Virat Kohli: ಕಿಂಗ್ ಕೊಹ್ಲಿಯ ರಿಎಂಟ್ರಿ ಯಾವಾಗ? ಇಲ್ಲಿದೆ ಮಾಹಿತಿ
Virat Kohli: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಮತ್ತೆ ಮೈದಾನದಲ್ಲಿ ಕಾಣಿಸಿಕೊಳ್ಳುವುದು ಯಾವಾಗ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ವಿರಾಟ್ ಕೊಹ್ಲಿ ಕಂಬ್ಯಾಕ್ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
Updated on:Feb 14, 2024 | 3:13 PM

ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯಿಂದ ವಿರಾಟ್ ಕೊಹ್ಲಿ (Virat Kohli) ಹೊರಗುಳಿದಿದ್ದಾರೆ. ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾಗಿದ್ದ ಕೊಹ್ಲಿ ಇದೀಗ ಉಳಿದಿರುವ 3 ಪಂದ್ಯಗಳಿಂದ ಕೂಡ ಹಿಂದೆ ಸರಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಅವರು ಸಂಪೂರ್ಣ ಸರಣಿಗೆ ಅಲಭ್ಯರಾಗಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಮತ್ತೆ ಕಣಕ್ಕಿಳಿಯುವುದು ಯಾವಾಗ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯದ ಉತ್ತರ ಜೂನ್ ಮೊದಲ ವಾರದಲ್ಲಿ. ಅಂದರೆ ವಿರಾಟ್ ಕೊಹ್ಲಿ ಮತ್ತೆ ಭಾರತ ತಂಡದ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲು ಜೂನ್ ತಿಂಗಳವರೆಗೆ ಕಾಯಲೇಬೇಕು.

ಏಕೆಂದರೆ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಮಾರ್ಚ್ 11 ಕ್ಕೆ ಮುಗಿಯಲಿದೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಯಾವುದೇ ಪಂದ್ಯವಾಡುತ್ತಿಲ್ಲ. ಬದಲಾಗಿ ಭಾರತ ತಂಡದ ಆಟಗಾರರು ವಿಶ್ರಾಂತಿ ಪಡೆಯಲಿದ್ದಾರೆ. ಇದರ ಬೆನ್ನಲ್ಲೇ ಐಪಿಎಲ್ ಕೂಡ ಶುರುವಾಗಲಿದೆ.

ಅಂದರೆ ವಿರಾಟ್ ಕೊಹ್ಲಿ ಐಪಿಎಲ್ ಮೂಲಕ ರಿಎಂಟ್ರಿ ಕೊಡಲಿದ್ದಾರೆ. ಈ ಬಾರಿಯ ಐಪಿಎಲ್ ಮಾರ್ಚ್ 22 ರಿಂದ ಶುರುವಾಗುವ ಸಾಧ್ಯತೆಯಿದೆ. ಅದರಂತೆ ಆರ್ಸಿಬಿ ಪರ ಕಣಕ್ಕಿಳಿಯುವ ಮೂಲಕ ಕಿಂಗ್ ಕೊಹ್ಲಿ ಮತ್ತೆ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಜೂನ್ 1 ರಿಂದ ಟಿ20 ವಿಶ್ವಕಪ್ ಶುರುವಾಗಲಿದೆ. ಜೂನ್ 5 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಅಭಿಯಾನ ಶುರು ಮಾಡಲಿದೆ. ಈ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಅಂದರೆ ವಿರಾಟ್ ಕೊಹ್ಲಿಯನ್ನು ಮತ್ತೆ ಮೈದಾನದಲ್ಲಿ ನೋಡಲು ಐಪಿಎಲ್ವರೆಗೆ ಕಾಯಲೇಬೇಕು. ಹಾಗೆಯೇ ಟೀಮ್ ಇಂಡಿಯಾ ಪರ ಅವರು ಆಡುವುದನ್ನು ಎದುರು ನೋಡಲು ಟಿ20 ವಿಶ್ವಕಪ್ ಶುರುವಾಗಬೇಕಿದೆ.
Published On - 9:53 am, Sun, 11 February 24




