
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ಭರ್ಜರಿ ದಾಖಲೆ ನಿರ್ಮಿಸಿರುವುದು ಝಿಂಬಾಬ್ವೆಯ ಬ್ರಿಯಾನ್ ಬೆನ್ನೆಟ್ (Brian Bennett). ಹರಾರೆಯಲ್ಲಿ ನಡೆದ ಟಿ20 ವಿಶ್ವಕಪ್‌ನ ಅರ್ಹತಾ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಬ್ರಿಯಾನ್ ಈ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ತಾಂಝನಿಯ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ಪರ ಆರಂಭಿಕನಾಗಿ ಕಣಕ್ಕಿಳಿದ ಬ್ರಿಯಾನ್ ಬೆನ್ನೆಟ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆಕ್ರಮಣಕಾರಿ ಬ್ಯಾಟಿಂಗ್ ಗೆ ಒತ್ತು ನೀಡಿದ್ದ ಬ್ರಿಯಾನ್ 60 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 15 ಫೋರ್ ಗಳೊಂದಿಗೆ 111 ಬಾರಿಸಿದ್ದಾರೆ.

ಈ ಭರ್ಜರಿ ಶತಕದೊಂದಿಗೆ ಬ್ರಿಯಾನ್ ಬೆನ್ನೆಟ್ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲೂ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಅಹ್ಮದ್ ಶೆಹಝಾದ್ ಹೆಸರಿನಲ್ಲಿತ್ತು.

ಪಾಕಿಸ್ತಾನದ ಅಹ್ಮದ್ ಶೆಹಝಾದ್ 22ನೇ ವಯಸ್ಸಿನಲ್ಲಿ ಏಕದಿನ, ಟಿ20 ಹಾಗೂ ಟೆಸ್ಟ್‌ನಲ್ಲಿ ಶತಕ ಸಿಡಿಸಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲಿ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಈ ಭರ್ಜರಿ ದಾಖಲೆಯನ್ನು ಅಳಿಸಿ ಹಾಕಿ, ಬ್ರಿಯಾನ್ ಬೆನ್ನೆಟ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. 21ನೇ ವಯಸ್ಸಿನಲ್ಲೇ ಟಿ20, ಏಕದಿನ ಹಾಗೂ ಟೆಸ್ಟ್ ಶತಕ ಬಾರಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲಿ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಬ್ರಿಯಾನ್ ಬೆನ್ನೆಟ್ ತಮ್ಮದಾಗಿಸಿಕೊಂಡಿದ್ದಾರೆ.