
ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಬೆನ್ ಸ್ಟೋಕ್ಸ್ (Ben Stokes) ವಿಶೇಷ ದಾಖಲೆ ಬರೆಯಲಿದ್ದಾರೆ. ಅದು ಕೂಡ ಈ ಸಾಧನೆ ಮಾಡಿದ 16ನೇ ಇಂಗ್ಲೆಂಡ್ ಆಟಗಾರ ಎನಿಸಿಕೊಳ್ಳುವ ಮೂಲಕ ಎಂಬುದು ವಿಶೇಷ.

ಅಂದರೆ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಬೆನ್ ಸ್ಟೋಕ್ಸ್ ಟೆಸ್ಟ್ ಕ್ರಿಕೆಟ್ನಲ್ಲಿ ನೂರು ಪಂದ್ಯಗಳ ಸಾಧನೆ ಮಾಡಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 16ನೇ ಇಂಗ್ಲೆಂಡ್ ಆಟಗಾರ ಹಾಗೂ ವಿಶ್ವದ 76ನೇ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಅಂದರೆ ಮೂರನೇ ಟೆಸ್ಟ್ನಲ್ಲಿ ಸ್ಟೋಕ್ಸ್ ಕಡೆಯಿಂದ ಶತಕದ ಸಾಧನೆ ಬರುವುದು ಖಚಿತ.

ಇನ್ನು ಈ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಬೌಲಿಂಗ್ ಮಾಡಿ 3 ವಿಕೆಟ್ ಕಬಳಿಸಿದರೆ ದ್ವಿಶತಕದ ಸಾಧನೆಯನ್ನೂ ಕೂಡ ಮಾಡಲಿದ್ದಾರೆ. ಅಂದರೆ ಸ್ಟೋಕ್ಸ್ ಟೆಸ್ಟ್ ಕ್ರಿಕೆಟ್ನಲ್ಲಿ ಇದುವರೆಗೆ 197 ವಿಕೆಟ್ಗಳನ್ನು ಕಬಳಿಸಿದ್ದಾರೆ. ಒಂದು ವೇಳೆ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಮೂರು ವಿಕೆಟ್ ಕಬಳಿಸಿದರೆ ಶತಕದ ಪಂದ್ಯದಲ್ಲಿ 200 ವಿಕೆಟ್ಗಳ ದ್ವಿಶತಕದ ಸಾಧನೆ ಮಾಡಲಿದ್ದಾರೆ.

ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಕಡೆಯಿಂದ ಶತಕದ ಪಂದ್ಯಗಳ ದಾಖಲೆ ನಿರ್ಮಾಣವಾಗುವುದು ಖಚಿತ. ಇನ್ನು ದ್ವಿಶತಕ ವಿಕೆಟ್ಗಳ ದಾಖಲೆ ಬರೆಯಲಿದ್ದಾರಾ ಕಾದು ನೋಡಬೇಕಿದೆ.

ಟೆಸ್ಟ್ ಕ್ರಿಕೆಟ್ನಲ್ಲಿ ಇದುವರೆಗೆ 99 ಪಂದ್ಯಗಳನ್ನಾಡಿರುವ ಬೆನ್ ಸ್ಟೋಕ್ಸ್ 179 ಇನಿಂಗ್ಸ್ಗಳನ್ನು ಆಡಿದ್ದಾರೆ. ಈ ವೇಳೆ 13 ಶತಕ ಹಾಗೂ 31 ಅರ್ಧಶತಕಗಳೊಂದಿಗೆ 6251 ರನ್ ಕಲೆಹಾಕಿದ್ದಾರೆ. ಹಾಗೆಯೇ 197 ವಿಕೆಟ್ಗಳನ್ನು ಕಬಳಿಸಿದ್ದಾರೆ.

ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.