ಐಪಿಎಲ್ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ಪ್ರಕಟವಾಗಿರುವ ಐಪಿಎಲ್ 2024 ರ ವೇಳಾಪಟ್ಟಿಯ ಪ್ರಕಾರ ಮೊದಲ ಹಂತದಲ್ಲಿ 4 ಪಂದ್ಯಗಳನ್ನು ಆಡಲಿದೆ.
ಮಾರ್ಚ್ 22 ರಂದು ನಡೆಯಲ್ಲಿರುವ ಈ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಧೋನಿ ನಾಯಕತ್ವದ ಚೆನ್ನೈ ತಂಡ, ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್ಸಿಬಿ ತಂಡವನ್ನು ತನ್ನ ತವರು ನೆಲವಾದ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.
ಮಾರ್ಚ್ 26 ರಂದು ಎರಡನೇ ಪಂದ್ಯವನ್ನಾಡಲಿರುವ ಚೆನ್ನೈ, ಕಳೆದ ಬಾರಿಯ ಫೈನಲ್ ಎದುರಾಳಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಕೂಡ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲ್ಲಿದ್ದು, ಸಂಜೆ 7.30 ಕ್ಕೆ ಆರಂಭವಾಗಲಿದೆ.
ಮಾರ್ಚ್ 31 ರಂದು ಮೂರನೇ ಪಂದ್ಯವನ್ನಾಡಲಿರುವ ಚೆನ್ನೈಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎದುರಾಗಲಿದೆ. ಈ ಪಂದ್ಯಕ್ಕೆ ವೈಜಾಗ್ ಆತಿಥ್ಯವಹಿಸಲಿದ್ದು, ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ.
ಮೊದಲ ಕಂತಿನ ಕೊನೆಯ ಪಂದ್ಯವನ್ನು ಚೆನ್ನೈ, ಏಪ್ರಿಲ್ 5 ರಂದು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಪಂದ್ಯ ಹೈದರಾಬಾದ್ನಲ್ಲಿ ನಡೆಯಲ್ಲಿದ್ದು, ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾಯಕ) ಮೊಯಿನ್ ಅಲಿ, ದೀಪಕ್ ಚಾಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡ್ಯಾರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್ ಅರವಲ್ಲಿ.
Published On - 7:46 pm, Thu, 22 February 24