ಬಾಕ್ಸಿಂಗ್ ಡೇ ಟೆಸ್ಟ್​​: ಮೂರು ತಂಡಗಳಿಗೆ ನಿರ್ಣಾಯಕ ಪಂದ್ಯ

|

Updated on: Dec 24, 2024 | 8:30 AM

WTC Final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್ ಪಂದ್ಯವು ಜೂನ್ 11 ರಿಂದ ಶುರುವಾಗಲಿದೆ. ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಯಾವ ತಂಡಗಳು ಕಣಕ್ಕಿಳಿಯಲಿದೆ ಎಂಬುದೇ ಈಗ ಕುತೂಹಲ. ಏಕೆಂದರೆ ಫೈನಲ್​ ರೇಸ್​ನಲ್ಲಿ ಭಾರತ, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳಿದ್ದು, ಈ ಮೂರು ತಂಡಗಳಲ್ಲಿ ಎರಡು ಟೀಮ್ ಫೈನಲ್ ಆಡುವುದು ಬಹುತೇಕ ಖಚಿತ.

1 / 5
ಡಿಸೆಂಬರ್ 26... ಕ್ರಿಸ್​ಮಸ್ ಹಬ್ಬದ ಮರುದಿನ ನಾಲ್ಕು ತಂಡಗಳು ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ 4 ತಂಡಗಳಲ್ಲಿ ಮೂರು ತಂಡಗಳಿಗೆ ಈ ಪಂದ್ಯವು ನಿರ್ಣಾಯಕ. ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಲು ಭಾರತ, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವೆ ನೇರ ಪೈಪೋಟಿ ಇದೆ. ಈ ಪೈಪೋಟಿಯಲ್ಲಿ ಮುಂದುವರೆಯಬೇಕಿದ್ದರೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು.

2 / 5
ಇಲ್ಲಿ ಡಿಸೆಂಬರ್ 26 ರಂದು ಸೆಂಚುರಿಯನ್​​ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯಗಳಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ ಆಡುವುದು ಖಚಿತವಾಗಲಿದೆ.

3 / 5
ಮತ್ತೊಂದೆಡೆ ಡಿಸೆಂಬರ್ 26 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯ ಶುರುವಾಗಲಿದೆ. ಈ ಮ್ಯಾಚ್​ನಲ್ಲಿ ಗೆದ್ದರೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಸುಗಮಗೊಳಿಸಬಹುದು. ಅತ್ತ ಆಸ್ಟ್ರೇಲಿಯಾ ತಂಡ ಫೈನಲ್ ರೇಸ್​ನಲ್ಲಿ ಉಳಿದುಕೊಳ್ಳಲು ಭಾರತದ ವಿರುದ್ಧ ಗೆಲ್ಲಬೇಕು.

4 / 5
ಏಕೆಂದರೆ ಟೀಮ್ ಇಂಡಿಯಾ ಮೆಲ್ಬೋರ್ನ್​ ಹಾಗೂ ಸಿಡ್ನಿ ಟೆಸ್ಟ್​ಗಳಲ್ಲಿ ಜಯ ಸಾಧಿಸಿದರೆ ಫೈನಲ್ ಆಡುವುದು ಬಹುತೇಕ ಖಚಿತವಾಗಲಿದೆ. ಏಕೆಂದರೆ ಆ ಬಳಿಕ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಸರಣಿ ಗೆದ್ದರೂ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾವನ್ನು ಹಿಂದಿಕ್ಕಲಾಗುವುದಿಲ್ಲ. ಹೀಗಾಗಿ ಆಸೀಸ್ ಪಾಲಿಗೂ ಬಾಕ್ಸಿಂಗ್ ಡೇ ಟೆಸ್ಟ್ ನಿರ್ಣಾಯಕ.

5 / 5
ಅದರಂತೆ ಈ ಬಾರಿಯ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಮೂರು ತಂಡಗಳ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​​ನ ಭವಿಷ್ಯವನ್ನು ನಿರ್ಧರಿಸಲಿದೆ ಎಂದರೆ ತಪ್ಪಾಗಲಾರದು. ಹೀಗಾಗಿ ಡಿಸೆಂಬರ್ 26 ರಿಂದ ಸೆಂಚುರಿಯನ್​ನಲ್ಲಿ ಸೌತ್ ಆಫ್ರಿಕಾ vs ಪಾಕಿಸ್ತಾನ್ ನಡುವೆ, ಮೆಲ್ಬೋರ್ನ್​ನಲ್ಲಿ ಭಾರತ vs ಆಸ್ಟ್ರೇಲಿಯಾ ನಡುವೆ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.