ಯಾವುದೇ ನಾಯಕನಿಗೂ ಸಾಧ್ಯವಾಗದ ದಾಖಲೆ ಬರೆದ ಶ್ರೇಯಸ್ ಅಯ್ಯರ್
IPL 2026 LSG vs PBKS: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2026) 68ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 196 ರನ್ ಕಲೆಹಾಕಿದ್ದರು. ಈ ಗುರಿಯನ್ನು ಶ್ರೇಯಸ್ ಅಯ್ಯರ್ (101) ಅವರ ಅಜೇಯ ಶತಕದೊಂದಿಗೆ ಪಂಜಾಬ್ ಕಿಂಗ್ಸ್ ತಂಡವು 18 ಓವರ್ಗಳಲ್ಲಿ ಚೇಸ್ ಮಾಡಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
Updated on: May 24, 2026 | 8:14 AM

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಬರೋಬ್ಬರಿ 124 ಶತಕಗಳು ದಾಖಲಾಗಿವೆ. ಈ ವೇಳೆ 11 ನಾಯಕರುಗಳು ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಹನ್ನೊಂದು ಮಂದಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಶತಕ ಬಾರಿಸಿದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ (Shreyas Iyer). (PC: IPL)

ಲಕ್ನೋ ಏಕಾನ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ 51 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ ಅಜೇಯ 101 ರನ್ ಬಾರಿಸಿದರು. (PC: IPL)

ಈ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು ಸೆಂಚುರಿ ಸಿಡಿಸಿದ ಮೊದಲ ನಾಯಕನೆಂಬ ಹೆಗ್ಗಳಿಕೆಯನ್ನು ಶ್ರೇಯಸ್ ಅಯ್ಯರ್ ತಮ್ಮದಾಗಿಸಿಕೊಂಡರು. ಹಾಗೆಯೇ ಐಪಿಎಲ್ನಲ್ಲಿ ಚೇಸಿಂಗ್ ವೇಳೆ ಶತಕ ಸಿಡಿಸಿ ಅಜೇಯರಾಗಿ ಉಳಿದ 2ನೇ ಕ್ಯಾಪ್ಟನ್ ಎನಿಸಿಕೊಂಡರು. (PC: IPL)

ಇದಕ್ಕೂ ಮುನ್ನ 2016 ರಲ್ಲಿ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಚೇಸಿಂಗ್ ವೇಳೆ 108 ರನ್ಗಳ ಅಜೇಯ ಇನಿಂಗ್ಸ್ ಆಡಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಚೇಸಿಂಗ್ನಲ್ಲಿ ಶತಕ ಸಿಡಿಸಿ ಅಜೇಯರಾಗಿ ಉಳಿದ ನಾಯಕ ಎನಿಸಿಕೊಂಡಿದ್ದರು. (PC: IPL)

ಇದೀಗ ವಿರಾಟ್ ಕೊಹ್ಲಿಯ ಈ ದಾಖಲೆಯನ್ನು ಶ್ರೇಯಸ್ ಅಯ್ಯರ್ ಸರಿಗಟ್ಟಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಐಪಿಎಲ್ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಸಿಡಿಸಿದ ಮೊದಲ ಕ್ಯಾಪ್ಟನ್ ಹಾಗೂ ಅಜೇಯ ಶತಕ ಬಾರಿಸಿದ 2ನೇ ಬ್ಯಾಟರ್ ಎಂಬ ದಾಖಲೆಯನ್ನು ಶ್ರೇಯಸ್ ಅಯ್ಯರ್ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




