AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಗಿಲ್ ಗಿಲಕ್​ಗೆ ಕಿಂಗ್ ಕೊಹ್ಲಿಯ ದಾಖಲೆಗಳು ಉಡೀಸ್..!

Shubman Gill Records: ಟೆಸ್ಟ್ ಕ್ರಿಕೆಟ್​ನಲ್ಲಿ ನಾಯಕನಾಗಿ ಶುಭ್​ಮನ್ ಗಿಲ್ ಶುಭಾರಂಭ ಮಾಡಿದ್ದಾರೆ. ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪ0ಂದ್ಯದಲ್ಲಿ 155 ರನ್ ಬಾರಿಸಿದ್ದ ಗಿಲ್ ಇದೀಗ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಹಾಗೂ ಶತಕದೊಂದಿಗೆ ಅಬ್ಬರಿಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಎರಡು ಭರ್ಜರಿ ದಾಖಲೆಗಳನ್ನು ಅಳಿಸಿ ಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 06, 2025 | 8:54 AM

Share
ಭಾರತ ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್ (Shubman Gill) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಭರ್ಜರಿ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧ 2ನೇ ಟೆಸ್ಟ್ ಪಂದ್ಯದಲ್ಲಿ ಗಿಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

1 / 7
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 269 ರನ್ ಬಾರಿಸಿದ್ದ ಶುಭ್​ಮನ್ ಗಿಲ್,  ದ್ವಿತೀಯ ಇನಿಂಗ್ಸ್​ನಲ್ಲಿ 161 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಪಂದ್ಯವೊಂದರಲ್ಲಿ ಅತ್ಯಧಿಕ ರನ್​ಗಳಿಸಿದ ಭಾರತೀಯ ನಾಯಕ ಎಂಬ ದಾಖಲೆಯನ್ನು ಶುಭ್​ಮನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು.

2 / 7
2017 ರಲ್ಲಿ ದೆಹಲಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೊದಲ ಇನಿಂಗ್ಸ್​ನಲ್ಲಿ 243 ರನ್ ಬಾರಿಸಿದರೆ, ದ್ವಿತೀಯ ಇನಿಂಗ್ಸ್​ನಲ್ಲಿ 50 ರನ್​ ಕಲೆಹಾಕಿದ್ದರು. ಈ ಮೂಲಕ ಒಟ್ಟು 293 ರನ್​ಗಳಿಸುವ ಮೂಲಕ ಭಾರತದ ಪರ ಟೆಸ್ಟ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ರನ್​ಗಳಿಸಿದ ಕ್ಯಾಪ್ಟನ್ ಎಂಬ ದಾಖಲೆ ನಿರ್ಮಿಸಿದ್ದರು.

3 / 7
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಶುಭ್​ಮನ್ ಗಿಲ್ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಇನಿಂಗ್ಸ್​ನಲ್ಲಿ 269 ರನ್​ಗಳಿಸಿದ್ದ ಗಿಲ್, ದ್ವಿತೀಯ ಇನಿಂಗ್ಸ್​ನಲ್ಲಿ 161 ರನ್ ಬಾರಿಸಿದ್ದಾರೆ. ಈ ಮೂಲಕ ಒಟ್ಟು 430 ರನ್​ ಕಲೆಹಾಕುವ ಮೂಲಕ ಟೀಮ್ ಇಂಡಿಯಾ ಪರ ಟೆಸ್ಟ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ರನ್​ಗಳಿಸಿದ ನಾಯಕ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 7
ಅಷ್ಟೇ ಅಲ್ಲದೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ರನ್​ಗಳಿಸಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ಕೂಡ ಶುಭ್​ಮನ್ ಗಿಲ್ ತನ್ನ ಹೆಸರಿಗೆ ಸೇರ್ಪಡೆಗೊಳಿಸಿದ್ದಾರೆ. ವಿಶೇಷ ಎಂದರೆ ಈ ವಿಶ್ವ ದಾಖಲೆ ಕೂಡ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

5 / 7
ಕಿಂಗ್ ಕೊಹ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳ ಮೂಲಕ ಒಟ್ಟು 449 ರನ್​ ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ದಶಕದ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ಶುಭ್​​ಮನ್ ಗಿಲ್ ಯಶಸ್ವಿಯಾಗಿದ್ದಾರೆ.

6 / 7
ಹೆಡಿಂಗ್ಲೆಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡಿದ್ದ ಶುಭ್​ಮನ್ ಗಿಲ್ ಒಟ್ಟು 155 ರನ್ ಬಾರಿಸಿದ್ದರು. ಇದೀಗ ದ್ವಿತೀಯ ಪಂದ್ಯದಲ್ಲಿ ಒಟ್ಟು 430 ರನ್​ ಕಲೆಹಾಕಿದ್ದಾರೆ. ಈ ಮೂಲಕ ಒಟ್ಟು 585 ರನ್​ಗಳಿಸಿ, ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ಶುಭ್​ಮನ್ ಗಿಲ್ ತಮ್ಮದಾಗಿಸಿಕೊಂಡಿದ್ದಾರೆ.

7 / 7