ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲುಂಡ ಟೀಮ್ ಇಂಡಿಯಾ

Updated on: Feb 23, 2026 | 7:33 AM

India vs South Africa: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 187 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು 18.5 ಓವರ್​ಗಳಲ್ಲಿ 111 ರನ್​ಗಳಿಸಿ ಆಲೌಟ್ ಆಗಿದೆ.

1 / 5
T20 World Cup 2026: ಟಿ20 ವಿಶ್ವಕಪ್ ಶುರುವಾಗಿ 19 ವರ್ಷಗಳಾಗಿವೆ. ಈ ಹತ್ತೊಂಬತ್ತು ವರ್ಷಗಳಲ್ಲಿ 10 ಟಿ20 ವಿಶ್ವಕಪ್ ಟೂರ್ನಿ ನಡೆದಿದೆ. ಈ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಒಮ್ಮೆಯೂ 50 ಕ್ಕಿಂತ ಹೆಚ್ಚಿನ ರನ್ ಗಳ ಅಂತರದಿಂದ ಸೋತಿರಲಿಲ್ಲ. ಆದರೆ ಈ ಬಾರಿ ಭಾರತ ತಂಡಕ್ಕೆ ಹೀನಾಯ ಸೋಲುಣಿಸುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ.

2 / 5
ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸೌತ್ ಆಫ್ರಿಕಾ ತಂಡದ ಪರ ಡೇವಿಡ್ ಮಿಲ್ಲರ್ (63) ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 187 ರನ್ ಕಲೆಹಾಕಿತು.

3 / 5
ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪವರ್​ಪ್ಲೇನಲ್ಲಿ ಕಲೆಹಾಕಿದ್ದು ಕೇವಲ 31 ರನ್​ಗಳು ಮಾತ್ರ. ಇದರ ನಡುವೆ ಮೂರು ವಿಕೆಟ್​ಗಳನ್ನು ಸಹ ಕಳೆದುಕೊಂಡಿತು. ಆ ಬಳಿಕ ಕೂಡ ಸೌತ್ ಆಫ್ರಿಕಾ ತಂಡದ ಸಾಂಘಿಕ ದಾಳಿ ಮುಂದೆ ರನ್​ಗಳಿಸಲು ಪರದಾಡಿದರು. ಪರಿಣಾಮ 18.5 ಓವರ್​ಗಳಲ್ಲಿ 111 ರನ್​ಗಳಿಸಿ ಟೀಮ್ ಇಂಡಿಯಾ ಆಲೌಟ್ ಆಗಿದೆ.

4 / 5
ಈ ಮೂಲಕ ಭಾರತ ತಂಡವು 76 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲೇ ಟೀಮ್ ಇಂಡಿಯಾದ ಅತ್ಯಂತ ಹೀನಾಯ ಸೋಲು ಎಂಬುದು ವಿಶೇಷ. ಅಂದರೆ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಒಮ್ಮೆಯೂ 50 ಕ್ಕಿಂತ ಅಧಿಕ ರನ್​ಗಳಿಂದ ಸೋತಿರಲಿಲ್ಲ.

5 / 5
2010 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 49 ರನ್​ಗಳಿಂದ ಸೋತಿದ್ದು ಈವರೆಗಿನ ಹೀನಾಯ ದಾಖಲೆಯಾಗಿತ್ತು. ಆದರೆ ಈ ಬಾರಿ ಸೌತ್ ಆಫ್ರಿಕಾ ತಂಡವು ಟೀಮ್ ಇಂಡಿಯಾವನ್ನು ಮಕಾಡೆ ಮಲಗಿಸಿದೆ. ಈ ಮೂಲಕ ಭಾರತ ತಂಡಕ್ಕೆ ಟಿ20 ವಿಶ್ವಕಪ್​ನಲ್ಲಿ ಹೀನಾಯ ಸೋಲುಣಿಸುವಲ್ಲಿ ಯಶಸ್ವಿಯಾಗಿದೆ.