IND vs AUS: ಸತತ 4ನೇ ಟೆಸ್ಟ್ ಸರಣಿ ಸೋಲು; ಭಾರತದ ಮುಂದೆ ಕಾಂಗರೂಗಳ ಆಟ ನಡೆಯಲ್ಲ..!

IND vs AUS: ಭಾರತ ತವರಿನಲ್ಲಿ ಎರಡು ಸರಣಿ ಗೆದ್ದಿದ್ದರೆ, ಆಸ್ಟ್ರೇಲಿಯಾದಲ್ಲಿ ಎರಡು ಸರಣಿ ಗೆದ್ದಿದೆ. 2017 ರಲ್ಲಿ ಆರಂಭವಾದ ಈ ವಿಜಯ ಯಾತ್ರೆ ಇಂದಿಗೂ ಮುಂದುವರೆದಿದೆ.

ಪೃಥ್ವಿಶಂಕರ
|

Updated on:Mar 13, 2023 | 5:38 PM

ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಟೀಂ ಇಂಡಿಯಾ ಗೆದ್ದು ಬೀಗಿದೆ. ಇದರೊಂದಿಗೆ ತವರಿನಲ್ಲಿ ಭಾರತವನ್ನು ಸೋಲಿಸುವ ಆಸ್ಟ್ರೇಲಿಯಾದ ಕನಸು ಭಗ್ನಗೊಂಡಿದೆ. ಅಲ್ಲದೆ ಈ ಗೆಲುವಿನೊಂದಿಗೆ ಭಾರತ ಸತತ ನಾಲ್ಕು ಟೆಸ್ಟ್ ಸರಣಿಗಳಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ದಾಖಲೆ ಬರೆದಿದೆ.

1 / 6
ಇದರಲ್ಲಿ ಭಾರತ ತವರಿನಲ್ಲಿ ಎರಡು ಸರಣಿ ಗೆದ್ದಿದ್ದರೆ, ಆಸ್ಟ್ರೇಲಿಯಾದಲ್ಲಿ ಎರಡು ಸರಣಿ ಗೆದ್ದಿದೆ. 2017 ರಲ್ಲಿ ಆರಂಭವಾದ ಈ ವಿಜಯ ಯಾತ್ರೆ ಇಂದಿಗೂ ಮುಂದುವರೆದಿದೆ.

2 / 6
2017ರಲ್ಲಿ ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸಕ್ಕೆ ಬಂದಿತ್ತು. ಆಗ ಈ ತಂಡದ ನಾಯಕತ್ವ ಸ್ಟೀವ್ ಸ್ಮಿತ್ ಅವರದ್ದಾಗಿತ್ತು. ಈ ಸರಣಿಯಲ್ಲಿ ಭಾರತ 2-1 ಅಂತರದಲ್ಲಿ ಗೆದ್ದಿತ್ತು. ಬೆಂಗಳೂರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ಗೆದ್ದಿತ್ತು. ಇದಾದ ನಂತರ ಪುಣೆಯಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತವನ್ನು ಸೋಲಿಸಿತು. ಆದರೆ ಇದಾದ ಬಳಿಕ ರಾಂಚಿಯಲ್ಲಿ ನಡೆದ ಪಂದ್ಯ ಡ್ರಾ ಆಗಿದ್ದು, ನಂತರ ಧರ್ಮಶಾಲಾದಲ್ಲಿ ನಡೆದ ನಾಲ್ಕನೇ ಪಂದ್ಯವನ್ನು ಭಾರತ ಗೆದ್ದು ಸರಣಿಯನ್ನು ಕೈವಶ ಮಾಡಿಕೊಂಡಿತ್ತು.

3 / 6
ಇದಾದ ಬಳಿಕ ಭಾರತ 2018-19ರಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿತ್ತು. ತವರಿನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವುದು ಎಂದಿಗೂ ಸುಲಭವಲ್ಲ. ಆದರೆ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ, 70 ವರ್ಷಗಳ ಬಳಿಕ ಆಸ್ಟ್ರೇಲಿಯದಲ್ಲಿ ಟೆಸ್ಟ್ ಸರಣಿ ಗೆದ್ದುಕೊಂಡಿತು. ಅಡಿಲೇಡ್‌ನಲ್ಲಿ ಆಡಿದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿತ್ತು. ಆ ಬಳಿಕ 3ನೇ ಟೆಸ್ಟ್ ಗೆದ್ದ ಭಾರತ 2-1 ಅಂತರದಿಂದ ಸರಣಿ ಗೆದ್ದುಕೊಂಡಿತು.

4 / 6
2020-21ರಲ್ಲಿ ಭಾರತ ಮತ್ತೆ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿತ್ತು. ಈ ಬಾರಿ ಅಡಿಲೇಡ್‌ನಲ್ಲಿ ಮೊದಲ ಪಂದ್ಯದಲ್ಲೇ ಭಾರತ ಮರೆಯಲಾಗದ ಸೋಲು ಕಂಡಿತ್ತು. ಈ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ಕೇವಲ 36 ರನ್‌ಗಳಿಗೆ ಆಲೌಟ್ ಆಗಿತ್ತು. ಆದರೆ ಇದರ ನಂತರ ಅದ್ಭುತ ಪುನರಾಗಮನ ಮಾಡಿದ ಭಾರತ, ಮೆಲ್ಬೋರ್ನ್‌ನಲ್ಲಿ ಗೆದ್ದು ಸಿಡ್ನಿಯಲ್ಲಿ ನಡೆದ ಮೂರನೇ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು. ಆ ಬಳಿಕ ನಾಲ್ಕನೇ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಸತತ ಎರಡನೇ ಬಾರಿಗೆ ಆಸ್ಟ್ರೇಲಿಯಾವನ್ನು ತನ್ನ ತವರಿನಲ್ಲಿಯೇ 2-1 ಅಂತರದಿಂದ ಸೋಲಿಸಿತು.

5 / 6
ತವರಿನಲ್ಲಿ ಸತತ ಎರಡು ಸರಣಿ ಸೋತಿದ್ದ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬಂದು ಟೆಸ್ಟ್ ಸರಣಿ ಗೆಲ್ಲುವ ಪ್ರಯತ್ನದಲ್ಲಿತ್ತು. ಆದರೆ ಆಸೀಸ್ ತಂಡದ ಆ ಕನಸು ಕನಸಾಗಿಯೇ ಉಳಿಯಿತು. ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಹೀನಾಯ ಸೋಲು ಕಂಡಿದ್ದ ಕಾಂಗರೂಗಳು, ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲೂ ಸೋಲೊಪ್ಪಿಕೊಂಡಿದ್ದರು. ಆ ಬಳಿಕ ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿತು. ಆದರೆ ಅಹಮದಾಬಾದ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಳ್ಳುವ ಮೂಲಕ ಮತ್ತೊಮ್ಮೆ ಆಸ್ಟ್ರೇಲಿಯಾ 2-1 ಅಂತರದಿಂದ ಟೆಸ್ಟ್ ಸರಣಿಯನ್ನು ಕಳೆದುಕೊಂಡಿತು.

6 / 6

Published On - 5:35 pm, Mon, 13 March 23

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ