Cheteshwar Pujara: 62ನೇ ಶತಕ ಸಿಡಿಸಿ ದಾಖಲೆ ಬರೆದ ಚೇತೇಶ್ವರ ಪೂಜಾರ
Cheteshwar Pujara: ಪ್ರಸ್ತುತ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಚೇತೇಶ್ವರ ಪೂಜಾರ ರಣಜಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಮುಂಬರುವ ಪಂದ್ಯಗಳಿಂದ ವಿರಾಟ್ ಕೊಹ್ಲಿ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.