66ನೇ ಶತಕದೊಂದಿಗೆ ಹಲವು ದಾಖಲೆ ಬರೆದ ಚೇತೇಶ್ವರ ಪೂಜಾರ

|

Updated on: Oct 21, 2024 | 1:31 PM

Cheteshwar Pujara: 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಬಳಿಕ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಚೇತೇಶ್ವರ ಪೂಜಾರ ಇದೀಗ ಕಂಬ್ಯಾಕ್​ ಹಾದಿಯಲ್ಲಿದ್ದಾರೆ. ಇದರ ಪ್ರಯತ್ನವಾಗಿ ಇದೀಗ ರಣಜಿ ಟೂರ್ನಿಯಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಟೀಮ್ ಇಂಡಿಯಾದ ಕದ ತಟ್ಟಿದ್ದಾರೆ.

1 / 6
ಭಾರತ ಟೆಸ್ಟ್ ತಂಡದಿಂದ ಹೊರಬಿದ್ದಿರುವ ಚೇತೇಶ್ವರ ಪೂಜಾರ ದೇಶೀಯ ಅಂಗಳದಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಅದರಲ್ಲೂ ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸುವ ಮೂಲಕ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

2 / 6
ರಾಜ್​ಕೋಟ್​ನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಗ್ರೂಪ್-ಡಿ ಪಂದ್ಯದಲ್ಲಿ ಸೌರಾಷ್ಟ್ರ ಮತ್ತು ಛತ್ತೀಸ್‌ಗಢ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಛತ್ತೀಸ್‌ಗಢ್ 578/7 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಸೌರಾಷ್ಟ್ರ ಪರ ಚೇತೇಶ್ವರ ಪೂಜಾರ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

3 / 6
ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಚೇತೇಶ್ವರ ಪೂಜಾರ 197 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ವಿಶೇಷ ಎಂದರೆ ಇದು ಪೂಜಾರ ಅವರ 66ನೇ ಪ್ರಥಮ ದರ್ಜೆ ಟೆಸ್ಟ್ ಸೆಂಚುರಿ. ಈ ಮೂಲಕ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ಲೆಜೆಂಡ್ ಬ್ರಿಯಾನ್ ಲಾರಾ (65 ಶತಕ) ಅವರನ್ನು ಹಿಂದಿಕ್ಕಿದ್ದಾರೆ.

4 / 6
ಹಾಗೆಯೇ ಈ ಶತಕದೊಂದಿಗೆ ಚೇತೇಶ್ವರ ಪೂಜಾರ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 21 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಪ್ರಥಮ ದರ್ಜೆಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ನಾಲ್ಕನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಸುನಿಲ್ ಗವಾಸ್ಕರ್ (25834 ರನ್ಸ್) ಅಗ್ರಸ್ಥಾನದಲ್ಲಿದ್ದು, ಸಚಿನ್ ತೆಂಡೂಲ್ಕರ್ (25396 ರನ್ಸ್) ದ್ವಿತೀಯ ಸ್ಥಾನದಲ್ಲಿದ್ದಾರೆ. ಹಾಗೆಯೇ ರಾಹುಲ್ ದ್ರಾವಿಡ್ (23784 ರನ್ಸ್) ಮೂರನೇ ಸ್ಥಾನದಲ್ಲಿದ್ದಾರೆ. ಇದೀಗ 21 ಸಾವಿರ ರನ್​ಗಳೊಂದಿಗೆ ಪೂಜಾರ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

5 / 6
ಹಾಗೆಯೇ ಹೆಚ್ಚು ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಮೂರನೇ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ಪೂಜಾರ ಮೂರನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಗವಾಸ್ಕರ್ ಮತ್ತು ಸಚಿನ್ ತೆಂಡೂಲ್ಕರ್ ತಲಾ 81 ಶತಕಗಳೊಂದಿಗೆ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು 68 ಶತಕಗಳೊಂದಿಗೆ ರಾಹುಲ್ ದ್ರಾವಿಡ್ ಎರಡನೇ ಸ್ಥಾನದಲ್ಲಿದ್ದರೆ, ಇದೀಗ 66ನೇ ಶತಕ ಸಿಡಿಸಿ ಪೂಜಾರಾ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

6 / 6
ಇನ್ನು ಈ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಕ್ರೀಸ್ ಕಚ್ಚಿ ಆಡುತ್ತಿದ್ದು, 87 ಓವರ್​ಗಳ ಮುಕ್ತಾಯದ ವೇಳೆಗೆ 246 ಎಸೆತಗಳನ್ನು ಎದುರಿಸಿರುವ ಪೂಜಾರ 15 ಫೋರ್​ಗಳೊಂದಿಗೆ ಅಜೇಯ 138 ರನ್ ಗಳಿಸಿದ್ದಾರೆ. ಈ ಶತಕದ ನೆರವಿನಿಂದ ಸೌರಾಷ್ಟ್ರ ತಂಡವು 3 ವಿಕೆಟ್ ಕಳೆದುಕೊಂಡು 300 ರನ್​ಗಳಿಸಿ ಪ್ರಥಮ ಇನಿಂಗ್ಸ್​ ಮುಂದುವರೆಸಿದೆ.