ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾದ ಟಾಪ್ ಆರ್ಡರ್ ಕನ್ಫರ್ಮ್
Champions Trophy 2025: ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಪರ ಅದ್ಭುತ ಪ್ರದರ್ಶನ ನೀಡಿದ ಆಟಗಾರರನ್ನೇ ಚಾಂಪಿಯನ್ಸ್ ಟ್ರೋಫಿಗೂ ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ. ಹೀಗಾಗಿ 2023 ರಲ್ಲಿ ಟೀಮ್ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಚಾನ್ಸ್ ಸಿಗಲಿದೆ.
1 / 5
ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿರುವ ಟಾಪ್-4 ಬ್ಯಾಟರ್ಗಳು ಯಾರೆಲ್ಲಾ ಎಂಬುದು ಬಹಿರಂಗವಾಗಿದೆ. ಈ ಬಾರಿ ಕೂಡ ಭಾರತದ ಪರ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಖಚಿತ.
2 / 5
ಆದರೆ ನಾಲ್ಕನೇ ಕ್ರಮಾಂಕದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿತ್ತು. ಇದೀಗ ಈ ಕುತೂಹಲಕ್ಕೂ ತೆರೆ ಬಿದ್ದಿದೆ. ವಿಜಯ ಹಝಾರೆ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಶ್ರೇಯಸ್ ಅಯ್ಯರ್ ಅವರನ್ನೇ 4ನೇ ಕ್ರಮಾಂಕದಲ್ಲಿ ಮುಂದುವರೆಸಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿದೆ.
3 / 5
ಕಳೆದ ಏಕದಿನ ವಿಶ್ವಕಪ್ನಲ್ಲಿ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾ ಪರ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಈ ವೇಳೆ 2 ಶತಕ ಹಾಗೂ 3 ಅರ್ಧಶತಕಗಳೊಂದಿಗೆ 530 ರನ್ ಬಾರಿಸಿದ್ದರು. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲೂ ನಾಲ್ಕನೇ ಕ್ರಮಾಂಕಕ್ಕಾಗಿ ಶ್ರೇಯಸ್ ಅಯ್ಯರ್ ಅವರನ್ನೇ ಆಯ್ಕೆ ಮಾಡಲಾಗುತ್ತಿದೆ.
4 / 5
ಇನ್ನು ಟೀಮ್ ಇಂಡಿಯಾ ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಏಕದಿನ ವಿಶ್ವಕಪ್ನಲ್ಲಿ ವಿಕೆಟ್ ಕೀಪಿಂಗ್ ಜೊತೆ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ರಾಹುಲ್ ಒಟ್ಟು 452 ರನ್ ಕಲೆಹಾಕಿದ್ದರು. ಹೀಗಾಗಿ ವಿಕೆಟ್ ಕೀಪರ್ ಆಗಿ ಟೀಮ್ ಇಂಡಿಯಾದ ಮೊದಲ ಆಯ್ಕೆಯಾಗಿ ಕೆಎಲ್ ರಾಹುಲ್ ಅವರನ್ನು ಪರಿಗಣಿಸಲು ಆಯ್ಕೆ ಸಮಿತಿ ನಿರ್ಧರಿಸಿದೆ.
5 / 5
ಇದಾಗ್ಯೂ ರಿಷಭ್ ಪಂತ್ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡದಿಂದ ಕೈ ಬಿಡಲಾಗುತ್ತಿಲ್ಲ. ಮುಂಬರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಪಂತ್ ಅವರನ್ನು ವಿಕೆಟ್ ಕೀಪರ್ ಆಗಿ ಕಣಕ್ಕಿಳಿಸಿ ಪ್ರಯೋಗ ನಡೆಸುವ ಸಾಧ್ಯತೆಯಿದೆ. ಇದರಲ್ಲಿ ಯಶಸ್ವಿಯಾದರೆ ಪಂತ್ ಚಾಂಪಿಯನ್ಸ್ ಟ್ರೋಫಿಯಲ್ಲಿ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳಬಹುದು. ಇದೇ ವೇಳೆ ರಾಹುಲ್ ಅವರನ್ನು ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಸಬಹುದು.