- Kannada News Photo gallery Cricket photos Ben Stokes Creates New Record: most sixes in an Ashes series
Ben Stokes: ಸಿಕ್ಸರ್ ಕಿಂಗ್…ಹೊಸ ದಾಖಲೆ ಬರೆದ ಬೆನ್ ಸ್ಟೋಕ್ಸ್
Ben Stokes Record: ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಬೆನ್ ಸ್ಟೋಕ್ಸ್ ಹೆಸರಿನಲ್ಲಿದೆ. 175 ಟೆಸ್ಟ್ ಇನಿಂಗ್ಸ್ ಆಡಿರುವ ಸ್ಟೋಕ್ಸ್ ಇದುವರೆಗೆ 124 ಸಿಕ್ಸ್ಗಳನ್ನು ಸಿಡಿಸಿದ್ದಾರೆ.
Updated on:Jul 31, 2023 | 10:11 PM

Ashes 2023: ಲಂಡನ್ನ ಕೆನ್ನಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಆ್ಯಶಸ್ ಸರಣಿಯ 5ನೇ ಟೆಸ್ಟ್ ಪಂದ್ಯದ ಮೂಲಕ ಬೆನ್ ಸ್ಟೋಕ್ಸ್ ಹೊಸ ದಾಖಲೆ ನಿರ್ಮಿಸಿದ್ದಾರೆ.

ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೆನ್ ಸ್ಟೋಕ್ಸ್ 67 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 42 ರನ್ ಬಾರಿಸಿದ್ದರು. ಈ ಒಂದು ಸಿಕ್ಸ್ನೊಂದಿಗೆ ಆ್ಯಶಸ್ ಸರಣಿಯೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶೇಷ ದಾಖಲೆ ಬೆನ್ ಸ್ಟೋಕ್ಸ್ ಪಾಲಾಗಿದೆ.

ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ಬ್ಯಾಟರ್ ಕೆವಿನ್ ಪೀಟರ್ಸನ್ ಹೆಸರಿನಲ್ಲಿತ್ತು. 2005 ರ ಆ್ಯಶಸ್ ಸರಣಿಯಲ್ಲಿ ಪೀಟರ್ಸನ್ ಬರೋಬ್ಬರಿ 14 ಸಿಕ್ಸ್ಗಳನ್ನು ಸಿಡಿಸಿದ್ದರು.

ಇದೀಗ ಈ ಬಾರಿಯ ಆ್ಯಶಸ್ ಸರಣಿಯ 5 ಪಂದ್ಯಗಳಲ್ಲಿ ಸ್ಟೋಕ್ಸ್ ಒಟ್ಟು 15 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಆ್ಯಶಸ್ ಸರಣಿಯೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ದಾಖಲೆಯನ್ನು ಬೆನ್ ಸ್ಟೋಕ್ಸ್ ತಮ್ಮದಾಗಿಸಿಕೊಂಡಿದ್ದಾರೆ.

ಸಿಕ್ಸರ್ ಕಿಂಗ್: ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಬೆನ್ ಸ್ಟೋಕ್ಸ್ ಹೆಸರಿನಲ್ಲಿದೆ. 175 ಟೆಸ್ಟ್ ಇನಿಂಗ್ಸ್ ಆಡಿರುವ ಸ್ಟೋಕ್ಸ್ ಇದುವರೆಗೆ 124 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ವಿಶೇಷ ಎಂದರೆ ಬೆನ್ ಸ್ಟೋಕ್ಸ್ ಅನ್ನು ಹೊರತುಪಡಿಸಿದರೆ, ಪ್ರಸ್ತುತ ಕ್ರಿಕೆಟ್ ಆಡುತ್ತಿರುವ ಯಾವುದೇ ಬ್ಯಾಟರ್ ಟೆಸ್ಟ್ನಲ್ಲಿ 100 ಸಿಕ್ಸ್ಗಳನ್ನು ಬಾರಿಸಿಲ್ಲ.
Published On - 10:08 pm, Sat, 29 July 23



















