Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದ ಆಟಗಾರರ ಸಂಖ್ಯೆ 15ಕ್ಕೆ ಏರಿಕೆ..!

Champions Troph 2025: ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಸೋತಿರುವ ಇಂಗ್ಲೆಂಡ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಬ್ರೈಡನ್ ಕಾರ್ಸ್ ಎಡಗಾಲಿನ ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಬ್ರೈಡನ್ ಕಾರ್ಸ್​ ಇಂಗ್ಲೆಂಡ್ ಪರ ಕಣಕ್ಕಿಳಿಯುವುದಿಲ್ಲ.

ಝಾಹಿರ್ ಯೂಸುಫ್
|

Updated on:Feb 25, 2025 | 11:01 AM

ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಈವರೆಗೆ 15 ಆಟಗಾರರು ಹೊರಗುಳಿದಿದ್ದಾರೆ. ಈ ಪಟ್ಟಿಗೆ ಕೊನೆಯ ಸೇರ್ಪಡೆ ಇಂಗ್ಲೆಂಡ್ ತಂಡದ ಆಟಗಾರ ಬ್ರೈಡನ್ ಕಾರ್ಸ್​. ಕಾಲ್ಬೆರಳಿನ ಗಾಯದ ಕಾರಣ ಕಾರ್ಸ್​ ಇಂಗ್ಲೆಂಡ್ ತಂಡದ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಹೀಗೆ ಗಾಯಗೊಂಡು ಹಾಗೂ ಇನ್ನಿತರೆ ಕಾರಣಗಳಿಂದ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿರುವ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ...

1 / 16
ಫಖರ್ ಝಮಾನ್: ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಫಖರ್ ಝಮಾನ್ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದರು. ಆದರೆ ಫೀಲ್ಡಿಂಗ್ ವೇಳೆ ಗಾಯಗೊಂಡ ಬಳಿಕ ಅವರು ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ.

2 / 16
ಬ್ರೈಡನ್ ಕಾರ್ಸ್​: ಇಂಗ್ಲೆಂಡ್ ಆಲ್​ರೌಂಡರ್ ಬ್ರೈಡನ್ ಕಾರ್ಸ್ ಅವರ ಎಡಗಾಲಿನ ಹೆಬ್ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಆಂಗ್ಲ ಪಡೆದಯ ಪ್ರಮುಖ ಆಟಗಾರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಅರ್ಧದಲ್ಲೇ ತೊರೆದಿದ್ದಾರೆ.

3 / 16
ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುತ್ತಿಲ್ಲ. ಪಾದದ ನೋವಿನ ಕಾರಣ ಅವರು ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

4 / 16
ಜೆರಾಲ್ಡ್ ಕೋಟ್ಝಿ: ಸೌತ್ ಆಫ್ರಿಕಾ ತಂಡದ ಬಲಗೈ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಸಹ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ತೊಡೆಸಂದು ಬಿಗಿತದ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

5 / 16
ಸೈಮ್ ಅಯ್ಯೂಬ್: ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಸೈಮ್ ಅಯ್ಯೂಬ್ ಕಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಪಾಕ್​ ತಂಡದಿಂದ ಸೈಮ್ ಅವರನ್ನು ಕೈ ಬಿಡಲಾಗಿದೆ.

6 / 16
ಜೋಶ್ ಹ್ಯಾಝಲ್​ವುಡ್​: ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ. ಕಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಗೆ ಅಲಭ್ಯರಾಗಿದ್ದಾರೆ.

7 / 16
ಬೆನ್ ಸಿಯರ್ಸ್: ನ್ಯೂಝಿಲೆಂಡ್ ತಂಡದ ವೇಗಿ ಬೆನ್ ಸಿಯರ್ಸ್ ಅವರು ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಕಿವೀಸ್ ವೇಗಿ ಹಿಂದೆ ಸರಿದಿದ್ದಾರೆ.

8 / 16
ಮಿಚೆಲ್ ಸ್ಟಾರ್ಕ್​: ಆಸ್ಟ್ರೇಲಿಯಾ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಸಹ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

9 / 16
ಜೇಕಬ್ ಬೆಥೆಲ್: ಇಂಗ್ಲೆಂಡ್ ತಂಡದ ಯುವ ಆಲ್​ರೌಂಡರ್ ಜೇಕಬ್ ಬೆಥೆಲ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ.

10 / 16
ಅನ್ರಿಕ್ ನೋಕಿಯ: ಸೌತ್ ಆಫ್ರಿಕಾ ತಂಡದ ವೇಗದ ಬೌಲರ್ ಅನ್ರಿಕ್ ನೋಕಿಯ ಕೂಡ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ. ಬೆನ್ನು ನೋವಿನ ಕಾರಣ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

11 / 16
ಮಿಚೆಲ್ ಮಾರ್ಷ್: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಮಿಚೆಲ್ ಮಾರ್ಷ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಸಹ ಆಸ್ಟ್ರೇಲಿಯಾ ಚಾಂಪಿಯನ್ಸ್​ ಟ್ರೋಫಿ ತಂಡದಿಂದ ಹೊರಗುಳಿದಿದ್ದಾರೆ.

12 / 16
ಅಲ್ಲಾ ಗಝನ್‌ಫರ್: ಅಫ್ಘಾನಿಸ್ತಾನ್ ತಂಡದ ಯುವ ಸ್ಪಿನ್ನರ್ ಅಲ್ಲಾ ಗಝನ್‌ಫರ್ ಅವರು ಸಹ ಗಾಯಗೊಂಡಿದ್ದು, ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಹಾಗೂ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

13 / 16
ಲಾಕಿ ಫರ್ಗುಸನ್: ನ್ಯೂಝಿಲೆಂಡ್‌ ತಂಡದ ವೇಗದ ಬೌಲರ್ ಲಾಕಿ ಫರ್ಗುಸನ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಪಾದದ ಗಾಯದ ಕಾರಣ ಫರ್ಗುಸನ್ ತಂಡದಿಂದ ಹೊರಬಿದ್ದಿದ್ದು, ಹೀಗಾಗಿ ಈ ಬಾರಿಯ ಚಾಂಪಿಯನ್ಸ್​ ಟ್ರೋಫಿಯಲ್ಲಿ ಲಾಕಿ ಕಾಣಿಸಿಕೊಳ್ಳುತ್ತಿಲ್ಲ.

14 / 16
ಮಾರ್ಕಸ್ ಸ್ಟೊಯಿನಿಸ್: ಆಸೀಸ್ ಪಡೆಯ ಆಲ್​ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಅಚ್ಚರಿ ಎಂಬಂತೆ ಕೆಲ ದಿನಗಳ ಹಿಂದೆ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಮಾರ್ಕಸ್ ಸ್ಟೊಯಿನಿಸ್ ಕಾಣಿಸಿಕೊಂಡಿಲ್ಲ.

15 / 16
ಜಸ್​ಪ್ರೀತ್ ಬುಮ್ರಾ: ಬೆನ್ನು ನೋವಿನ ಸಮಸ್ಯೆಯ ಕಾರಣ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಸಹ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಬುಮ್ರಾ ಅವರ ಅನುಪಸ್ಥಿತಿಯ ನಡುವೆಯೂ ಟೀಮ್ ಇಂಡಿಯಾ ಚಾಂಪಿಯನ್ಸ್​ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ಮುಂದುವರೆಸಿದೆ.

16 / 16

Published On - 10:54 am, Tue, 25 February 25

Follow us
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ

ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ

ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್

ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ

ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ