ಹಾಗೆಯೇ ಈ ಶತಕದೊಂದಿಗೆ ಚೇತೇಶ್ವರ ಪೂಜಾರ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 21 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಪ್ರಥಮ ದರ್ಜೆಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ನಾಲ್ಕನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಸುನಿಲ್ ಗವಾಸ್ಕರ್ (25834 ರನ್ಸ್) ಅಗ್ರಸ್ಥಾನದಲ್ಲಿದ್ದು, ಸಚಿನ್ ತೆಂಡೂಲ್ಕರ್ (25396 ರನ್ಸ್) ದ್ವಿತೀಯ ಸ್ಥಾನದಲ್ಲಿದ್ದಾರೆ. ಹಾಗೆಯೇ ರಾಹುಲ್ ದ್ರಾವಿಡ್ (23784 ರನ್ಸ್) ಮೂರನೇ ಸ್ಥಾನದಲ್ಲಿದ್ದಾರೆ. ಇದೀಗ 21 ಸಾವಿರ ರನ್ಗಳೊಂದಿಗೆ ಪೂಜಾರ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.