Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಒಂದು ಪಂದ್ಯವನ್ನು ಗೆಲ್ಲದ ಪಾಕಿಸ್ತಾನಕ್ಕೆ ಸಿಕ್ಕಿದ್ದು ಎಷ್ಟು ಕೋಟಿ?

ICC Champions Trophy 2025 Prize Money: ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಟ್ರೋಫಿ ಎತ್ತಿ ಹಿಡಿದಿದೆ. ಇದಕ್ಕೆ ಬಹುಮಾನವಾಗಿ ಭಾರತವು ಸರಿಸುಮಾರು 23 ಕೋಟಿ ರೂಪಾಯಿ ಬಹುಮಾನ ಸಿಕ್ಕಿದೆ. ಇತ್ತ ಆತಿಥೇಯ ಪಾಕಿಸ್ತಾನಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗದಿದ್ದರೂ ಐಸಿಸಿಯಿಂದ 2 ಕೋಟಿ 31 ಲಕ್ಷ ರೂಪಾಯಿ ಹಣ ಸಿಕ್ಕಿದೆ.

ಪೃಥ್ವಿಶಂಕರ
|

Updated on: Mar 10, 2025 | 4:00 PM

ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಟೀಂ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದ ಸಾಧನೆ ಮಾಡಿದೆ. ಆದರೆ ತನ್ನ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ಸಲವಾಗಿ ತಾನೇ ಆಯೋಜಕತ್ವದ ಹಕ್ಕನ್ನು ಪಡೆದುಕೊಂಡು ಟೂರ್ನಿಗೆ ಪ್ರವೇಶಿಸಿದ್ದ ಪಾಕಿಸ್ತಾನಕ್ಕೆ ಮಾತ್ರ ಎದುರಾಗಿದ್ದು ಬರೀ ನಿರಾಶೆ.

1 / 7
ತವರು ನೆಲದ ಪ್ರಯೋಜನ ಪಡೆದು ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಕನಸಿನೊಂದಿಗೆ ಅಖಾಡಕ್ಕಿಳಿದಿದ್ದ ಪಾಕಿಸ್ತಾನಕ್ಕೆ ಟ್ರೋಫಿ ಇರಲಿ, ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಇತ್ತ ಪಾಕಿಸ್ತಾನಕ್ಕೆ ಹೋಗದೆ ಎಲ್ಲಾ ಪಂದ್ಯಗಳನ್ನು ದುಬೈನಲ್ಲೇ ಆಡಿದ ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋಲದೆ ಟ್ರೋಫಿಯನ್ನು ಎತ್ತಿ ಹಿಡಿಯಿತು.

2 / 7
ಇದಕ್ಕೆ ಬಹುಮಾನವಾಗಿ ಐಸಿಸಿಯಿಂದ 20 ಕೋಟಿ ರೂಗಳು ಟೀಂ ಇಂಡಿಯಾ ಖಾತೆ ಸೇರಿತು. ಇದರ ಜೊತೆಗೆ ಪ್ರತಿ ಪಂದ್ಯದಲ್ಲೂ ಗೆಲುವು ಸಾಧಿಸಿದಕ್ಕೆ ಹಾಗೂ ಟೂರ್ನಿಯಲ್ಲಿ ಭಾಗವಹಿಸಿದಕ್ಕೂ ಟೀಂ ಇಂಡಿಯಾಗೆ ಐಸಿಸಿಯಿಂದ ಹಣ ಸಿಕ್ಕಿದೆ. ಒಟ್ಟಾರೆಯಾಗಿ ಭಾರತಕ್ಕೆ ಸಿಕ್ಕ ಒಟ್ಟು ಹಣ ಸರಿಸುಮಾರು 23 ಕೋಟಿ ಎಂದು ಅಂದಾಜಿಸಬಹುದು.

3 / 7
ಇತ್ತ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಹಾಗೆಯೇ ಆತಿಥ್ಯದ ಅಧಿಕಾರದೊಂದಿಗೆ ಟೂರ್ನಿಗೆ ಕಾಲಿರಿಸಿದ್ದ ಪಾಕಿಸ್ತಾನಕ್ಕೆ, ಇಡೀ ಪಂದ್ಯಾವಳಿ ದುಃಸ್ವಪ್ನವಾಗಿ ಕಾಡಿತ್ತು. ತವರು ನೆಲದಲ್ಲೇ ಪಾಕಿಸ್ತಾನಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಲೀಗ್ ಹಂತವನ್ನು ದಾಟಿ ಪಾಕ್ ತಂಡಕ್ಕೆ ಮುಂದಕ್ಕೆ ಹೋಗಲು ಸಾಧ್ಯವಾಗಲಿಲ್ಲ.

4 / 7
ಲೀಗ್ ಹಂತದಲ್ಲಿ 2 ಪಂದ್ಯಗಳನ್ನು ಆಡುವ ಅವಕಾಶ ಪಡೆದ ಪಾಕಿಸ್ತಾನ, ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 60 ರನ್​ಗಳಿಂದ ಸೋತಿತ್ತು. ಇದರ ನಂತರ ಭಾರತದ ವಿರುದ್ಧ 6 ವಿಕೆಟ್‌ಗಳಿಂದ ಸೋತಿತ್ತು. ಆದರೆ ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದಾಗಿತ್ತು. ಈ ಕಾರಣದಿಂದಾಗಿ ಪಾಕಿಸ್ತಾನ ತಂಡ ಸೆಮಿಫೈನಲ್ ತಲುಪಲು ಸಾಧ್ಯವಾಗದೆ ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು.

5 / 7
ಆದಾಗ್ಯೂ ಪಾಕಿಸ್ತಾನ ಐಸಿಸಿಯಿಂದ ಕೋಟಿ ಮೊತ್ತದ ಬಹುಮಾನ ಪಡೆಯುವಲ್ಲಿ ಯಶಸ್ವಿಯಾಗಿದೆ. 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ 7 ಅಥವಾ 8 ನೇ ಸ್ಥಾನ ಪಡೆಯುವ ತಂಡಗಳಿಗೆ ಸರಿಸುಮಾರು 1 ಕೋಟಿ 22 ಲಕ್ಷ ರೂಪಾಯಿಗಳನ್ನು ನೀಡಲು ಐಸಿಸಿ ನಿರ್ಧರಿಸಿತ್ತು. ಆ ಪ್ರಕಾರ 7ನೇ ಸ್ಥಾನ ಪಡೆದಿರುವ ಪಾಕಿಸ್ತಾನಕ್ಕೆ 1 ಕೋಟಿ 22 ಲಕ್ಷ ರೂಪಾಯಿ ಬಹುಮಾನ ಸಿಕ್ಕಿದೆ.

6 / 7
ಇದು ಮಾತ್ರವಲ್ಲದೆ ಪಾಕಿಸ್ತಾನ ತಂಡವು 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಿದ್ದಕ್ಕಾಗಿ ಸರಿಸುಮಾರು 1 ಕೋಟಿ 9 ಲಕ್ಷ ರೂಗಳನ್ನು ಪಡೆದುಕೊಂಡಿದೆ. ಈ ರೀತಿಯಾಗಿ, ಪಾಕಿಸ್ತಾನವು ಪ್ರಸಕ್ತ ಚಾಂಪಿಯನ್ಸ್ ಟ್ರೋಫಿಯಲ್ಲಿ ಯಾವುದೇ ಪಂದ್ಯವನ್ನು ಗೆಲ್ಲದೆ ಸರಿಸುಮಾರು 2 ಕೋಟಿ 31 ಲಕ್ಷ ರೂ.ಗಳನ್ನು  ಬಹುಮಾನವನ್ನಾಗಿ ಪಡೆದುಕೊಂಡಿದೆ.

7 / 7
Follow us