Shreyas Iyer: ಅಯ್ಯರ್ ಫೈಯರ್… ಭರ್ಜರಿ ದಾಖಲೆ!

Updated on: May 24, 2026 | 8:23 AM

IPL 2026 LSG vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2026) 68ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 196 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಶ್ರೇಯಸ್ ಅಯ್ಯರ್ (101) ಅವರ ಅಜೇಯ ಶತಕದೊಂದಿಗೆ ಪಂಜಾಬ್ ಕಿಂಗ್ಸ್ ತಂಡವು 18 ಓವರ್​ಗಳಲ್ಲಿ ಚೇಸ್ ಮಾಡಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಬರೋಬ್ಬರಿ 124 ಶತಕಗಳು ದಾಖಲಾಗಿವೆ. ಈ ವೇಳೆ 11 ನಾಯಕರುಗಳು ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಹನ್ನೊಂದು ಮಂದಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಶತಕ ಬಾರಿಸಿದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ (Shreyas Iyer). (PC: IPL)

2 / 5
ಲಕ್ನೋ ಏಕಾನ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ 51 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 101 ರನ್ ಬಾರಿಸಿದರು. (PC: IPL)

3 / 5
ಈ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು ಸೆಂಚುರಿ ಸಿಡಿಸಿದ ಮೊದಲ ನಾಯಕನೆಂಬ ಹೆಗ್ಗಳಿಕೆಯನ್ನು ಶ್ರೇಯಸ್ ಅಯ್ಯರ್ ತಮ್ಮದಾಗಿಸಿಕೊಂಡರು. ಹಾಗೆಯೇ ಐಪಿಎಲ್​ನಲ್ಲಿ ಚೇಸಿಂಗ್ ವೇಳೆ ಶತಕ ಸಿಡಿಸಿ ಅಜೇಯರಾಗಿ ಉಳಿದ 2ನೇ ಕ್ಯಾಪ್ಟನ್ ಎನಿಸಿಕೊಂಡರು. (PC: IPL)

4 / 5
ಇದಕ್ಕೂ ಮುನ್ನ 2016 ರಲ್ಲಿ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಚೇಸಿಂಗ್ ವೇಳೆ 108 ರನ್​ಗಳ ಅಜೇಯ ಇನಿಂಗ್ಸ್​ ಆಡಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಚೇಸಿಂಗ್​ನಲ್ಲಿ ಶತಕ ಸಿಡಿಸಿ ಅಜೇಯರಾಗಿ ಉಳಿದ ನಾಯಕ ಎನಿಸಿಕೊಂಡಿದ್ದರು. (PC: IPL)

5 / 5
ಇದೀಗ ವಿರಾಟ್ ಕೊಹ್ಲಿಯ ಈ ದಾಖಲೆಯನ್ನು ಶ್ರೇಯಸ್ ಅಯ್ಯರ್ ಸರಿಗಟ್ಟಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಐಪಿಎಲ್​ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಸಿಡಿಸಿದ ಮೊದಲ ಕ್ಯಾಪ್ಟನ್ ಹಾಗೂ ಅಜೇಯ ಶತಕ ಬಾರಿಸಿದ 2ನೇ ಬ್ಯಾಟರ್ ಎಂಬ ದಾಖಲೆಯನ್ನು ಶ್ರೇಯಸ್ ಅಯ್ಯರ್ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

Published On - 8:14 am, Sun, 24 May 26

Follow Us