Champions Trophy 2025: ಟೀಮ್ ಇಂಡಿಯಾದಲ್ಲಿ 6 ಹಳೆ ಹುಲಿಗಳು
TV9 Web | Updated By: ಝಾಹಿರ್ ಯೂಸುಫ್
Updated on:
Jan 19, 2025 | 2:00 PM
Champions Trophy: 2017 ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ 50 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 338 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 30.3 ಓವರ್ಗಳಲ್ಲಿ 158 ರನ್ಗಳಿಸಿ ಆಲೌಟ್ ಆಗಿತ್ತು. ಈ ಮೂಲಕ ಪಾಕಿಸ್ತಾನ್ ತಂಡ 180 ರನ್ಗಳ ಜಯದೊಂದಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದರು.
1 / 9
ಫೆಬ್ರವರಿ 19 ರಿಂದ ಶುರುವಾಗಲಿರುವ ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡದಲ್ಲಿ ಕಳೆದ ಬಾರಿ ಚಾಂಪಿಯನ್ಸ್ ಟ್ರೋಫಿ ಆಡಿದ 6 ಆಟಗಾರರು ಇರುವುದು ವಿಶೇಷ. ಅಂದರೆ 2017ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಂಡಿದ್ದ ಆರು ಆಟಗಾರರು ಈ ಬಾರಿ ಕೂಡ ಸ್ಥಾನ ಪಡೆದಿದ್ದಾರೆ. ಅವರೆಂದರೆ....
2 / 9
ವಿರಾಟ್ ಕೊಹ್ಲಿ: 2017ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದು ವಿರಾಟ್ ಕೊಹ್ಲಿ. ಈ ವೇಳೆ 5 ಇನಿಂಗ್ಸ್ ಆಡಿದ್ದ ಕೊಹ್ಲಿ ಒಟ್ಟು 258 ರನ್ ಕಲೆಹಾಕಿ ಮಿಂಚಿದ್ದರು.
3 / 9
ರೋಹಿತ್ ಶರ್ಮಾ: ಕಳೆದ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಟೀಮ್ ಇಂಡಿಯಾ ಆರಂಭಿಕನಾಗಿ ಕಣಕ್ಕಿಳಿದಿದ್ದರು. 5 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿದ್ದ ಹಿಟ್ಮ್ಯಾನ್ ಒಟ್ಟು 304 ರನ್ ಬಾರಿಸಿ ಭಾರತದ ಪರ ಟಾಪ್ ಸ್ಕೋರರ್ ಎನಿಸಿಕೊಂಡಿದ್ದರು.
4 / 9
ಹಾರ್ದಿಕ್ ಪಾಂಡ್ಯ: 2017 ರಲ್ಲಿ ಟೀಮ್ ಇಂಡಿಯಾ ಪರ ಆಲ್ರೌಂಡರ್ ಆಗಿ ಕಣಕ್ಕಿಳಿದಿದ್ದ ಪಾಂಡ್ಯ 3 ಇನಿಂಗ್ಸ್ಗಳ ಮೂಲಕ ಒಟ್ಟು 105 ರನ್ ಕಲೆಹಾಕಿದ್ದರು. ಅಲ್ಲದೆ 5 ಪಂದ್ಯಗಳಿಂದ 4 ವಿಕೆಟ್ಗಳನ್ನು ಸಹ ಕಬಳಿಸಿದ್ದರು.
5 / 9
ರವೀಂದ್ರ ಜಡೇಜಾ: ಟೀಮ್ ಇಂಡಿಯಾದ ಸ್ಪಿನ್ ಆಲ್ರೌಂಡರ್ ಆಗಿ ರವೀಂದ್ರ ಜಡೇಜಾ ಕಳೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದರು. ಈ ವೇಳೆ 5 ಪಂದ್ಯಗಳಿಂದ 4 ವಿಕೆಟ್ ಕಬಳಿಸಿದರೆ, 2 ಇನಿಂಗ್ಸ್ಗಳ ಮೂಲಕ 15 ರನ್ ಕಲೆಹಾಕಿದ್ದರು.
6 / 9
ಜಸ್ಪ್ರೀತ್ ಬುಮ್ರಾ: ಚಾಂಪಿಯನ್ಸ್ ಟ್ರೋಫಿ 2017 ರಲ್ಲಿ ಭಾರತ ತಂಡದ ಪ್ರಮುಖ ವೇಗಿಯಾಗಿ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಂಡಿದ್ದರು. ಅದರೆ 5 ಪಂದ್ಯಗಳಿಂದ ಅವರು ಕಬಳಿಸಿದ್ದು ಕೇವಲ 4 ವಿಕೆಟ್ಗಳು ಮಾತ್ರ.
7 / 9
ಮೊಹಮ್ಮದ್ ಶಮಿ: 2017ರ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಮೊಹಮ್ಮದ್ ಶಮಿ ಕಾಣಿಸಿಕೊಂಡರೂ, ಅವರು ಯಾವುದೇ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಚೊಚ್ಚಲ ಚಾಂಪಿಯನ್ಸ್ ಟ್ರೋಫಿ ಪಂದ್ಯವಾಡಲು ಶಮಿ ಸಜ್ಜಾಗಿದ್ದಾರೆ.
8 / 9
2027ರ ಚಾಂಪಿಯನ್ಸ್ ಟ್ರೋಫಿ ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಎಂಎಸ್ ಧೋನಿ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕೇದರ್ ಜಾಧವ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ, ಅಜಿಂಕ್ಯ ರಹಾನೆ, ಮೊಹಮ್ಮದ್ ಶಮಿ, ರೋಹಿತ್ ಶರ್ಮಾ, ಯುವರಾಜ್ ಸಿಂಗ್, ಉಮೇಶ್ ಯಾದವ್, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ.
9 / 9
2025ರ ಚಾಂಪಿಯನ್ಸ್ ಟ್ರೋಫಿ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ.