ಪೂಜಾರ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 13 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಮತ್ತೊಂದೆಡೆ, ಶುಭಮನ್ ಗಿಲ್ ಎರಡೂ ಇನ್ನಿಂಗ್ಸ್‌ಗಳಲ್ಲಿ ಕ್ರಮವಾಗಿ 17 ಮತ್ತು 4 ರನ್ ಗಳಿಸಿ ಔಟಾಗಿದ್ದಾರೆ. ಇನ್ನು ಈ ಮೈದಾನದಲ್ಲಿ ಇದುವರೆಗೆ ಕೇವಲ 4 ಭಾರತೀಯ ಆಟಗಾರರು ಮಾತ್ರ ಶತಕ ಸಿಡಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಹಾಗೂ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು. ಇದೀಗ ಈ ಪಂದ್ಯದ ಮೂಲಕ ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ ಶತಕ ಸಿಡಿಸಿ ಮಿಂಚಿದ್ದಾರೆ.