AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheteshwar Pujara: ದಾಖಲೆಯ ದ್ವಿಶತಕ ಸಿಡಿಸಿದ ಚೇತೇಶ್ವರ ಪೂಜಾರ

Cheteshwar Pujara: ಆರಂಭದಲ್ಲಿ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ್ದ ಚೇತೇಶ್ವರ ಪೂಜಾರ ಆ ಬಳಿಕ ರನ್​ಗಳಿಸುತ್ತಾ ಸಾಗಿದರು. ಅಲ್ಲದೆ 2ನೇ ದಿನದಾಟದ ಮುಕ್ತಾಯದ ವೇಳೆಗೆ 239 ಎಸೆತಗಳಲ್ಲಿ 157 ರನ್ ಬಾರಿಸಿ ಅಜೇಯರಾಗುಳಿದರು.

TV9 Web
| Edited By: |

Updated on: Jan 07, 2024 | 1:36 PM

Share
ರಾಜ್​ಕೋಟ್​ನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಗ್ರೂಪ್-ಎ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದ್ದಾರೆ. ಜಾರ್ಖಂಡ್ ವಿರುದ್ಧದ ಈ ಪಂದ್ಯದಲ್ಲಿ ಸೌರಾಷ್ಟ್ರ ಪರ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪೂಜಾರ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

1 / 6
ಆರಂಭದಲ್ಲಿ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ್ದ ಪೂಜಾರ ಆ ಬಳಿಕ ರನ್​ಗಳಿಸುತ್ತಾ ಸಾಗಿದರು. ಅಲ್ಲದೆ 2ನೇ ದಿನದಾಟದ ಮುಕ್ತಾಯದ ವೇಳೆಗೆ 239 ಎಸೆತಗಳಲ್ಲಿ 157 ರನ್ ಬಾರಿಸಿ ಅಜೇಯರಾಗುಳಿದರು.

2 / 6
ಮೂರನೇ ದಿನದಾಟದ ಆರಂಭದಲ್ಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಪೂಜಾರ 317 ಎಸೆತಗಳಲ್ಲಿ ದ್ವಿಶತಕ ಪೂರೈಸಿದರು. ಈ ದ್ವಿಶತಕದೊಂದಿಗೆ ಫಸ್ಟ್​ ಕ್ಲಾಸ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಡಬಲ್ ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಪೂಜಾರ ನಾಲ್ಕನೇ ಸ್ಥಾನಕ್ಕೇರಿದ್ದಾರೆ.

3 / 6
ಈ ಪಟ್ಟಿಯಲ್ಲಿ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 37 ದ್ವಿಶತಕ ಬಾರಿಸಿರುವ ಆಸ್ಟ್ರೇಲಿಯಾದ ಡಾನ್ ಬ್ರಾಡ್​ಮ್ಯಾನ್ ಅಗ್ರಸ್ಥಾನದಲ್ಲಿದ್ದರೆ, 36 ಡಬಲ್ ಸೆಂಚುರಿ ಸಿಡಿಸಿರುವ ಇಂಗ್ಲೆಂಡ್​ನ ವಾಲಿ ಹ್ಯಾಮಂಡ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಹಾಗೆಯೇ 22 ದ್ವಿಶತಕ ಸಿಡಿಸಿರುವ ಇಂಗ್ಲೆಂಡ್​ನ ಪ್ಯಾಟ್ಸಿ ಹೆಂಡ್ರೆನ್ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

4 / 6
ಇದೀಗ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 17ನೇ ದ್ವಿಶತಕ ಬಾರಿಸುವ ಮೂಲಕ ಚೇತೇಶ್ವರ ಪೂಜಾರ ಟಾಪ್-4 ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಫಸ್ಟ್ ಕ್ಲಾಸ್ ಕ್ರಿಕೆಟ್​ನ ಭಾರತದ ದ್ವಿಶತಕ ವೀರ ಎನಿಸಿಕೊಂಡಿದ್ದಾರೆ.

5 / 6
ಇನ್ನು ಚೇತೇಶ್ವರ ಪೂಜಾರ (243) ಅವರ ಈ ಅಜೇಯ ದ್ವಿಶತಕದ ನೆರವಿನಿಂದ ಸೌರಾಷ್ಟ್ರ ತಂಡವು 4 ವಿಕೆಟ್ ನಷ್ಟಕ್ಕೆ 578 ರನ್​ ಕಲೆಹಾಕಿ ಇನಿಂಗ್ಸ್​ ಡಿಕ್ಲೇರ್ ಮಾಡಿಕೊಂಡಿದೆ. ಈ ಮೂಲಕ ಜಾರ್ಖಂಡ್ ವಿರುದ್ಧ ಮೊದಲ ಇನಿಂಗ್ಸ್​ನಲ್ಲಿ 435 ರನ್​ಗಳ ಮುನ್ನಡೆ ಸಾಧಿಸಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ