Champions Trophy 2025: ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರು ಇವರೇ
Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ಕ್ಕಾಗಿ ಟೀಮ್ ಇಂಡಿಯಾ 15 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿತ್ತು. ಈ ಹದಿನೈದು ಆಟಗಾರರಲ್ಲಿ 12 ಪ್ಲೇಯರ್ಸ್ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಮೂವರು ಆಟಗಾರರಿಗೆ ಚೊಚ್ಚಲ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆಡಲು ಅವಕಾಶ ಸಿಕ್ಕಿಲ್ಲ. ಆ ಆಟಗಾರರು ಯಾರೆಂದರೆ.,..
ಬರೋಬ್ಬರಿ 8 ವರ್ಷಗಳ ನಡೆದ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 4 ವಿಕೆಟ್ಗಳಿಂದ ಮಣಿಸುವಲ್ಲಿ ಭಾರತ ತಂಡ ಯಶಸ್ವಿಯಾಗಿದೆ.
1 / 6
ಈ ಗೆಲುವಿನೊಂದಿಗೆ 12 ವರ್ಷಗಳ ಬಳಿಕ ಭಾರತ ತಂಡ ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ವಿಶೇಷ ಎಂದರೆ ಈ ಬಾರಿಯ ಟೂರ್ನಿಗಾಗಿ ಟೀಮ್ ಇಂಡಿಯಾ 15 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿಕೊಂಡಿತ್ತು. ಇದಾಗ್ಯೂ ಮೂವರು ಆಟಗಾರರಿಗೆ ಒಂದೇ ಒಂದು ಪಂದ್ಯವಾಡಲು ಅವಕಾಶ ಸಿಕ್ಕಿರಲಿಲ್ಲ. ಅವರೆಂದರೆ....
2 / 6
ರಿಷಭ್ ಪಂತ್: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ರಿಷಭ್ ಪಂತ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆ ಮಾಡಲಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿದ ಕಾರಣ ಪಂತ್ಗೆ ಒಂದೇ ಒಂದು ಚಾನ್ಸ್ ಸಿಕ್ಕಿರಲಿಲ್ಲ.
3 / 6
ವಾಷಿಂಗ್ಟನ್ ಸುಂದರ್: ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ವಾಷಿಂಗ್ಟನ್ ಸುಂದರ್ ಸ್ಪಿನ್ ಆಲ್ರೌಂಡರ್ ಆಗಿ ಆಯ್ಕೆಯಾಗಿದ್ದರು. ಆದರೆ ಟೂರ್ನಿಯುದ್ದಕ್ಕೂ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ನೀಡಿದ ಕಾರಣ ಸುಂದರ್ಗೆ ಅವಕಾಶ ಸಿಕ್ಕಿಲ್ಲ.
4 / 6
ಅರ್ಷದೀಪ್ ಸಿಂಗ್: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಎಡಗೈ ವೇಗಿ ಅರ್ಷದೀಪ್ ಸಿಂಗ್ ಕಣಕ್ಕಿಳಿಯುವ ನಿರೀಕ್ಷೆಯಿತ್ತು. ಆದರೆ ಭಾರತ ತಂಡವು ಸ್ಪಿನ್ ಅಸ್ತ್ರಗಳೊಂದಿಗೆ ಯೋಜನೆ ರೂಪಿಸಿದ್ದರಿಂದ ಅರ್ಷದೀಪ್ ಸಿಂಗ್ ಇಡೀ ಟೂರ್ನಿಯಲ್ಲಿ ಬೆಂಚ್ ಕಾಯಬೇಕಾಯಿತು.