Champions Trophy 2025: ಚಾಂಪಿಯನ್ಸ್ ಟ್ರೋಫಿ ಕದನ: 8 ತಂಡಗಳ ನಡುವೆ 2 ಗ್ರೂಪ್
Champions trophy 2025: ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಯು ಫೆಬ್ರವರಿ ತಿಂಗಳಿಂದ ಶುರುವಾಗಲಿದೆ. ಈ ಬಾರಿ ಟೂರ್ನಿಯಲ್ಲಿ ಒಟ್ಟು 8 ತಂಢಗಳು ಕಣಕ್ಕಿಳಿಯಲಿದೆ. ಈ ತಂಡಗಳನ್ನು ಎರಡು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಆಯಾ ಗ್ರೂಪ್ಗಳಲ್ಲಿನ ತಂಡಗಳ ನಡುವೆ ಪಂದ್ಯಗಳು ನಡೆಯಲಿದೆ.
Updated on: Dec 22, 2024 | 8:03 AM

ಚಾಂಪಿಯನ್ಸ್ ಟ್ರೋಫಿಗೆ ವೇದಿಕೆ ಸಿದ್ಧವಾಗಿದೆ. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ಎರಡು ಗ್ರೂಪ್ಗಳಲ್ಲಿ ವಿಂಗಡಿಸಿ ಟೂರ್ನಿಯನ್ನು ಆಯೋಜಿಸಲಾಗುತ್ತದೆ. ಅದರಂತೆ ಗ್ರೂಪ್-A ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಕಾಣಿಸಿಕೊಳ್ಳುವುದು ಖಚಿತವಾಗಿದೆ.

ಗ್ರೂಪ್-A ಪಟ್ಟಿಯಲ್ಲಿ ಭಾರತ, ಪಾಕಿಸ್ತಾನ್, ನ್ಯೂಝಿಲೆಂಡ್ ಮತ್ತು ಬಾಂಗ್ಲಾದೇಶ್ ತಂಡಗಳು ಕಣಕ್ಕಿಳಿಯಲಿವೆ ಎಂದು ತಿಳಿದು ಬಂದಿದೆ. ಈ ತಂಡಗಳ ನಡುವೆ ಲೀಗ್ ಹಂತದ ಪಂದ್ಯಗಳು ಜರುಗಲಿವೆ.

ಗ್ರೂಪ್- B ಪಟ್ಟಿಯಲ್ಲಿ ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ್ ಮತ್ತು ಇಂಗ್ಲೆಂಡ್ ತಂಡಗಳು ಕಾಣಿಸಿಕೊಳ್ಳಲಿವೆ. ಈ ತಂಡಗಳು ಸಹ ಮೊದಲ ಹಂತದಲ್ಲಿ ಮೂರು ಪಂದ್ಯಗಳನ್ನಾಡಲಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಚಾಂಪಿಯನ್ಸ್ ಟ್ರೋಫಿ 2025 ಮುಂದಿನ ವರ್ಷ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಇದಕ್ಕಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದು, ಶೀಘ್ರದಲ್ಲೇ ವೇಳಾಪಟ್ಟಿ ಬಿಡುಗಡೆಯಾಗಲಿದೆ.

ಇನ್ನು ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಏಕೆಂದರೆ ಪಾಕಿಸ್ತಾನದಲ್ಲಿ ಪಂದ್ಯವಾಡಲು ಭಾರತ ನಿರಾಕರಿಸಿದ್ದು, ಹೀಗಾಗಿ ತನ್ನ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸುವಂತೆ ಐಸಿಸಿಗೆ ಬಿಸಿಸಿಐ ಮನವಿ ಮಾಡಿದೆ.

ಬಿಸಿಸಿಐನ ಈ ಬೇಡಿಕೆಗೆ ಒಪ್ಪಿಕೊಂಡಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಹಾಗೂ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಮುಂದಾಗಿದೆ. ಅದರಂತೆ ಟೂರ್ನಿಯು ಪಾಕಿಸ್ತಾನದಲ್ಲೇ ಜರುಗಿದರೂ ಭಾರತ ಪಂದ್ಯಗಳಿಗೆ ಯುಎಇ ಅಥವಾ ಶ್ರೀಲಂಕಾ ಆತಿಥ್ಯವಹಿಸಲಿದೆ. ಹಾಗೆಯೇ ಭಾರತ ಮತ್ತು ಪಾಕಿಸ್ತಾನ್ ತಂಡಗಳು ತಟಸ್ಥ ಸ್ಥಳದಲ್ಲಿ ಮುಖಾಮುಖಿಯಾಗಲಿದೆ.



















