗಳ ಕಾಯುವಿಕೆ ಅಂತ್ಯ
Ben Stokes century: ಮ್ಯಾಂಚೆಸ್ಟರ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಅದ್ಭುತ ಪ್ರದರ್ಶನ ನೀಡಿದರು. ಅವರು ಒಂದು ಶತಕ ಮತ್ತು 5 ವಿಕೆಟ್‌ಗಳನ್ನು ಪಡೆದು ತಮ್ಮ ತಂಡವನ್ನು ಭದ್ರ ಸ್ಥಿತಿಗೆ ಕೊಂಡೊಯ್ದಿದ್ದಾರೆ. ಇದು 2 ವರ್ಷಗಳ ನಂತರ ಅವರ ಮೊದಲ ಟೆಸ್ಟ್ ಶತಕವಾಗಿದ್ದು, ಇಂಗ್ಲೆಂಡ್‌ನ ನಾಯಕನಾಗಿ ಒಂದೇ ಪಂದ್ಯದಲ್ಲಿ ಶತಕ ಮತ್ತು 5 ವಿಕೆಟ್‌ಗಳನ್ನು ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸ್ಟೋಕ್ಸ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 7000 ರನ್ ಮತ್ತು 200 ವಿಕೆಟ್‌ಗಳನ್ನು ಪೂರ್ಣಗೊಳಿಸಿದರು.
Updated on: Jul 26, 2025 | 7:51 PM

ಮ್ಯಾಂಚೆಸ್ಟರ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದು ಅದ್ಭುತ ಶತಕ ಬಾರಿಸಿದ್ದಾರೆ. ಇದರೊಂದಿಗೆ ಅವರು 2 ವರ್ಷಗಳ ಕಾಯುವಿಕೆಯನ್ನು ಸಹ ಕೊನೆಗೊಳಿಸಿದ್ದಾರೆ. ವಾಸ್ತವವಾಗಿ, ಬೆನ್ ಸ್ಟೋಕ್ಸ್ ಎರಡು ವರ್ಷಗಳ ನಂತರ ಟೆಸ್ಟ್ ಸ್ವರೂಪದಲ್ಲಿ ಶತಕ ಬಾರಿಸಿದ್ದು, ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದಿದ್ದಾರೆ.

ಬೆನ್ ಸ್ಟೋಕ್ಸ್ 164 ಎಸೆತಗಳನ್ನು ಎದುರಿಸಿ 9 ಬೌಂಡರಿಗಳ ಸಹಾಯದಿಂದ ತಮ್ಮ ಶತಕ ಪೂರೈಸಿದರು. ಈ ಮೂಲಕ 2 ವರ್ಷಗಳ ನಂತರ ಟೆಸ್ಟ್‌ನಲ್ಲಿ ಶತಕ ಗಳಿಸಿದ ಸಾಧನೆಯನ್ನು ಮಾಡಿದರು. ಇದಕ್ಕೂ ಮೊದಲು, ಅವರು ಜುಲೈ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 155 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದರು, ಇದು ಅವರ ಕೊನೆಯ ಟೆಸ್ಟ್ ಶತಕವಾಗಿತ್ತು.

ಬ್ಯಾಟಿಂಗ್ನಲ್ಲಿ ಶತಕ ಸಿಡಿಸಿರುವ ಸ್ಟೋಕ್ಸ್ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ನಲ್ಲಿ 5 ವಿಕೆಟ್‌ಗಳನ್ನು ಕಬಳಿಸಿದರು. ಇದರೊಂದಿಗೆ, ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್‌ಗಳನ್ನು ಕಬಳಿಸುವ ಜೊತೆಗೆ ಶತಕ ಗಳಿಸಿದ ಇಂಗ್ಲೆಂಡ್‌ನ ನಾಲ್ಕನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅದೇ ಸಮಯದಲ್ಲಿ, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 42 ವರ್ಷಗಳ ನಂತರ, ಒಬ್ಬ ನಾಯಕ ಟೆಸ್ಟ್ ಪಂದ್ಯದಲ್ಲಿ ಒಂದು ಶತಕ ಮತ್ತು 5 ವಿಕೆಟ್‌ಗಳನ್ನು ಪಡೆದ ಹೆಗ್ಗಳಿಕೆಗೂ ಸ್ಟೋಕ್ಸ್ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು, ಇಮ್ರಾನ್ ಖಾನ್ 1983 ರಲ್ಲಿ ಈ ಸಾಧನೆ ಮಾಡಿದ್ದರು. ವಿಶೇಷವೆಂದರೆ ಇಮ್ರಾನ್ ಖಾನ್ ಕೂಡ ಭಾರತ ತಂಡದ ವಿರುದ್ಧ ಈ ಸಾಧನೆ ಮಾಡಿದ್ದರು.

ಈ ಇನ್ನಿಂಗ್ಸ್‌ನೊಂದಿಗೆ ಬೆನ್ ಸ್ಟೋಕ್ಸ್ ಇಂಗ್ಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಬರೆದಿದ್ದಾರೆ. ವಾಸ್ತವವಾಗಿ, ಅವರು ಒಂದೇ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿ 5 ವಿಕೆಟ್ ಪಡೆದ ಇಂಗ್ಲೆಂಡ್‌ನ ಮೊದಲ ನಾಯಕರಾಗಿದ್ದಾರೆ. ಅವರಿಗಿಂತ ಮೊದಲು ಯಾವುದೇ ಇಂಗ್ಲಿಷ್ ನಾಯಕ ಈ ಸಾಧನೆ ಮಾಡಲು ಸಾಧ್ಯವಾಗಲಿಲ್ಲ.

ಅದೇ ಸಮಯದಲ್ಲಿ, ಇದು ಬೆನ್ ಸ್ಟೋಕ್ಸ್ ಅವರ ಟೆಸ್ಟ್ ವೃತ್ತಿಜೀವನದ 14 ನೇ ಶತಕವಾಗಿದೆ. ಈ ಇನ್ನಿಂಗ್ಸ್ ಮೂಲಕ ಅವರು ಟೆಸ್ಟ್‌ನಲ್ಲಿ 7000 ರನ್‌ಗಳನ್ನು ಸಹ ಪೂರ್ಣಗೊಳಿಸಿದರು. ಇದರೊಂದಿಗೆ ಟೆಸ್ಟ್‌ನಲ್ಲಿ 7000 ರನ್ ಬಾರಿಸುವುದರ ಜೊತೆಗೆ 200 ವಿಕೆಟ್‌ಗಳನ್ನು ಪಡೆದ ವಿಶ್ವದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
