Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸ್ಟ್ರೇಲಿಯಾದಲ್ಲಿ ಕಪಿಲ್ ದೇವ್ ದಾಖಲೆ ಮುರಿಯಲು ಸಜ್ಜಾದ ಬುಮ್ರಾ

Jasprit Bumrah: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ತಂಡದ ನಾಯಕತ್ವ ವಹಿಸಲಿದ್ದಾರೆ. ಇದರ ಜೊತೆಗೆ, ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್​ಗಳ ಪೈಕಿ ಕಪಿಲ್ ದೇವ್ ಅವರ ದಾಖಲೆಯನ್ನು ಮುರಿಯುವ ಅವಕಾಶ ಬುಮ್ರಾಗೆ ಇದೆ.

ಪೃಥ್ವಿಶಂಕರ
|

Updated on:Nov 18, 2024 | 10:42 PM

 ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನವೆಂಬರ್ 22 ರಿಂದ ಪರ್ತ್‌ನಲ್ಲಿ ಪ್ರಾರಂಭವಾಗಲಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಿರುವ ಕಾರಣ, ತಂಡದ ಉಪನಾಯಕ ಜಸ್ಪ್ರೀತ್ ಬುಮ್ರಾ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

1 / 6
ಟೆಸ್ಟ್ ನಾಯಕನಾಗಿ ಇದುವರೆಗೂ ಒಂದೇ ಒಂದು ಗೆಲುವು ಕಂಡಿರದ ಬುಮ್ರಾಗೆ ಆಸೀಸ್ ವಿರುದ್ಧದ ಈ ಮೊದಲ ಪಂದ್ಯ ಅತ್ಯಂತ ಮುಖ್ಯವಾಗಿದೆ. ಇದರ ಜೊತೆಗೆ ಆಟಗಾರನಾಗಿಯೂ ಬುಮ್ರಾಗೆ ದಾಖಲೆ ಮುರಿಯುವ ಅವಕಾಶವಿದ್ದು, ಕಾಂಗರೂಗಳ ನಾಡಲ್ಲಿ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರ ದಾಖಲೆ ಮುರಿಯಲು ಬುಮ್ರಾ ಸಜ್ಜಾಗಿದ್ದಾರೆ.

2 / 6
ವಾಸ್ತವವಾಗಿಆಸ್ಟ್ರೇಲಿಯಾ ನೆಲದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಆಟಗಾರ ಪೈಕಿ ತಂಡದ ಮಾಜಿ ನಾಯಕ ಕಪಿಲ್ ದೇವ್ ಅಗ್ರಸ್ಥಾನದಲ್ಲಿದ್ದಾರೆ. ಆದರೆ ಈಗ ಜಸ್ಪ್ರೀತ್ ಬುಮ್ರಾ ಈ ದಾಖಲೆಯನ್ನು ಮುರಿಯಲು ಕೆಲವೇ ಹೆಜ್ಜೆಗಳ ಅಂತರದಲ್ಲಿದ್ದಾರೆ.

3 / 6
ಕಪಿಲ್ ದೇವ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 11 ಟೆಸ್ಟ್ ಪಂದ್ಯಗಳನ್ನು ಆಸ್ಟ್ರೇಲಿಯಾದಲ್ಲಿ ಆಡಿದ್ದು, ಇದರಲ್ಲಿ ಒಟ್ಟು 51 ವಿಕೆಟ್ ಪಡೆದಿದ್ದಾರೆ. ಆದರೆ ಜಸ್ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ನೆಲದಲ್ಲಿ ಇದುವರೆಗೆ ಕೇವಲ 7 ಪಂದ್ಯಗಳನ್ನಾಡಿದ್ದು, 32 ವಿಕೆಟ್ ಪಡೆದಿದ್ದಾರೆ. ಹೀಗಾಗಿ ಬುಮ್ರಾ, ಕಪಿಲ್ ದೇವ್ ಅವರ ದಾಖಲೆಯನ್ನು ಮುರಿಯಲು ಕೇವಲ 20 ವಿಕೆಟ್‌ಗಳ ಅಂತರದಲ್ಲಿದ್ದಾರೆ.

4 / 6
ಮುಂಬರುವ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಒಟ್ಟು 5 ಟೆಸ್ಟ್ ಪಂದ್ಯಗಳು ನಡೆಯಲಿವೆ. ಇಂತಹ ಪರಿಸ್ಥಿತಿಯಲ್ಲಿ ಬುಮ್ರಾ 10 ಇನ್ನಿಂಗ್ಸ್​ಗಳಲ್ಲಿ 20 ವಿಕೆಟ್ ಕಬಳಿಸುವ ಮೂಲಕ ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರನ್ನು ಚಿರಸ್ಥಾಯಿಯಾಗಿಸಿಕೊಳ್ಳಲಿದ್ದಾರೆ. ಇದಕ್ಕೆ ಪೂರಕವಾಗಿ ಆಸ್ಟ್ರೇಲಿಯಾದ ಪಿಚ್‌ಗಳಲ್ಲಿ ವೇಗದ ಬೌಲರ್‌ಗಳು ಮೇಲುಗೈ ಸಾಧಿಸುವುದರಿಂದ ಬುಮ್ರಾಗೆ ಈ ದಾಖಲೆ ಮಾಡಲು ಅಷ್ಟು ಕಷ್ಟವಾಗದು.

5 / 6
ಕಾಂಗರೂಗಳ ನಾಡಲ್ಲಿ ಅಧಿಕ ವಿಕೆಟ್ ಪಡೆದವರ ಪೈಕಿ ಕಪಿಲ್ ದೇವ್ 51 ವಿಕೆಟ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಅನಿಲ್ ಕುಂಬ್ಳೆ 49 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಇದುವರೆಗೆ 39 ವಿಕೆಟ್ ಪಡೆದಿರುವ ಆರ್ ಅಶ್ವಿನ್ ಇದ್ದು, ಬಿಶನ್ ಸಿಂಗ್ ಬೇಡಿ 35 ವಿಕೆಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಬುಮ್ರಾ 32 ವಿಕೆಟ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

6 / 6

Published On - 10:40 pm, Mon, 18 November 24

Follow us