- Kannada News Photo gallery Cricket photos Ben stokes ruled out of cricket for three months kannada news zp
ಕ್ರಿಕೆಟ್ನಿಂದ ಬೆನ್ ಸ್ಟೋಕ್ಸ್ ಬಿಗ್ ಬ್ರೇಕ್
Ben Stokes: ಇಂಗ್ಲೆಂಡ್ ತಂಡದ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಈ ಬಾರಿಯ ಐಪಿಎಲ್ಗೆ ಹೆಸರು ನೋಂದಾಯಿಸಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಅವರ ಗಾಯದ ಸಮಸ್ಯೆ ಎಂದು ತಿಳಿದು ಬಂದಿದೆ. ಏಕೆಂದರೆ ಇದೀಗ ನ್ಯೂಝಿಲೆಂಡ್ ವಿರುದ್ಧದ ಸರಣಿಯ ಮುಕ್ತಾಯದ ಬೆನ್ನಲ್ಲೇ ಸ್ಟೋಕ್ಸ್ ಶಸ್ತ್ರಚಿಕಿತ್ಸೆಗಾಗಿ ದೀರ್ಘಾವಧಿಯ ವಿಶ್ರಾಂತಿ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.
Updated on: Dec 24, 2024 | 7:53 AM

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮೂರು ತಿಂಗಳುಗಳ ಕಾಲ ಕ್ರಿಕೆಟ್ ಅಂಗಳದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹ್ಯಾಮಿಲ್ಟನ್‌ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದ ಸ್ಟೋಕ್ಸ್ ಇದೀಗ ಸಂಪೂರ್ಣ ವಿಶ್ರಾಂತಿ ಪಡೆದು ಚಿಕಿತ್ಸೆಗೆ ಒಳಗಾಗಲು ನಿರ್ಧರಿಸಿದ್ದಾರೆ.

ಇದೇ ಕಾರಣದಿಂದಾಗಿ ಬೆನ್ ಸ್ಟೋಕ್ಸ್ ಅವರನ್ನು ಮುಂಬರುವ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾಗಿಲ್ಲ. ಅವರ ಬದಲಿಗೆ ಯುವ ಆಲ್ರೌಂಡರ್ ಜೇಕಬ್ ಬೆಥೆಲ್ಗೆ ಸ್ಥಾನ ನೀಡಲಾಗಿದೆ. ಇದಕ್ಕೂ ಮುನ್ನ 2023ರ ಏಕದಿನ ವಿಶ್ವಕಪ್ ವೇಳೆಯೂ ಗಾಯದಿಂದ ಬಳಲಿದ್ದ ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಆದರೀಗ ಮತ್ತೆ ಮಂಡಿರಜ್ಜು ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿ ದೀರ್ಘಾವಧಿಯ ಬ್ರೇಕ್ ತೆಗೆದುಕೊಳ್ಳಲು ಬೆನ್ ಸ್ಟೋಕ್ಸ್ ನಿರ್ಧರಿಸಿದ್ದಾರೆ. ಹೀಗಾಗಿ ಭಾರತದ ವಿರುದ್ಧದ ಏಕದಿನ ಸರಣಿಯಲ್ಲಿ ಬೆನ್ ಸ್ಟೋಕ್ಸ್ ಕಾಣಿಸಿಕೊಳ್ಳುವುದಿಲ್ಲ.

ಹಾಗೆಯೇ ಈ ಬಾರಿಯ ಐಪಿಎಲ್ಗೂ ಬೆನ್ ಸ್ಟೋಕ್ಸ್ ಹೆಸರು ನೀಡಿರಲಿಲ್ಲ. ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲೂ ಸ್ಟೋಕ್ಸ್ ಅಬ್ಬರವನ್ನು ಕಣ್ತುಂಬಿಕೊಳ್ಳಲಾಗುವುದಿಲ್ಲ. ಸದ್ಯ ಗಾಯದ ಸಮಸ್ಯೆಯ ಕಾರಣ ವಿಶ್ರಾಂತಿಯಲ್ಲಿರುವ ಸ್ಟೋಕ್ಸ್ ಶೀಘ್ರದಲ್ಲೇ ಮತ್ತೊಮ್ಮೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

ಈ ಸರ್ಜರಿ ಬಳಿಕ ವಿಶ್ರಾಂತಿ ಮುಂದುವರೆಸಲಿರುವ ಬೆನ್ ಸ್ಟೋಕ್ಸ್ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಅಥವಾ ಜೂನ್ನಲ್ಲಿ ನಡೆಯಲಿರುವ ಭಾರತದ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಅದುವರೆಗೆ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕರಾಗಿ ಓಲೀ ಪೋಪ್ ಕಾಣಿಸಿಕೊಳ್ಳಲಿದ್ದಾರೆ.

ಚಾಂಪಿಯನ್ಸ್ ಟ್ರೋಫಿಗೆ ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್ , ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
