- Kannada News Photo gallery Cricket photos BPL 2023: Azam Khan scored 109 runs off 58 balls Kannada News zp
BPL 2023: 8 ಸಿಕ್ಸ್, 9 ಫೋರ್: ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ ಮಾಜಿ ಕ್ರಿಕೆಟಿಗನ ಪುತ್ರ
BPL 2023: ಈ ಪಂದ್ಯದಲ್ಲಿ ಟಾಸ್ ಗೆದ್ದ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡವು ಎದುರಾಳಿ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಖುಲ್ನಾ ಟೈಗರ್ಸ್ ಉತ್ತಮ ಆರಂಭ ಪಡೆದಿರಲಿಲ್ಲ.
Updated on: Jan 09, 2023 | 9:25 PM

ಬಾಂಗ್ಲಾದೇಶ್ನಲ್ಲಿ ನಡೆಯುತ್ತಿರುವ ಬಿಪಿಎಲ್ (ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್) ಟೂರ್ನಿಯಲ್ಲಿ ಆಜಂ ಖಾನ್ ಭರ್ಜರಿ ಶತಕ ಬಾರಿಸಿ ಮಿಂಚಿದ್ದಾರೆ. ಶೇರ್ ಇ ಬಾಂಗ್ಲಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಚಟ್ಟೋಗ್ರಾಮ್ ಚಾಲೆಂಜರ್ಸ್ ಹಾಗೂ ಖುಲ್ನಾ ಟೈಗರ್ಸ್ ತಂಡಗಳು ಮುಖಾಮುಖಿಯಾಗಿತ್ತು.

ಟಾಸ್ ಗೆದ್ದ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡವು ಎದುರಾಳಿ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಖುಲ್ನಾ ಟೈಗರ್ಸ್ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 12 ರನ್ಗೆ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಈ ವೇಳೆ ಕಣಕ್ಕಿಳಿದ ಆಜಂ ಖಾನ್ ಸ್ಪೋಟಕ ಇನಿಂಗ್ಸ್ ಆಡಿದರು.

ಚಟ್ಟೋಗ್ರಾಮ್ ಚಾಲೆಂಜರ್ಸ್ ಬೌಲರ್ಗಳ ವಿರುದ್ಧ ಅಬ್ಬರಿಸಿದ್ದ ಆಜಂ ಖಾನ್ 8 ಭರ್ಜರಿ ಸಿಕ್ಸರ್ ಸಿಡಿಸಿದರು. ಅಲ್ಲದೆ 9 ಫೋರ್ಗಳೊಂದಿಗೆ 57 ಎಸೆತಗಳಲ್ಲಿ ಶತಕ ಪೂರೈಸಿದರು. ಶತಕದ ಬಳಿಕ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ 58 ಎಸೆತಗಳಲ್ಲಿ ಅಜೇಯ 109 ರನ್ ಚಚ್ಚಿದರು. ಆಜಂ ಖಾನ್ ಅವರ ಈ ಶತಕದ ನೆರವಿನಿಂದ ಖುಲ್ನಾ ಟೈಗರ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿತು.

ವಿಶೇಷ ಎಂದರೆ ಇದು ಟಿ20 ಕ್ರಿಕೆಟ್ನಲ್ಲಿ ಆಜಂ ಖಾನ್ ಅವರ ಮೊದಲ ಶತಕವಾಗಿದೆ. ಈ ಹಿಂದೆ ಪಾಕಿಸ್ತಾನ್ ಪರ 3 ಟಿ20 ಪಂದ್ಯವಾಡಿದ್ದರೂ ಎರಡಂಕಿ ಮೊತ್ತಗಳಿಸಲು ಸಾಧ್ಯವಾಗಿರಲಿಲ್ಲ. ಅಲ್ಲದೆ ಹಲವು ಲೀಗ್ ಪಂದ್ಯಗಳಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ಕಾಣಿಸಿಕೊಂಡಿದ್ದ ಆಜಂ 10 ಅರ್ಧಶತಕಗಳನ್ನು ಮಾತ್ರ ಬಾರಿಸಿದ್ದರು. ಇದೀಗ ಬಿಪಿಎಲ್ ಮೂಲಕ ಚೊಚ್ಚಲ ಟಿ20 ಶತಕ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಂದಹಾಗೆ ಆಜಂ ಖಾನ್ ಪಾಕಿಸ್ತಾನದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಮೊಯೀನ್ ಖಾನ್ ಅವರ ಪುತ್ರ. ತಂದೆಯ ಹಾದಿಯಲ್ಲೇ ಹೊಸ ಹೆಜ್ಜೆಯನ್ನಿಟ್ಟಿರುವ 24 ವರ್ಷದ ಆಜಂ ಕೂಡ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ಗುರುತಿಸಿಕೊಂಡಿದ್ದಾರೆ.



















