Champions Trophy 2025: ಟೀಮ್ ಇಂಡಿಯಾದಲ್ಲಿ 6 ಹಳೆ ಹುಲಿಗಳು
Champions Trophy: 2017 ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ 50 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 338 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 30.3 ಓವರ್ಗಳಲ್ಲಿ 158 ರನ್ಗಳಿಸಿ ಆಲೌಟ್ ಆಗಿತ್ತು. ಈ ಮೂಲಕ ಪಾಕಿಸ್ತಾನ್ ತಂಡ 180 ರನ್ಗಳ ಜಯದೊಂದಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದರು.
ಫೆಬ್ರವರಿ 19 ರಿಂದ ಶುರುವಾಗಲಿರುವ ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡದಲ್ಲಿ ಕಳೆದ ಬಾರಿ ಚಾಂಪಿಯನ್ಸ್ ಟ್ರೋಫಿ ಆಡಿದ 6 ಆಟಗಾರರು ಇರುವುದು ವಿಶೇಷ. ಅಂದರೆ 2017ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಂಡಿದ್ದ ಆರು ಆಟಗಾರರು ಈ ಬಾರಿ ಕೂಡ ಸ್ಥಾನ ಪಡೆದಿದ್ದಾರೆ. ಅವರೆಂದರೆ....
1 / 9
ವಿರಾಟ್ ಕೊಹ್ಲಿ: 2017ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದು ವಿರಾಟ್ ಕೊಹ್ಲಿ. ಈ ವೇಳೆ 5 ಇನಿಂಗ್ಸ್ ಆಡಿದ್ದ ಕೊಹ್ಲಿ ಒಟ್ಟು 258 ರನ್ ಕಲೆಹಾಕಿ ಮಿಂಚಿದ್ದರು.
2 / 9
ರೋಹಿತ್ ಶರ್ಮಾ: ಕಳೆದ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಟೀಮ್ ಇಂಡಿಯಾ ಆರಂಭಿಕನಾಗಿ ಕಣಕ್ಕಿಳಿದಿದ್ದರು. 5 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿದ್ದ ಹಿಟ್ಮ್ಯಾನ್ ಒಟ್ಟು 304 ರನ್ ಬಾರಿಸಿ ಭಾರತದ ಪರ ಟಾಪ್ ಸ್ಕೋರರ್ ಎನಿಸಿಕೊಂಡಿದ್ದರು.
3 / 9
ಹಾರ್ದಿಕ್ ಪಾಂಡ್ಯ: 2017 ರಲ್ಲಿ ಟೀಮ್ ಇಂಡಿಯಾ ಪರ ಆಲ್ರೌಂಡರ್ ಆಗಿ ಕಣಕ್ಕಿಳಿದಿದ್ದ ಪಾಂಡ್ಯ 3 ಇನಿಂಗ್ಸ್ಗಳ ಮೂಲಕ ಒಟ್ಟು 105 ರನ್ ಕಲೆಹಾಕಿದ್ದರು. ಅಲ್ಲದೆ 5 ಪಂದ್ಯಗಳಿಂದ 4 ವಿಕೆಟ್ಗಳನ್ನು ಸಹ ಕಬಳಿಸಿದ್ದರು.
4 / 9
ರವೀಂದ್ರ ಜಡೇಜಾ: ಟೀಮ್ ಇಂಡಿಯಾದ ಸ್ಪಿನ್ ಆಲ್ರೌಂಡರ್ ಆಗಿ ರವೀಂದ್ರ ಜಡೇಜಾ ಕಳೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದರು. ಈ ವೇಳೆ 5 ಪಂದ್ಯಗಳಿಂದ 4 ವಿಕೆಟ್ ಕಬಳಿಸಿದರೆ, 2 ಇನಿಂಗ್ಸ್ಗಳ ಮೂಲಕ 15 ರನ್ ಕಲೆಹಾಕಿದ್ದರು.
5 / 9
ಜಸ್ಪ್ರೀತ್ ಬುಮ್ರಾ: ಚಾಂಪಿಯನ್ಸ್ ಟ್ರೋಫಿ 2017 ರಲ್ಲಿ ಭಾರತ ತಂಡದ ಪ್ರಮುಖ ವೇಗಿಯಾಗಿ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಂಡಿದ್ದರು. ಅದರೆ 5 ಪಂದ್ಯಗಳಿಂದ ಅವರು ಕಬಳಿಸಿದ್ದು ಕೇವಲ 4 ವಿಕೆಟ್ಗಳು ಮಾತ್ರ.
6 / 9
ಮೊಹಮ್ಮದ್ ಶಮಿ: 2017ರ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಮೊಹಮ್ಮದ್ ಶಮಿ ಕಾಣಿಸಿಕೊಂಡರೂ, ಅವರು ಯಾವುದೇ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಚೊಚ್ಚಲ ಚಾಂಪಿಯನ್ಸ್ ಟ್ರೋಫಿ ಪಂದ್ಯವಾಡಲು ಶಮಿ ಸಜ್ಜಾಗಿದ್ದಾರೆ.