Brian Lara Stadium Pitch Report: ಭಾರತ-ವೆಸ್ಟ್ ಇಂಡೀಸ್ ಮೊದಲ ಟಿ20 ಪಂದ್ಯಕ್ಕೆ ಪಿಚ್ ಹೇಗಿದೆ?: ಇಲ್ಲಿದೆ ಮಾಹಿತಿ

|

Updated on: Aug 03, 2023 | 8:20 AM

WI vs IND 1st T20I: ಮೊದಲ ಟಿ20 ಪಂದ್ಯ ನಡೆಯಲಿರುವ ಟ್ರಿನಿಡಾಡ್​ನ ಬ್ರಿಯನ್ ಲಾರಾ ಸ್ಟೇಡಿಯಂನ ಪಿಚ್ ಅದ್ಭುತವಾಗಿದೆ. ಇಲ್ಲಿನ ಮೇಲ್ಮೈ ಬೌಲಿಂಗ್ ಸ್ನೇಹಿಯಾಗಿದೆ. ಇದು ನಿಧಾನವಾದ ಪಿಚ್ ಆಗಿದ್ದು ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಾಯ ಮಾಡುತ್ತದೆ.

1 / 8
ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ ಇಂದಿನಿಂದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈಗಾಗಲೇ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಹಾಗೂ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ ಟಿ20 ಸರಣಿ ಮೇಲೂ ಕಣ್ಣಿಟ್ಟಿದೆ.

2 / 8
ಇಂದು ಟ್ರಿನಿಡಾಡ್​ನ ಬ್ರಿಯನ್ ಲಾರಾ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ರೋಹಿತ್, ಕೊಹ್ಲಿ, ಸಿರಾಜ್, ಜಡೇಜಾ ರಂತಹ ಹಿರಿಯ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಹೆಚ್ಚು ಯುವ ಆಟಗಾರರಿಂದಲೇ ಕೂಡಿದೆ.

3 / 8
ಮೊದಲ ಟಿ20 ಪಂದ್ಯ ನಡೆಯಲಿರುವ ಟ್ರಿನಿಡಾಡ್​ನ ಬ್ರಿಯನ್ ಲಾರಾ ಸ್ಟೇಡಿಯಂನ ಪಿಚ್ ಅದ್ಭುತವಾಗಿದೆ. ಇಲ್ಲಿನ ಮೇಲ್ಮೈ ಬೌಲಿಂಗ್ ಸ್ನೇಹಿಯಾಗಿದೆ. ಇದು ನಿಧಾನವಾದ ಪಿಚ್ ಆಗಿದ್ದು ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಾಯ ಮಾಡುತ್ತದೆ.

4 / 8
ವೇಗಿಗಳು ಇಲ್ಲಿ ನಿಧಾನಗತಿಯ ಬೌಲಿಂಗ್‌ನಲ್ಲಿ ಹೆಚ್ಚು ಯಶಸ್ಸು ಪಡೆಯುವ ಸಾಧ್ಯತೆಯಿದೆ. ಇಲ್ಲಿ ಈವರೆಗೆ ಒಂದು T20I ಅನ್ನು ಮಾತ್ರ ಆಯೋಜಿಸಲಾಗಿದೆ. ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವು ಪಂದ್ಯವನ್ನು ಗೆದ್ದಿತು.

5 / 8
ಭಾರತ-ವಿಂಡೀಸ್ ತೃತೀಯ ಏಕದಿನ ಕೂಡ ಇದೇ ಮೈದನಾದಲ್ಲಿ ನಡೆದಿತ್ತು. ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವು ಗೆದ್ದಿತು. ಭಾರತ ದೊಡ್ಡ ಸ್ಕೋರ್ ಕಲೆಹಾಕಿತ್ತು.

6 / 8
ಭಾರತ ಹಾಗೂ ವೆಸ್ಟ್ ಇಂಡೀಸ್ ಈ ಮೈದಾನದಲ್ಲಿ ಒಂದು ಟಿ20 ಪಂದ್ಯವನ್ನು ಆಡಿದೆ. 2022 ರಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಜಯ ಸಾಧಿಸಿತ್ತು. ಒಟ್ಟಾರೆಯಾಗಿ 36 ಟಿ20 ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟಿಂಗ್ ಮಾಡಿದ ತಂಡ 17 ಬಾರಿ ಗೆಲುವು ಕಂಡಿದೆ.

7 / 8
ವರುಣನ ಕಾಟ ಇದೆಯೇ ಎಂಬುದನ್ನು ನೋಡುವುದಾದರೆ, ವೆಸ್ಟ್ ಇಂಡೀಸ್ ಸಮಯ ಬೆಳಗ್ಗೆ 6 ಗಂಟೆಗೆ ಮತ್ತು ಸಂಜೆ 4 ಗಂಟೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಆದರೆ, ಪಂದ್ಯವು ಸ್ಥಳೀಯ ಕಾಲಮಾನ 10:30 AM ಗೆ ಪ್ರಾರಂಭವಾಗಿ 2:30 PM ಗೆ ಮುಕ್ತಾಯವಾಗಲಿರುವುದರಿಂದ ಆಟಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿಲ್ಲ.

8 / 8
ಭಾರತ-ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟಿ20 ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಶುರುವಾಗಲಿದೆ. ದೂರದರ್ಶನ ಸ್ಪೋರ್ಟ್ಸ್ (ಡಿಡಿ ಸ್ಪೋರ್ಟ್ಸ್) ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ. ಜೊತೆಗೆ ಲೈವ್ ಸ್ಟ್ರೀಮಿಂಗ್ FanCode ಮತ್ತು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.