AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheteshwar Pujara: 100ನೇ ಪಂದ್ಯದಲ್ಲಿ 3 ದಾಖಲೆ ಬರೆದ ಪೂಜಾರ

Cheteshwar Pujara Records: ಈ ಪಂದ್ಯದ ಮೂಲಕ ಚೇತೇಶ್ವರ ಪೂಜಾರ ಮೂರು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಇದರಲ್ಲಿ 2 ವಿಶೇಷ ದಾಖಲೆಯಾದರೆ, ಒಂದು ಬೇಡದ ದಾಖಲೆಯಾಗಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Feb 19, 2023 | 10:09 PM

Share
ದೆಹಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಚೇತೇಶ್ವರ ಪೂಜಾರ ಟೆಸ್ಟ್ ಕೆರಿಯರ್​ನಲ್ಲಿ 100 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದಿದ್ದರು. ಅಲ್ಲದೆ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 13ನೇ ಆಟಗಾರ ಎನಿಸಿಕೊಂಡಿದ್ದರು.

1 / 6
ಇದಲ್ಲದೆ ಈ ಪಂದ್ಯದ ಮೂಲಕ ಚೇತೇಶ್ವರ ಪೂಜಾರ ಮೂರು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಇದರಲ್ಲಿ 2 ವಿಶೇಷ ದಾಖಲೆಯಾದರೆ, ಒಂದು ಬೇಡದ ದಾಖಲೆಯಾಗಿದೆ.

2 / 6
ಚೇತೇಶ್ವರ ಪೂಜಾರ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಇದರೊಂದಿಗೆ 100ನೇ ಟೆಸ್ಟ್ ಪಂದ್ಯದಲ್ಲಿ ಸೊನ್ನೆಗೆ ಔಟಾದ 2ನೇ ಭಾರತೀಯ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ದಿಲೀಪ್ ವೆಂಗ್​ಸರ್ಕಾರ್ ತಮ್ಮ 100ನೇ ಟೆಸ್ಟ್​ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು.

3 / 6
ಇನ್ನು 2ನೇ ಇನಿಂಗ್ಸ್​ನಲ್ಲಿ ಫೋರ್ ಬಾರಿಸುವ ಮೂಲಕ ಚೇತೇಶ್ವರ ಪೂಜಾರ ಟೀಮ್ ಇಂಡಿಯಾ ಪರ ಗೆಲುವಿನ ರನ್ ಬಾರಿಸಿದ್ದರು. ಇದರೊಂದಿಗೆ ಶತಕದ ಪಂದ್ಯದಲ್ಲಿ ಗೆಲುವಿನ ರನ್​ಗಳಿಸಿದ ವಿಶ್ವ 2ನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪೂಜಾರ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು 2006 ರಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ 100ನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ರನ್ ಬಾರಿಸಿ ದಾಖಲೆ ಬರೆದಿದ್ದರು.

4 / 6
ಹಾಗೆಯೇ ಟೆಸ್ಟ್​ ಕ್ರಿಕೆಟ್​ನಲ್ಲಿ ಬೌಲ​ರೊಬ್ಬರ ವಿರುದ್ಧ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ಕೂಡ ಪೂಜಾರ ಪಾಲಾಗಿದೆ. ಈ ಹಿಂದೆ ಈ ದಾಖಲೆ ಶ್ರೀಲಂಕಾದ ಕುಮಾರ ಸಂಗಾಕ್ಕರ ಹೆಸರಿನಲ್ಲಿತ್ತು. ಲಂಕಾ ಬ್ಯಾಟ್ಸ್​ಮನ್​ ಪಾಕಿಸ್ತಾನ್ ಸ್ಪಿನ್ನರ್ ಸಯೀದ್ ಅಜ್ಮಲ್ ವಿರುದ್ಧ ಒಟ್ಟು 531 ರನ್​ ಕಲೆಹಾಕಿದ್ದರು.

5 / 6
ಇದೀಗ ಚೇತೇಶ್ವರ ಪೂಜಾರ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ವಿರುದ್ಧ ಒಟ್ಟು 532 ರನ್​ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಬೌಲರ್​ರೊಬ್ಬರ ವಿರುದ್ಧ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಪೂಜಾರ ತಮ್ಮದಾಗಿಸಿಕೊಂಡರು.

6 / 6
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ