AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್​

India Women vs Sri Lanka Women: ತಿರುವನಂತಪುರದ ಗ್ರೀನ್​ಫೀಲ್ಡ್​ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 20 ಓವರ್​ಗಳಲ್ಲಿ 112 ರನ್​ ಕಲೆಹಾಕಿದರೆ, ಟೀಮ್ ಇಂಡಿಯಾ 13.2 ಓವರ್​​ಗಳಲ್ಲಿ ಈ ಗುರಿ ಚೇಸಿಂಗ್ ಮಾಡುವ ಮೂಲಕ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Dec 27, 2025 | 8:53 AM

Share
ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಮಹಿಳಾ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕ್ರಮವಾಗಿ 8 ಮತ್ತು 7 ವಿಕೆಟ್​ಗಳ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಮೂರನೇ ಮ್ಯಾಚ್​ನಲ್ಲಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

1 / 5
ಈ ಗೆಲುವಿನೊಂದಿಗೆ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕಿ ಎಂಬ ವಿಶ್ವ ದಾಖಲೆಯೊಂದು ಹರ್ಮನ್​ಪ್ರೀತ್ ಕೌರ್ ಪಾಲಾಗಿದೆ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಗೆಲುವು ತಂಡ ನಾಯಕಿ ಎಂಬ ಹೆಗ್ಗಳಿಕೆಯನ್ನು ಹರ್ಮನ್​ಪ್ರೀತ್ ತಮ್ಮದಾಗಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್​ ಹೆಸರಿನಲ್ಲಿತ್ತು. 2014 ರಿಂದ 2023 ರವರೆಗೆ ಆಸ್ಟ್ರೇಲಿಯಾ ತಂಡವನ್ನು 100 ಪಂದ್ಯಗಳಲ್ಲಿ ಮುನ್ನಡೆಸಿದ್ದ ಲ್ಯಾನಿಂಗ್ 76 ಮ್ಯಾಚ್​ಗಳಲ್ಲಿ ಗೆಲುವು ಸಾಧಿಸಿದ್ದರು. ಈ ಮೂಲಕ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕಿ ಎನಿಸಿಕೊಂಡಿದ್ದರು.

3 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಟೀಮ್ ಇಂಡಿಯಾ ನಾಯಕಿ ಹರ್ಮನ್​​ಪ್ರೀತ್ ಕೌರ್​ ಯಶಸ್ವಿಯಾಗಿದ್ದಾರೆ. ಭಾರತ ತಂಡವನ್ನು ಈವರೆಗೆ 131 ಪಂದ್ಯಗಳಲ್ಲಿ ಮುನ್ನಡೆಸಿರುವ ಹರ್ಮನ್​ಪ್ರೀತ್ ಒಟ್ಟು 77 ಮ್ಯಾಚ್​ಗಳಲ್ಲಿ ಗೆಲುವು ತಂದುಕೊಟ್ಟಿದ್ದಾರೆ. 

4 / 5
ಈ ಗೆಲುವುಗಳೊಂದಿಗೆ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಗೆಲುವು ಕಂಡ ನಾಯಕಿ ಎಂಬ ವಿಶ್ವ ದಾಖಲೆಯನ್ನು ಹರ್ಮನ್​ಪ್ರೀತ್ ಕೌರ್ ತಮ್ಮದಾಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ವರೆಗೆ ಹರ್ಮನ್​ಪ್ರೀತ್ ಭಾರತ ಟಿ20 ತಂಡದ ನಾಯಕಿಯಾಗಿ ಮುಂದುವರೆಯಲಿದ್ದಾರೆ. ಹೀಗಾಗಿ ಅವರ ಕಡೆಯಿಂದ ಮತ್ತಷ್ಟು ದಾಖಲೆಗಳನ್ನು ನಿರೀಕ್ಷಿಸಬಹುದು.

5 / 5