IND vs AUS: ಪರ್ತ್​ ಟೆಸ್ಟ್ ಮುಗಿಯುವ ಮುನ್ನವೇ ತಂಡ ಸೇರಿಕೊಳ್ಳಲಿದ್ದಾರೆ ರೋಹಿತ್

Rohit Sharma: ಎರಡನೇ ಮಗುವಿನ ಜನನದ ಕಾರಣದಿಂದ ಪರ್ತ್‌ನಲ್ಲಿ ನಡೆಯುವ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ನವೆಂಬರ್ 24 ರಂದು ಆಸ್ಟ್ರೇಲಿಯಾ ತಲುಪುವ ನಿರೀಕ್ಷೆಯಿದೆ. ಇದರೊಂದಿಗೆ ಅವರು ಅಡಿಲೇಡ್‌ನಲ್ಲಿ ನಡೆಯುವ ಎರಡನೇ ಪಂದ್ಯಕ್ಕೆ ಸಿದ್ಧರಾಗಲಿದ್ದಾರೆ.

ಪೃಥ್ವಿಶಂಕರ
|

Updated on: Nov 21, 2024 | 6:21 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಾಳೆಯಿಂದ ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಡುತ್ತಿಲ್ಲ. ಎರಡನೇ ಮಗುವಿನ ಜನನದ ಕಾರಣದಿಂದ ಅವರು ಭಾರತ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ಹೋಗಲಿಲ್ಲ. ಇದೀಗ ಕುಟುಂಬದೊಂದಿಗೆ ಕಾಲ ಕಳೆದಿರುವ ರೋಹಿತ್ ಆಸ್ಟ್ರೇಲಿಯಾಕ್ಕೆ ಹಾರಲು ಸಜ್ಜಾಗಿದ್ದಾರೆ.

1 / 6
ಕ್ರಿಕ್‌ಬಜ್‌ನ ವರದಿಯ ಪ್ರಕಾರ, ರೋಹಿತ್ ನವೆಂಬರ್ 24 ರಂದು ಆಸ್ಟ್ರೇಲಿಯಾಕ್ಕೆ ತಲುಪುವ ಸಾಧ್ಯತೆಗಳಿವೆ. ಅಂದರೆ ಪರ್ತ್‌ನಲ್ಲಿ ನಡೆಯಲ್ಲಿರುವ ಮೊದಲ ಟೆಸ್ಟ್‌ನ ಮೂರನೇ ದಿನದಂದು ರೋಹಿತ್ ಭಾರತ ತಂಡವನ್ನು ಸೇರಿಕೊಳ್ಳಬಹುದು. ಈ ಮೊದಲು, ಸರಣಿಯ ಆರಂಭಿಕ ಪಂದ್ಯಕ್ಕೂ ಮುಂಚೆಯೇ ರೋಹಿತ್ ತಂಡವನ್ನು ಸೇರಿಕೊಳ್ಳಬಹುದು ಎಂದು ವರದಿಯಾಗಿತ್ತು.

2 / 6
ಆದರೆ ಎರಡನೇ ಮಗುವಿನ ಜನನದ ನಂತರ ಮಡದಿ ಹಾಗೂ ಕುಟುಂಬದೊಂದಿಗೆ ಇನ್ನಷ್ಟು ಸಮಯ ಇರಬೇಕೆಂದು ರೋಹಿತ್ ಬಯಸಿದ್ದರು. ಹೀಗಾಗಿ ರೋಹಿತ್ ಅವರನ್ನು ಮೊದಲ ಟೆಸ್ಟ್​ನಿಂದ ಹೊರಗಿಡಲಾಗಿತ್ತು. ಇದೀಗ ರೋಹಿತ್ ನವೆಂಬರ್ 22 ರ ಬೆಳಿಗ್ಗೆ ಆಸ್ಟ್ರೇಲಿಯಾವನ್ನು ತಲುಪುವ ಸಾಧ್ಯತೆಗಳಿದ್ದು, ಎರಡನೇ ಟೆಸ್ಟ್​ನಲ್ಲಿ ಆಡುವುದನ್ನು ಕಾಣಬಹುದಾಗಿದೆ.

3 / 6
ಕ್ರಿಕ್‌ಬಜ್ ವರದಿಯ ಪ್ರಕಾರ, ರೋಹಿತ್ ಅವರು ಭಾನುವಾರ ತಂಡವನ್ನು ಸೇರಿಕೊಳ್ಳುವುದಾಗಿ ಬಿಸಿಸಿಐಗೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇದರರ್ಥ, ಡಿಸೆಂಬರ್ 6 ರಿಂದ ಅಡಿಲೇಡ್‌ನಲ್ಲಿ ನಡೆಯಲಿರುವ ಈ ಸರಣಿಯ ಎರಡನೇ ಪಂದ್ಯಕ್ಕೆ ರೋಹಿತ್ ಲಭ್ಯವಿರುತ್ತಾರೆ. ಪರ್ತ್ ಟೆಸ್ಟ್ ನಂತರ ಕ್ಯಾನ್‌ಬೆರಾದಲ್ಲಿ ಪ್ರೈಮ್ ಮಿನಿಸ್ಟರ್ 11ರ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಬೇಕಾಗಿದೆ. ಹೀಗಾಗಿ ರೋಹಿತ್ ಕೂಡ ಈ ಪಂದ್ಯದಲ್ಲಿ ಆಡುವುದನ್ನು ಕಾಣಬಹುದು.

4 / 6
ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೆ ಅವರು ನವೆಂಬರ್ 15 ರಂದು ತಡರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆ ಬಳಿಕ ಮೊದಲ ಟೆಸ್ಟ್​ಗೂ ಮುನ್ನ ರೋಹಿತ್ ತಂಡವನ್ನು ಸೇರಿಕೊಳ್ಳಬಹುದು ಎಂದು ವರದಿಯಾಗಿತ್ತು. ಆದರೆ ಈ ಬಗ್ಗೆ ಮಾಹಿತಿ ನೀಡಿದ್ದ ಕೋಚ್ ಗಂಭೀರ್, ರೋಹಿತ್ ಮೊದಲ ಟೆಸ್ಟ್​ಗೆ  ಅಲಭ್ಯರಾಗಲಿದ್ದು, ಅವರ ಸ್ಥಾನದಲ್ಲಿ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ ಎಂದಿದ್ದರು.

5 / 6
ಪರ್ತ್ ಟೆಸ್ಟ್‌ಗೆ ಟೀಂ ಇಂಡಿಯಾ: ಜಸ್ಪ್ರೀತ್ ಬುಮ್ರಾ (ನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ದೇವದತ್ ಪಡಿಕ್ಕಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಸಿಡೇಜಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

6 / 6
Follow us
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ

ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ

ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ

ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!

ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP

ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ