ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಮುಹೂರ್ತ ಫಿಕ್ಸ್
Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಅದರಂತೆ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ಇನ್ನು 2025ರ ಚಾಂಪಿಯನ್ಸ್ ಟ್ರೋಫಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅಂದರೆ ಟೂರ್ನಿಯು ಪಾಕಿಸ್ತಾನ್ ಮತ್ತು ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಯಲಿದೆ.
Updated on:Dec 23, 2024 | 7:17 AM

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ ಎಂದು ವರದಿಯಾಗಿದೆ. ಈ ದಿನಾಂಕ ನಿಗದಿಯ ಬೆನ್ನಲ್ಲೇ ಟೀಮ್ ಇಂಡಿಯಾದ ಪಂದ್ಯಗಳ ಕರಡು ವೇಳಾಪಟ್ಟಿ ಕೂಡ ಹೊರಬಿದ್ದಿದೆ. ಈ ವೇಳಾಪಟ್ಟಿಯಂತೆ ಭಾರತ ತಂಡವು ಫೆಬ್ರವರಿ 20 ರಿಂದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.

ಗ್ರೂಪ್-ಎ ನಲ್ಲಿ ಕಾಣಿಸಿಕೊಂಡಿರುವ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದ್ದು, ಎರಡನೇ ಮ್ಯಾಚ್ನಲ್ಲಿ ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಹಾಗೆಯೇ ಮೂರನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡದ ವಿರುದ್ಧ ಸೆಣಸಲಿದೆ. ಅದರಂತೆ ಟೀಮ್ ಇಂಡಿಯಾದ ಕರಡು ವೇಳಾಪಟ್ಟಿ ಈ ಕೆಳಗಿನಂತಿದೆ...…

ಫೆಬ್ರವರಿ 20 ರಂದು ಭಾರತ Vs ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಫೆಬ್ರವರಿ 23 ರಂದು ಭಾರತ Vs ಪಾಕಿಸ್ತಾನ್ ನಡುವಣ ಹೈವೋಲ್ಟೆಜ್ ಪಂದ್ಯ ನಡೆಯಲಿದೆ. ಭಾರತ Vs ನ್ಯೂಝಿಲೆಂಡ್ ತಂಡಗಳು ಮಾರ್ಚ್ 2 ರಂದು ಸೆಣಸಲಿದೆ.

ಟೀಮ್ ಇಂಡಿಯಾದ ಎಲ್ಲಾ ಪಂದ್ಯಗಳು ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಯಲಿದೆ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅದರಂತೆ ಭಾರತದ ಪಂದ್ಯಗಳು ದುಬೈ ಅಥವಾ ಕೊಲಂಬೊದಲ್ಲಿ ಜರುಗಲಿದೆ. ಹಾಗೆಯೇ ಉಳಿದ ಮ್ಯಾಚ್ಗಳು ಪಾಕಿಸ್ತಾನದಲ್ಲೇ ನಡೆಯಲಿದೆ.

ಇನ್ನು ಟೀಮ್ ಇಂಡಿಯಾ ಸೆಮಿಫೈನಲ್ಗೆ ಪ್ರವೇಶಿಸಿದರೆ ಆ ಪಂದ್ಯ ಕೂಡ ತಟಸ್ಥ ಸ್ಥಳದಲ್ಲಿ ಜರುಗಲಿದೆ. ಹಾಗೆಯೇ ಭಾರತ ತಂಡವು ಫೈನಲ್ಗೆ ಪ್ರವೇಶಿಸಿದರೆ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯ ಪಾಕ್ನಲ್ಲಿ ನಡೆಯುವುದಿಲ್ಲ. ಬದಲಾಗಿ ದುಬೈ ಅಥವಾ ಕೊಲಂಬೊದಲ್ಲಿ ಫೈನಲ್ ಪಂದ್ಯ ಆಯೋಜನೆಯಾಗಲಿದೆ.
Published On - 12:56 pm, Sun, 22 December 24



















