IND vs AUS: ಬುಮ್ರಾಸ್ತ್ರಕ್ಕೆ ದಿಗ್ಗಜ ವೇಗಿಗಳ ಅಪರೂಪದ ದಾಖಲೆಗಳೆಲ್ಲ ಉಡೀಸ್..!

Jasprit Bumrah Record-Breaking Bowling: ಪರ್ತ್‌ನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಪಂದ್ಯದ ಮೊದಲ ದಿನ ಜಸ್ಪ್ರೀತ್ ಬುಮ್ರಾ ಅವರು ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಅವರು 10 ಓವರ್‌ಗಳಲ್ಲಿ 17 ರನ್ ನೀಡಿ 4 ವಿಕೆಟ್‌ಗಳನ್ನು ಪಡೆದರು. ಬುಮ್ರಾರ ಮಾರಕ ದಾಳಿಗೆ ನಲುಗಿದ ಆಸ್ಟ್ರೇಲಿಯಾ 67 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಇದರೊಂದಿಗೆ ಬುಮ್ರಾ ಹಲವು ದಾಖಲೆಗಳನ್ನು ಮುರಿದರು.

ಪೃಥ್ವಿಶಂಕರ
|

Updated on:Nov 22, 2024 | 4:25 PM

ಪರ್ತ್ ಟೆಸ್ಟ್‌ನ ಮೊದಲ ದಿನದಾಟ ಮುಕ್ತಾಯಗೊಂಡಿದೆ. ಆಸ್ಟ್ರೇಲಿಯ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ಕಳೆದುಕೊಂಡು 67 ರನ್ ಗಳಿಸಿದರೆ, ಇತ್ತ ಮೊದಲು ಬ್ಯಾಟ್ ಮಾಡಿದ ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್ ಗಳಿಸಿತ್ತು. ಈ ನಿಟ್ಟಿನಲ್ಲಿ ಆಸ್ಟ್ರೇಲಿಯಾ ಇನ್ನೂ 83 ರನ್‌ಗಳ ಹಿನ್ನಡೆ ಅನುಭವಿಸಿದೆ. ಇನ್ನು ಆಸ್ಟ್ರೇಲಿಯಾವನ್ನು ಇಷ್ಟು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಜಸ್ಪ್ರೀತ್ ಬುಮ್ರಾ ಪ್ರಮುಖ ಪಾತ್ರವಹಿಸಿದರು.

1 / 6
ವಾಸ್ತವವಾಗಿ ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕತ್ವವನ್ನು ಬುಮ್ರಾ ವಹಿಸಿಕೊಂಡಿದ್ದಾರೆ. ಹೀಗಾಗಿ ನಾಯಕತ್ವದ ಜೊತೆಗೆ ಬೌಲಿಂಗ್ ವಿಭಾಗವನ್ನು ಮುನ್ನಡೆಸುವ ಜವಬ್ದಾರಿ ಬುಮ್ರಾ ಮೇಲಿತ್ತು. ಈ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ ಬುಮ್ರಾ, ಮೊದಲ ದಿನ 10 ಓವರ್‌ಗಳಲ್ಲಿ ಕೇವಲ 17 ರನ್ ನೀಡಿ 4 ವಿಕೆಟ್ ಪಡೆದರು.

2 / 6
ಈ ಮೂಲಕ ಬುಮ್ರಾ, ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಪಡೆದ ಭಾರತದ ಬೌಲರ್​ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ತಲುಪಿದ್ದಾರೆ. ಬುಮ್ರಾ ಆಸ್ಟ್ರೇಲಿಯಾ ನೆಲದಲ್ಲಿ ಎಂಟನೇ ಟೆಸ್ಟ್ ಆಡುತ್ತಿದ್ದು ಇದುವರೆಗೆ 35 ವಿಕೆಟ್ ಪಡೆದಿದ್ದಾರೆ.

3 / 6
ಇದರೊಂದಿಗೆ ಅವರು ಆಸ್ಟ್ರೇಲಿಯಾದಲ್ಲಿ 35 ಟೆಸ್ಟ್ ವಿಕೆಟ್‌ಗಳನ್ನು ಪಡೆದ ಮಾಜಿ ಸ್ಪಿನ್ನರ್ ಬಿಷನ್ ಸಿಂಗ್ ಬೇಡಿ ಅವರ ದಾಖಲೆಯನ್ನು ಮುರಿದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಕಪಿಲ್ ದೇವ್ (51 ವಿಕೆಟ್), ಅನಿಲ್ ಕುಂಬ್ಳೆ (49 ವಿಕೆಟ್) ಮತ್ತು ರವಿಚಂದ್ರನ್ ಅಶ್ವಿನ್ (39 ವಿಕೆಟ್) ಮಾತ್ರ ಅವರಿಗಿಂತ ಮುಂದಿದ್ದಾರೆ.

4 / 6
ಇದಲ್ಲದೆ ಆಸೀಸ್ ಬ್ಯಾಟಿಂಗ್ ವಿಭಾಗದ ಮೊದಲ 3 ವಿಕೆಟ್ಗಳನ್ನು ಉರುಳಿಸಿದ ಜಸ್ಪ್ರೀತ್ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಬರೆದಿದ್ದು, ಡೇಲ್ ಸ್ಟೇನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಬುಮ್ರಾ, ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅವರನ್ನು ಗೋಲ್ಡನ್ ಡಕ್‌ಗೆ ಔಟ್ ಮಾಡಿದರು. ಇದರೊಂದಗೆ ಈ ಸಾಧನೆ ಮಾಡಿದ ವಿಶ್ವದ ಎರಡನೇ ಬೌಲರ್ ಎನಿಸಿಕೊಂಡರು. ಬುಮ್ರಾಗೂ ಮೊದಲು ಡೇಲ್ ಸ್ಟೇನ್ ಮಾತ್ರ ಸ್ಮಿತ್‌ರನ್ನು ಗೋಲ್ಡನ್ ಡಕ್‌ಗೆ ಹೊರಹಾಕಿದ್ದರು.

5 / 6
ಇದಲ್ಲದೆ ಬುಮ್ರಾ, ಕಳೆದ 24 ವರ್ಷಗಳಲ್ಲಿ ಅತ್ಯುತ್ತಮ ಬೌಲಿಂಗ್ ಸರಾಸರಿ ಹೊಂದಿರುವ ಬೌಲರ್ ಎನಿಸಿಕೊಂಡಿದ್ದಾರೆ. 2000 ರಿಂದ 100 ಕ್ಕೂ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಪಡೆದಿರುವ ಬೌಲರ್‌ಗಳ ಪೈಕಿ ಬುಮ್ರಾ ಅವರ ಬೌಲಿಂಗ್ ಸರಾಸರಿ 20.3 ಆಗಿದೆ. ಅಂದರೆ ಅವರು ಪ್ರತಿ 20.3 ಎಸೆತಗಳಿಗೆ ಒಂದು ವಿಕೆಟ್ ಪಡೆಯುತ್ತಿದ್ದಾರೆ. ಇದರೊಂದಿಗೆ ಬುಮ್ರಾ, 20.8 ರ ಸರಾಸರಿಯಲ್ಲಿ ಈ ಸಾಧನೆ ಮಾಡಿದ್ದ ಮಾಜಿ ಆಸೀಸ್ ವೇಗಿ ಗ್ಲೆನ್ ಮೆಕ್‌ಗ್ರಾತ್ ಅವರನ್ನು ಹಿಂದಿಕ್ಕಿದ್ದಾರೆ.

6 / 6

Published On - 4:23 pm, Fri, 22 November 24

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ