ಭಾರತ ತಂಡದ ಮುಂದಿನ ಪಂದ್ಯಕ್ಕಾಗಿ ಮಾರ್ಚ್​ ತಿಂಗಳವರೆಗೆ ಕಾಯಲೇಬೇಕು..!

|

Updated on: Feb 25, 2025 | 3:03 PM

Champions trophy 2025: ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಆಡಿದ ಮೊದಲೆರಡು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ಈ ಎರಡು ಪಂದ್ಯಗಳ ಮೂಲಕವೇ ಭಾರತ ತಂಡ ಸೆಮಿಫೈನಲ್​ಗೆ ಅರ್ಹತೆಗಿಟ್ಟಿಸಿಕೊಂಡಿದೆ. ಇದಾಗ್ಯೂ ಟೀಮ್ ಇಂಡಿಯಾ ಇನ್ನೂ ಒಂದು ಲೀಗ್ ಪಂದ್ಯವನ್ನಾಡಬೇಕಿದೆ. ಈ ಪಂದ್ಯದಲ್ಲಿ ಭಾರತ ತಂಡದ ಎದುರಾಳಿ ನ್ಯೂಝಿಲೆಂಡ್.

1 / 6
ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆಸಿದೆ. ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ 6 ವಿಕೆಟ್​ಗಳ ಗೆಲುವು ದಾಖಲಿಸಿದ್ದ ಭಾರತ ತಂಡ, ದ್ವಿತೀಯ ಪಂದ್ಯದಲ್ಲಿ ಬದ್ಧವೈರಿ ಪಾಕಿಸ್ತಾನ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದೆ.

2 / 6
ಈ ಎರಡು ಗೆಲುವುಗಳೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ. ಇದಾಗ್ಯೂ ಭಾರತ ತಂಡ ಇನ್ನೂ ಒಂದು ಲೀಗ್ ಮ್ಯಾಚ್ ಆಡಬೇಕಿದೆ. ಆದರೆ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಇನ್ನೂ ಐದು ದಿನ ಕಾಯಬೇಕು. ಅಂದರೆ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

3 / 6
ಮಾರ್ಚ್ 2 ರಂದು ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈಗಾಗಲೇ ಸೆಮಿಫೈನಲ್​ಗೇರಿರುವ ಎರಡೂ ತಂಡಗಳು ನಾಕೌಟ್ ಪಂದ್ಯಕ್ಕೂ ಮುನ್ನ ಸಕಲ ರೀತಿಯಲ್ಲೂ ಸಜ್ಜಾಗಬೇಕಿದೆ. ಅದರಲ್ಲೂ ಸೆಮಿಫೈನಲ್​ಗೂ ಮುನ್ನ ಗೆಲುವಿನ ಲಯ ಮುಂದುವರೆಸುವ ಇರಾದೆಯಲ್ಲಿದೆ.

4 / 6
ಹೀಗಾಗಿ ಮಾರ್ಚ್ 2 ರಂದು ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್​ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಈ ಪೈಪೋಟಿಯಲ್ಲಿ ಮೇಲುಗೈ ಸಾಧಿಸುವವರು ಯಾರು ಎಂಬುದನ್ನು ಕಾದು ನೋಡಬೇಕಿದೆ.

5 / 6
ನ್ಯೂಝಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ವಿಲ್ ಒರೂಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್, ಜಾಕೋಬ್ ಡಫಿ, ಕೈಲ್ ಜೇಮಿಸನ್.

6 / 6
ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.