
ಭಾರತೀಯ ಕ್ರಿಕೆಟ್‌ನಲ್ಲಿ ನಾಯಕತ್ವ ಬದಲಾವಣೆ ಬೆನ್ನಲ್ಲೇ ಹೊಸದೊಂದು ಇತಿಹಾಸ ಸೃಷ್ಟಿಯಾಗಿದೆ. 2026ರ ಟಿ20 ವಿಶ್ವಕಪ್ ಮುಗಿದ ನಂತರ ಟೀಮ್ ಇಂಡಿಯಾದ ಪೂರ್ಣಾವಧಿ ನಾಯಕತ್ವ ವಹಿಸಿಕೊಂಡ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್, ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಯಾವೊಬ್ಬ ದಿಗ್ಗಜ ನಾಯಕನೂ ಮಾಡದ ವಿಶಿಷ್ಟ 'ಟಾಸ್ ದಾಖಲೆ'ಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: BCCI)

ಐರ್ಲೆಂಡ್ ವಿರುದ್ಧದ ಸರಣಿಯೊಂದಿಗೆ ನಾಯಕನಾಗಿ ಪಾದಾರ್ಪಣೆ ಮಾಡಿದ ಶ್ರೇಯಸ್ ಅಯ್ಯರ್ ಈವರೆಗೆ 5 ಮ್ಯಾಚ್ಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ. ಈ ಐದು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಟಾಸ್ ಜಯಿಸಿದೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಮೊದಲ 5 ಪಂದ್ಯಗಳಲ್ಲಿ ಸತತವಾಗಿ ಟಾಸ್ ಗೆದ್ದ ಏಕೈಕ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ. (PC: BCCI)

ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ವಿಶ್ವ ದಾಖಲೆ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಅವರ ಹೆಸರಿನಲ್ಲಿತ್ತು. ರಾಝ ನಾಯಕನಾದ ಬಳಿಕ ಝಿಂಬಾಬ್ವೆ ತಂಡವು 4 ಪಂದ್ಯಗಳಲ್ಲಿ ಸತತವಾಗಿ ಟಾಸ್ ಗೆದ್ದಿತ್ತು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಾಯಕನಾದ ಬಳಿಕ ಸತತವಾಗಿ ಟಾಸ್ ಗೆದ್ದ ಕ್ಯಾಪ್ಟನ್ ಎನಿಸಿಕೊಂಡಿದ್ದರು. (PC: BCCI)

ಇದೀಗ ಈ ದಾಖಲೆಯನ್ನು ಶ್ರೇಯಸ್ ಅಯ್ಯರ್ ಮುರಿದಿದ್ದಾರೆ. ಐರ್ಲೆಂಡ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಅಯ್ಯರ್ ಟಾಸ್ ವಿನ್ ಆಗಿದ್ದರು. ಇದಾದ ಬಳಿಕ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲೂ ಮೂರು ಮ್ಯಾಚ್ಗಳಲ್ಲೂ ಟಾಸ್ ಗೆದ್ದಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಾಯಕನಾದ ಬಳಿಕ ಸತತ ಐದು ಟಾಸ್ ಗೆದ್ದ ವಿಶ್ವದ ಏಕೈಕ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ. (PC: BCCI)

ಈ ಟಾಸ್ ಗೆಲುವಿನ ಹೊರತಾಗಿಯೂ, ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಈವರೆಗೆ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ ಎಂಬುದು ಗಮನಾರ್ಹ. ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 2-0 ಅಂತರದಿಂದ ಆಘಾತಕಾರಿ ಸೋಲನುಭವಿಸಿತ್ತು. ಇನ್ನು ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯ ಮಳೆಯ ಕಾರಣ ರದ್ದಾದರೆ, ಎರಡು ಮತ್ತು ಮೂರನೇ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರಾಜಯಗೊಂಡಿದೆ. ಈ ಮೂಲಕ ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ನಾಯಕನಾದ ಮೊದಲ ಐದು ಪಂದ್ಯಗಳಲ್ಲಿ ಒಂದೂ ಗೆಲುವು ಕಾಣದ ಏಕೈಕ ಕ್ಯಾಪ್ಟನ್ ಎಂಬ ಅಪಖ್ಯಾತಿಗೂ ಅಯ್ಯರ್ ಒಳಗಾಗಿದ್ದಾರೆ. (PC: BCCI)