IND vs ENG: ಕಣಕ್ಕಿಳಿಯುತ್ತಿದ್ದಂತೆ ವಿಶೇಷ ದಾಖಲೆ ಬರೆದ ಬೆನ್ ಸ್ಟೋಕ್ಸ್

| Updated By: ಝಾಹಿರ್ ಯೂಸುಫ್

Updated on: Feb 15, 2024 | 11:22 AM

India vs England 3rd Test: ರಾಜ್​ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯದ ಮೂಲಕ ಬೆನ್ ಸ್ಟೋಕ್ಸ್ ವಿಶೇಷ ದಾಖಲೆ ಬರೆದಿದ್ದಾರೆ. ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ವಿಶ್ವದ 76ನೇ ಆಟಗಾರ ಎಂಬ ಹೆಗ್ಗಳಿಕೆಗೂ ಬೆನ್ ಸ್ಟೋಕ್ಸ್ ಪಾತ್ರರಾಗಿದ್ದಾರೆ.

1 / 7
ಟೀಮ್ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ವಿಶೇಷ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಟಾಸ್​ಗೆ ಆಗಮಿಸುತ್ತಿದ್ದಂತೆ ಇಂಗ್ಲೆಂಡ್ ಪರ 100 ಟೆಸ್ಟ್ ಪಂದ್ಯಗಳನ್ನಾಡಿದ ಸಾಧಕರ ಪಟ್ಟಿಗೆ ಸ್ಟೋಕ್ಸ್ ಸೇರ್ಪಡೆಯಾದರು.

2 / 7
ಈ ಮೂಲಕ ಈ ಸಾಧನೆ ಮಾಡಿದ 16ನೇ ಇಂಗ್ಲೆಂಡ್ ಆಟಗಾರ ಹಾಗೂ ವಿಶ್ವದ 76ನೇ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಇಂಗ್ಲೆಂಡ್ ಪರ 100 ಟೆಸ್ಟ್​ ಪಂದ್ಯಗಳನ್ನಾಡಿದ ಮೊದಲ ಆಟಗಾರ ಕಾಲಿನ್ ಕೌಡ್ರೆ.

3 / 7
1968 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕಾಲಿನ್ ಕೌಡ್ರೆ ಈ ಸಾಧನೆ ಮಾಡಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ 100 ಪಂದ್ಯಗಳನ್ನಾಡಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಯನ್ನು ಕೂಡ ನಿರ್ಮಿಸಿದ್ದರು.

4 / 7
ಇಂಗ್ಲೆಂಡ್‌ ಪರ 114 ಟೆಸ್ಟ್ ಪಂದ್ಯಗಳನ್ನು ಆಡಿರುವ ಕಾಲಿನ್ ಕೌಡ್ರೆ 188 ಇನ್ನಿಂಗ್ಸ್‌ಗಳಲ್ಲಿ 44.06 ಸರಾಸರಿಯಲ್ಲಿ 7624 ರನ್ ಗಳಿಸಿದ್ದಾರೆ. ಈ ವೇಳೆ 22 ಶತಕಗಳನ್ನು ಹಾಗೂ 38 ಅರ್ಧಶತಕಗಳನ್ನೂ ಕೂಡ ಬಾರಿಸಿದ್ದಾರೆ.

5 / 7
ಇದೀಗ ಇಂಗ್ಲೆಂಡ್ ಪರ 100 ಟೆಸ್ಟ್ ಪಂದ್ಯಗಳನ್ನಾಡಿದ 16ನೇ ಆಟಗಾರನಾಗಿ ಬೆನ್ ಸ್ಟೋಕ್ಸ್​ ಕಾಣಿಸಿಕೊಂಡಿದ್ದಾರೆ. ಇದುವರೆಗೆ 100 ಟೆಸ್ಟ್​ನಲ್ಲಿ 179 ಇನಿಂಗ್ಸ್ ಆಡಿರುವ ಸ್ಟೋಕ್ಸ್ 6251 ರನ್ ಕಲೆಹಾಕಿದ್ದಾರೆ. ಈ ವೇಳೆ 1 ದ್ವಿಶತಕ, 13 ಶತಕ ಹಾಗೂ 31 ಅರ್ಧಶತಕಗಳನ್ನು ಸಿಡಿಸಿದ್ದಾರೆ.

6 / 7
ಅಷ್ಟೇ ಅಲ್ಲದೆ ಇದುವರೆಗೆ 197 ಟೆಸ್ಟ್ ವಿಕೆಟ್​ಗಳನ್ನು ಕಬಳಿಸಿರುವ ಸ್ಟೋಕ್ಸ್ ಇದೀಗ 200 ವಿಕೆಟ್​ಗಳ ಸಾಧನೆಯ ಹೊಸ್ತಿಲಲ್ಲಿದ್ದಾರೆ. ಆದರೆ ಕಳೆದೆರಡು ಟೆಸ್ಟ್ ಪಂದ್ಯಗಳಲ್ಲಿ ಬೌಲಿಂಗ್ ಮಾಡದಿರುವ ಅವರು ಮೂರನೇ ಟೆಸ್ಟ್ ಪಂದ್ಯದಲ್ಲಿ ಬೌಲ್ ಮಾಡಲಿದ್ದಾರಾ ಎಂಬುದೇ ಪ್ರಶ್ನೆ. ಒಂದು ವೇಳೆ ಬೌಲಿಂಗ್ ಮಾಡಿ 3 ವಿಕೆಟ್​ ಕಬಳಿಸಿದರೆ 100ನೇ ಪಂದ್ಯದಲ್ಲಿ 200 ವಿಕೆಟ್​ಗಳ ಸಾಧನೆ ಮಾಡಬಹುದು.

7 / 7
ಭಾರತ-ಇಂಗ್ಲೆಂಡ್ 3ನೇ ಟೆಸ್ಟ್: ರಾಜ್​ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದಿದೆ. ಅದರಂತೆ ಮೊದಲು ಬ್ಯಾಟ್ ಮಾಡುತ್ತಿರುವ ಭಾರತ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಇಂಗ್ಲೆಂಡ್ ಬೌಲರ್​ಗಳು ಯಶಸ್ವಿಯಾಗಿದ್ದಾರೆ. ಯಶಸ್ವಿ ಜೈಸ್ವಾಲ್ (10), ಶುಭ್​ಮನ್ ಗಿಲ್ ಹಾಗೂ ರಜತ್ ಪಾಟಿದಾರ್ (5) ವಿಕೆಟ್ ಕಳೆದುಕೊಂಡಿರುವ ಟೀಮ್ ಇಂಡಿಯಾ 22 ಓವರ್​ಗಳ ಮುಕ್ತಾಯದ ವೇಳೆಗೆ 78 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಬ್ಯಾಟಿಂಗ್ ಮಾಡುತ್ತಿದ್ದಾರೆ.