AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ರವೀಂದ್ರ ಜಡೇಜಾಗೆ ಚಾನ್ಸ್ ಸಿಗೋದು ಡೌಟ್..!

Ravindra Jadeja: ರವೀಂದ್ರ ಜಡೇಜಾ ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದೀಗ ಏಕದಿನ ತಂಡದಿಂದಲೂ ಅವರು ಹೊರಬೀಳುವ ಸಾಧ್ಯತೆಯಿದೆ. ಪ್ರಸ್ತುತ ಮಾಹಿತಿಗಳ ಪ್ರಕಾರ, ಮುಂಬರುವ ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ರವೀಂದ್ರ ಜಡೇಜಾ ಆಯ್ಕೆಯಾಗುವ ಸಾಧ್ಯತೆ ತುಂಬಾ ಕಡಿಮೆ. ಹೀಗಾಗಿ ಶೀಘ್ರದಲ್ಲೇ ಅವರ ಸೀಮಿತ ಓವರ್​ಗಳ ಕೆರಿಯರ್ ಅಂತ್ಯವಾಗಲಿದೆ.

TV9 Web
| Edited By: |

Updated on: Jan 11, 2025 | 8:54 AM

Share
ಚಾಂಪಿಯನ್ಸ್ 2025 ಕ್ಕಾಗಿ ಶೀಘ್ರದಲ್ಲೇ ಭಾರತ ತಂಡದ ಘೋಷಣೆಯಾಗಲಿದೆ. 15 ಸದಸ್ಯರ ಈ ತಂಡದಲ್ಲಿ ಟೀಮ್ ಇಂಡಿಯಾದ ಹಿರಿಯ ಆಲ್​ರೌಂಡರ್ ರವೀಂದ್ರ ಜಡೇಜಾ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ಹಿರಿಯ ಆಟಗಾರರನ್ನು ತಂಡದಿಂದ ಕೈ ಬಿಡಲು ಬಿಸಿಸಿಐ ಆಯ್ಕೆ ಸಮಿತಿ ಚಿಂತಿಸಿದೆ.

1 / 6
ಈ ಪಟ್ಟಿಯಲ್ಲಿ 36 ವರ್ಷದ ರವೀಂದ್ರ ಜಡೇಜಾ ಅವರು ಹೆಸರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. 2023ರ ವಿಶ್ವಕಪ್ ಬಳಿಕ ಜಡೇಜಾ ಯಾವುದೇ ಏಕದಿನ ಪಂದ್ಯವಾಡಿಲ್ಲ. ಹೀಗಾಗಿ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆ ಮಾಡದಿರಲು ಚರ್ಚಿಸಲಾಗಿದೆ ಎಂದು ವರದಿಯಾಗಿದೆ.

2 / 6
ರವೀಂದ್ರ ಜಡೇಜಾ ಮುಂಬರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಂಡರೆ ಮಾತ್ರ ಅವರಿಗೆ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಸಿಗಲಿದೆ. ಒಂದು ವೇಳೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಅವರನ್ನು ಕೈ ಬಿಟ್ಟರೆ ಅವರ ಒಡಿಐ ಕೆರಿಯರ್ ಅಂತ್ಯ ಎಂದೇ ಹೇಳಬಹುದು.

3 / 6
ಏಕೆಂದರೆ ತಂಡದಲ್ಲಿ ಸ್ಪಿನ್ ಆಲ್​ರೌಂಡರ್​​ಗಳಾಗಿ ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್ ಇದ್ದಾರೆ. ಇದೀಗ ಯುವ ಆಟಗಾರ ತನುಷ್ ಕೋಟ್ಯಾನ್ ಕೂಡ ಸ್ಪಿನ್ ಆಲ್​ರೌಂಡರ್ ಆಗಿ ಭಾರತ ತಂಡದ ಕದ ತಟ್ಟುತ್ತಿದ್ದಾರೆ. ಹೀಗಾಗಿ ಭವಿಷ್ಯದ ದೃಷ್ಟಿಯಿಂದ ಚಾಂಪಿಯನ್ಸ್ ಟ್ರೋಫಿ ತಂಡದಿಂದ ಜಡೇಜಾ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

4 / 6
ಇತ್ತ ಈ ಬಗ್ಗೆ ರವೀಂದ್ರ ಜಡೇಜಾ ಅವರಿಗೂ ಸೂಚನೆ ಸಿಕ್ಕಿರುವ ಸಾಧ್ಯತೆಯಿದೆ. ಇದೇ ಕಾರಣದಿಂದಾಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಟೆಸ್ಟ್ ಜೆರ್ಸಿಯ ಫೋಟೋ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದು ಜಡೇಜಾ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳುವ ಅಥವಾ ಟೆಸ್ಟ್​ನಲ್ಲಿ ಮಾತ್ರ ಮುಂದುವರೆಯಲಿರುವ ಮುನ್ಸೂಚನೆ ಎಂದು ವಿಶ್ಲೇಷಿಸಲಾಗುತ್ತಿದೆ.

5 / 6
ಒಟ್ಟಿನಲ್ಲಿ ಟೀಮ್ ಇಂಡಿಯಾ ಪರ 197	ಏಕದಿನ ಪಂದ್ಯಗಳನ್ನಾಡಿರುವ ರವೀಂದ್ರ ಜಡೇಜಾ ಅವರ ಒಡಿಐ ಭವಿಷ್ಯ ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿಯೊಂದಿಗೆ ನಿರ್ಧಾರವಾಗಲಿದೆ. ಈ ಸರಣಿಗೆ ಆಯ್ಕೆಯಾಗದಿದ್ದರೆ 36 ವರ್ಷದ ಹಿರಿಯ ಆಟಗಾರನ ಸೀಮಿತ ಓವರ್​​ಗಳ ಕೆರಿಯರ್ ಕೊನೆಗೊಳ್ಳುವುದು ಖಚಿತ.

6 / 6
Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ