- Kannada News Photo gallery Cricket photos BGT 2024: Devdutt Padikkal, Yash Dayal join Team India Squad
ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ: ತಂಡಕ್ಕೆ ಇಬ್ಬರು ಆಯ್ಕೆ
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಪರ್ತ್ನಲ್ಲಿ ಒಪ್ಟಸ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆದರೆ ಈ ಪಂದ್ಯದಿಂದ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಹೊರಗುಳಿದಿದ್ದಾರೆ.
Updated on:Nov 20, 2024 | 1:34 PM

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ರೋಹಿತ್ ಶರ್ಮಾ ಹೊರಗುಳಿದರೆ, ಮೊಣಕೈಗೆ ಗಾಯವಾಗಿರುವ ಹಿನ್ನಲೆ ಶುಭ್ಮನ್ ಗಿಲ್ ಪರ್ತ್ ಟೆಸ್ಟ್ಗೆ ಅಲಭ್ಯರಾಗಿದ್ದಾರೆ.

ಇತ್ತ ಇಬ್ಬರು ಅಲಭ್ಯರಾಗಿರುವ ಕಾರಣ ಇದೀಗ ಬಿಸಿಸಿಐ ಮತ್ತಿಬ್ಬರನ್ನು ತಂಡಕ್ಕೆ ಆಯ್ಕೆ ಮಾಡಿದೆ. ಅದರಂತೆ ಭಾರತ ತಂಡಕ್ಕೆ ಬ್ಯಾಕಪ್ ಆಟಗಾರನಾಗಿ ಕರ್ನಾಟಕದ ಯುವ ದಾಂಡಿಗ ದೇವದತ್ ಪಡಿಕ್ಕಲ್ ಎಂಟ್ರಿ ಕೊಟ್ಟಿದ್ದಾರೆ.

ಇದಕ್ಕೂ ಮುನ್ನ ದೇವದತ್ ಪಡಿಕ್ಕಲ್ ಆಸ್ಟ್ರೇಲಿಯಾ ಎ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇತ್ತ ಮೊದಲ ಟೆಸ್ಟ್ಗೆ ಶುಭ್ಮನ್ ಗಿಲ್ ಅಲಭ್ಯರಾಗಿರುವ ಕಾರಣ ಇದೀಗ ಅವರನ್ನು ಟೀಮ್ ಇಂಡಿಯಾಗೆ ಸೇರ್ಪಡೆಗೊಳಿಸಲಾಗಿದೆ.

ಮತ್ತೊಂದೆಡೆ ವೇಗಿಗಳ ವಿಭಾಗದಲ್ಲಿ ಯಶ್ ದಯಾಳ್ ಅವರನ್ನು ತಂಡಕ್ಕೆ ಸೇರಿಕೊಳ್ಳಲಾಗಿದೆ. ದಯಾಳ್ ಅವರನ್ನು ಮೀಸಲು ಆಟಗಾರರ ಪಟ್ಟಿಯಲ್ಲಿರಿಸಲಾಗಿದ್ದು, ಯಾವುದಾದರೂ ಬೌಲರ್ ಗಾಯಗೊಂಡರೆ ಅಥವಾ ಇನ್ನಿತರ ಕಾರಣಗಳಿಂದ ಹೊರಗುಳಿದರೆ ಅವರಿಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ಪರ್ತ್ನಲ್ಲಿ ನಡೆದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವ್ದತ್ ಪಡಿಕ್ಕಲ್.
Published On - 1:32 pm, Wed, 20 November 24



















